ದಿವಂಗತ ಬಾಲಚಂದ್ರ ಕಳಗಿಯವರ ಸ್ಮರಣಾರ್ಥವಾಗಿ ಅ.2 ರಂದು ಸ್ವಯಂಪ್ರೇರಿತ ರಕ್ತದಾನ ಶಿಬಿರವು ಸಂಪಾಜೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಮಯ ಸರಿಯಾಗಿ 9.30ಕ್ಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಜಿಲ್ಲಾ ಪಂಚಾಯತ್ ಕೊಡಗು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಡಿಕೇರಿ ಕೊಡಗು, ಕೊಡಗು ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ, ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಮಡಿಕೇರಿ ಕೊಡಗು, ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆ ಕೊಡಗು, ಗ್ರಾಮ ಪಂಚಾಯತ್ ಸಂಪಾಜೆ, ಪೆರಾಜೆ, ಚೆಂಬು, ಮದೆನಾಡು, ಪಯಸ್ವಿನಿ ಸಹಕಾರಿ ಸಂಘ ಸಂಪಾಜೆ ಹಾಗೂ ಸಾರ್ವಜನಿಕ ಸಹಭಾಗಿತ್ವದೊಂದಿಗೆ ಬಾಲಚಂದ್ರ ಕಳಗಿ ಅಭಿಮಾನಿ ಬಳಗ ಸಂಪಾಜೆ ಕೊಡಗು ಇವರ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡಯಲಿದೆ.
ಸಂಪಾಜೆ ಗ್ರಾಮದ ಸಮಗ್ರ ಅಭಿವೃದ್ಧಿಯಲ್ಲಿ ಮುಂಚೂಣಿಯ ಪಾತ್ರ ವಹಿಸಿ ಕೊಡಗು ಜಿಲ್ಲೆಯಲ್ಲಿ ರಾಜಕೀಯವಾಗಿ ಶರವೇಗದಲ್ಲಿ ಬೆಳೆದು, ಸಾಮಾನ್ಯ ಬಿಜೆಪಿ ಕಾರ್ಯಕರ್ತನಾಗಿ, ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಕೊಡಗು ಬಿಜೆಪಿಯ ಜಿಲ್ಲಾ ಕಾರ್ಯದರ್ಶಿಯಾಗಿ ಭಾರೀ ಜನ್ನಮನ್ನಣೆ ಗಳಿಸಿ, ಸ್ಥಳೀಯ ಮಟ್ಟದಲ್ಲಿ ತನ್ನ ಕೆಲಸಗಳಿಂದ ರಾಜ್ಯ ಬಿಜೆಪಿ ನಾಯಕರ ಗಮನ ಸೆಳೆದು ರಾಷ್ಟ್ರ ಮಟ್ಟದಲ್ಲಿ ನಮ್ಮ ಗ್ರಾಮವನ್ನ ಗುರುತಿಸಿ ಸಂಪಾಜೆ ಗ್ರಾಮಕ್ಕೆ ರಾಷ್ಟ್ರ ಪ್ರಶಸ್ತಿಯನ್ನು ಪಡೆಯುವಲ್ಲಿ ಯಶಸ್ವಿಯಾದ ಅಭಿವೃದ್ಧಿಯ ಹರಿಕಾರ ದಿವಂಗತ ಬಾಲಚಂದ್ರ ಕಳಗಿಯವರ ಸ್ಮರಣಾರ್ಥವಾಗಿ ಈ ಕಾರ್ಯಕ್ರಮ ನಡೆಯಲಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement