ಬಾಳಿಲ ಮುಪ್ಪೇರ್ಯ ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿಯಿಂದ ಜನಾನುರಾಗಿ ವೈದ್ಯ ಡಾ.ಪಿಜಿಎಸ್ ಪ್ರಕಾಶ್ ಅವರ ಸಂಸ್ಮರಣೆ ಹಾಗೂ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಪ್ರಾದೇಶಿಕ ರಕ್ತಪೂರಣ ಕೇಂದ್ರದ ಸಹಭಾಗಿತ್ವದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಠಾರದಲ್ಲಿ ಭಾನುವಾರ ನಡೆಯಿತು.
ಕಾರ್ಯಕ್ರಮವನ್ನು ಡಾ.ಶಶಿಧರ ಪಡೀಲು ದೀಪಬೆಳಗಿಸಿ ಉದ್ಘಾಟಿಸಿ , ಡಾ.ಪಿಜಿಎಸ್ ಪ್ರಕಾಶ್ ಅವರ ಜನಸೇವೆ ಹಾಗೂ ಜನಪರವಾದ ಕಾಳಜಿಯ ಬಗ್ಗೆ ಮಾತನಾಡಿದರು. ಸಭಾಧ್ಯಕ್ಷತೆಯನ್ನು ಬಾಳಿಲ ಮುಪ್ಪೇರ್ಯ ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಗೌರವಾಧ್ಯಕ್ಷ ರಾಧಾಕೃಷ್ಣ ಯು ವಹಿಸಿದ್ದರು. ಹಿರಿಯ ತರಬೇತಿ ಅಧಿಕಾರಿ ಮೋಹನಚಂದ್ರ ಪಂಜಿಗಾರು ಸಂಸ್ಮರಣಾ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಲತಾಶಂಕರಿ , ದೇವತಾರಾಧನಾ ಸಮಿತಿ ಅಧ್ಯಕ್ಷ ಸೇಸಪ್ಪ ಪರವ, ಮಹಿಳಾ ಸಮಿತಿ ಅಧ್ಯಕ್ಷೆ ಕಮಲ ಉಪಸ್ಥಿತರಿದ್ದರು.
ಯಶೋಧಾ ಪೊಸೋಡು ಪ್ರಾರ್ಥಿಸಿದರು. ಸುಧಾಕರ ರೈ ಸ್ವಾಗತಿಸಿದರು. ಜಾಹ್ನವಿ ಕಾಂಚೋಡು ವಂದಿಸಿದರು. ರಾಜೇಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…