ಅ.2ರಂದು ವಿಖಾಯ ರಕ್ತದಾನ ಅಭಿಯಾನ ಸಮಾರೋಪ ಸಮಾರಂಭ

October 1, 2020
12:22 PM

ಎಸ್ ಕೆ ಎಸ್ ಎಸ್ ಎಫ್ ವಿಖಾಯ ರಕ್ತದಾನಿ ಬಳಗದ ವತಿಯಿಂದ ದ.ಕ ಜಿಲ್ಲೆಯಲ್ಲಿ ನಡೆಯುತ್ತಿರುವ ರಕ್ತದಾನ ಶಿಬಿರ ಅಭಿಯಾನದ ಸಮಾರೋಪ ಸಮಾರಂಭ   ಅ. 2 ರ ಗಾಂಧಿ ಜಯಂತಿಯಂದು ಮಂಗಳೂರಿನ ಜಮೀಯತುಲ್ ಫಲಾಹ್ ಸಭಾಂಗಣದಲ್ಲಿ ಜರುಗಲಿದೆ ಎಂದು ದ.ಕ ಜಿಲ್ಲಾ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಸಮಿತಿ ತಿಳಿಸಿದೆ.

ಬೆಳಿಗ್ಗೆ 9 ಗಂಟೆಗೆ ಪ್ಲಾಸ್ಮಾ ಹಾಗೂ ರಕ್ತದಾನಿಗಳ ಸಂಗಮ ನಡೆಯಲಿದ್ದು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಹಾಗೂ ಏನಪೊಯ ಬ್ಲಡ್ ಬ್ಯಾಂಕ್ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.
ಮದ್ಯಾಹ್ನ 2:30 ಗಂಟೆಗೆ ರಕ್ತದಾನ ಅಭಿಯಾನದ ಸಮಾರೋಪ ಸಮಾರಂಭ ನಡೆಯಲಿದ್ದು, ದ.ಕ ಜಿಲ್ಲಾ ಎಸ್ ಕೆ ಎಸ್ ಎಸ್ ಎಫ್ ಅಧ್ಯಕ್ಷರಾದ ಸಯ್ಯಿದ್ ಅಮೀರ್ ತಂಙಳ್ ಕಿನ್ಯ ದುಃವಾ ನೇತೃತ್ವ ನೀಡಲಿದ್ದಾರೆ. ಶೈಖುನಾ ಮಿತ್ತಬೈಲು ಉಸ್ತಾದರ ಸುಪುತ್ರ ಬಹು ಇರ್ಷಾದ್ ದಾರಿಮಿ ಅಲ್ ಜಝ್ಹರಿ ಕಾರ್ಯಕ್ರಮವನ್ನು ಉಧ್ಘಾಟಿಸಲಿದ್ದಾರೆ.‍ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಜಿಲ್ಲಾ ಚೇರ್ಮನ್ ಸಯ್ಯಿದ್ ಇಸ್ಮಾಯಿಲ್ ತಂಙಳ್ ರವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾಧಿಕಾರಿ ಡಾಟರಾಜೇಂದ್ರ ಕೆ.ವಿ.ಭಾಗವಹಿಸಲಿದ್ದಾರೆ.

ದ.ಕ,ಜಿಲ್ಲಾ ಪಂಚಾಯತ್ ಸಿ.ಇ. ಓ ಡಾ, ಸೆಲ್ವಮಣಿ, ಶಾಸಕರಾದ ಯು.ಟಿ ಖಾದರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ ರಾಮಚಂದ್ರ ಬಾಯರಿ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಎಸ್ ಕೆ ಎಸ್ ಎಸ್ ಎಫ್ ವಿಖಾಯ ದ.ಕ.ಜಿಲ್ಲಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror