ಎಸ್ ಕೆ ಎಸ್ ಎಸ್ ಎಫ್ ವಿಖಾಯ ರಕ್ತದಾನಿ ಬಳಗದ ವತಿಯಿಂದ ದ.ಕ ಜಿಲ್ಲೆಯಲ್ಲಿ ನಡೆಯುತ್ತಿರುವ ರಕ್ತದಾನ ಶಿಬಿರ ಅಭಿಯಾನದ ಸಮಾರೋಪ ಸಮಾರಂಭ ಅ. 2 ರ ಗಾಂಧಿ ಜಯಂತಿಯಂದು ಮಂಗಳೂರಿನ ಜಮೀಯತುಲ್ ಫಲಾಹ್ ಸಭಾಂಗಣದಲ್ಲಿ ಜರುಗಲಿದೆ ಎಂದು ದ.ಕ ಜಿಲ್ಲಾ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಸಮಿತಿ ತಿಳಿಸಿದೆ.
ಬೆಳಿಗ್ಗೆ 9 ಗಂಟೆಗೆ ಪ್ಲಾಸ್ಮಾ ಹಾಗೂ ರಕ್ತದಾನಿಗಳ ಸಂಗಮ ನಡೆಯಲಿದ್ದು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಹಾಗೂ ಏನಪೊಯ ಬ್ಲಡ್ ಬ್ಯಾಂಕ್ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.
ಮದ್ಯಾಹ್ನ 2:30 ಗಂಟೆಗೆ ರಕ್ತದಾನ ಅಭಿಯಾನದ ಸಮಾರೋಪ ಸಮಾರಂಭ ನಡೆಯಲಿದ್ದು, ದ.ಕ ಜಿಲ್ಲಾ ಎಸ್ ಕೆ ಎಸ್ ಎಸ್ ಎಫ್ ಅಧ್ಯಕ್ಷರಾದ ಸಯ್ಯಿದ್ ಅಮೀರ್ ತಂಙಳ್ ಕಿನ್ಯ ದುಃವಾ ನೇತೃತ್ವ ನೀಡಲಿದ್ದಾರೆ. ಶೈಖುನಾ ಮಿತ್ತಬೈಲು ಉಸ್ತಾದರ ಸುಪುತ್ರ ಬಹು ಇರ್ಷಾದ್ ದಾರಿಮಿ ಅಲ್ ಜಝ್ಹರಿ ಕಾರ್ಯಕ್ರಮವನ್ನು ಉಧ್ಘಾಟಿಸಲಿದ್ದಾರೆ. ಎಸ್ ಕೆ ಎಸ್ ಎಸ್ ಎಫ್ ವಿಖಾಯ ಜಿಲ್ಲಾ ಚೇರ್ಮನ್ ಸಯ್ಯಿದ್ ಇಸ್ಮಾಯಿಲ್ ತಂಙಳ್ ರವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾಧಿಕಾರಿ ಡಾಟರಾಜೇಂದ್ರ ಕೆ.ವಿ.ಭಾಗವಹಿಸಲಿದ್ದಾರೆ.
ದ.ಕ,ಜಿಲ್ಲಾ ಪಂಚಾಯತ್ ಸಿ.ಇ. ಓ ಡಾ, ಸೆಲ್ವಮಣಿ, ಶಾಸಕರಾದ ಯು.ಟಿ ಖಾದರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ ರಾಮಚಂದ್ರ ಬಾಯರಿ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಎಸ್ ಕೆ ಎಸ್ ಎಸ್ ಎಫ್ ವಿಖಾಯ ದ.ಕ.ಜಿಲ್ಲಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…