ಕಳಪೆ ರಸ್ತೆ ಹಾಗೂ ಮೂಲಭೂತ ಸೌಕರ್ಯದ ಕೊರತೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಆನ್‌ಲೈನ್ ಟ್ರಕ್ಕಿಂಗ್ ಪ್ಲಾಟ್‌ಫಾರ್ಮ್ ಬ್ಲಾಕ್‌ಬಕ್ ಕಂಪನಿಯು ಹೊರ ಹೋಗಲು ನಿರ್ಧರಿಸಿದೆ. ಕಂಪನಿಯ ಮುಖ್ಯಸ್ಥರು ಬೆಂಗಳೂರಿನಲ್ಲಿ ಮುಂದುವರೆಯುವುದು ತುಂಬಾ ಕಷ್ಟಕರವಾಗಿದ್ದು, ಹೊರಹೋಗಲು ನಿರ್ಧರಿಸಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಬೆಂಗಳೂರಿನ ಕೆಲವು ಉದ್ಯಮಿಗಳು ರಾಜ್ಯ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದ್ದಾರೆ.
ಈ ಬಗ್ಗೆ ಉದ್ಯಮಿಗಳಾದ ಮೋಹನ್ ದಾಸ್ ಪೈ ಮತ್ತು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್-ಶಾ ಕಳವಳ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಶೀಘ್ರವೇ ಬೆಂಗಳೂರಿನ ರಸ್ತೆಗಳನ್ನು ದುರಸ್ಥಿಗೊಳಿಸುವಂತೆ ಸರ್ಕಾರದ ಬಳಿ ಮನವಿ ಮಾಡಿದ್ದಾರೆ.
ನಗರದ ಐಟಿ ಕಾರಿಡಾರ್‌ಗಳಲ್ಲಿ ಒಂದಾದ ಒಆರ್‌ಆರ್ ಆಗಾಗ್ಗೆ ಸಂಚಾರ ದಟ್ಟಣೆಗೆ ಸಾಕ್ಷಿಯಾಗುತ್ತದೆ. ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನ್‌ದಾಸ್ ಪೈ ಅವರು, ಇದು ಬೆಂಗಳೂರಿನ ಆಡಳಿತದ “ದೊಡ್ಡ ವೈಫಲ್ಯ” ಎಂದು ಟೀಕಿಸಿದ್ದಾರೆ. ಅಲ್ಲದೆ ಈ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಐಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತ ಮಹೇಶ್ವರ ರಾವ್ ಅವರು ಮಧ್ಯಪ್ರವೇಶಿಸಬೇಕು ಎಂದು ಕೋರಿದ್ದಾರೆ.
ಬೆಂಗಳೂರಿನ ಗುಂಡಿಗಳನ್ನು ನವೆಂಬರ್ ಒಳಗೆ ಮುಚ್ಚುವಂತೆ ಗುತ್ತಿಗೆದಾರರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಂತಿಮ ಗಡುವು ನೀಡಿದ್ದಾರೆ. ಆದಷ್ಟು ಬೇಗ ರಸ್ತೆ ಗುಂಡಿಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಕ್ತಿ ನೀಡಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ಬೆಂಗಳೂರಿನಿಂದ ಉದ್ಯಮಿಗಳು ಹೊರ ಹೋಗುವ ಕುರಿತಂತೆ ಪ್ರತಿಪಕ್ಷ ನಾಯಕ ಆರ್. ಅಶೋಕ ಅಸಮಧಾನ ವ್ಯಕ್ತಪಡಿಸಿದ್ದಾರೆ. ರಿಂಗ್ ರಸ್ತೆಯಲ್ಲೂ ವಾಹನ ಚಲಾಯಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…