ಬಸ್ಸಿನಲ್ಲಿ ಲೇಡೀಸ್‌ ಸೀಟಲ್ಲಿ ಕುಳಿತು ಪ್ರಯಾಣಿಸಿದರೆ ದಂಡ ಗ್ಯಾರಂಟಿ….! |

Advertisement

ಬೆಂಗಳೂರಿನಲ್ಲಿ  ಬಿಎಂಟಿಸಿ (BMTC) ಬಸ್ಸಿನಲ್ಲಿ ಇನ್ನು ಮುಂದೆ ಲೇಡಿಸ್ ಸೀಟ್‍ನಲ್ಲಿ ಕುಳಿತು ಪ್ರಯಾಣಿಸಿದರೆ ದಂಡ ಬೀಳಲಿದೆ. ಈಗಾಗಲೇ 119 ಪುರುಷ ಪ್ರಯಾಣಿಕರಿಗೆ ಮಹಿಳೆಯರ ರಿಸರ್ವ್ ಸೀಟ್ ಬಳಕೆ ಮಾಡಿದಕ್ಕಾಗಿ 11,900 ರೂಪಾಯಿಗಳನ್ನು ಮೋಟಾರು ವಾಹನ ಕಾಯ್ದೆ 1988ರ ಕಲಂ 177 ಮತ್ತು 94ರ ಪ್ರಕಾರ ದಂಡ ವಿಧಿಸಲಾಗಿದೆ.

Advertisement

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್‍ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆಗಸ್ಟ್‌ನಲ್ಲಿ 2,744 ಪ್ರಯಾಣಿಕರಿಂದ 4.62 ಲಕ್ಷ ರೂಪಾಯಿಗಳನ್ನು ದಂಡದ ಮೂಲಕ ಸಂಗ್ರಹಿಸಿದೆ. ಬಿಎಂಟಿಸಿ ಬಸ್‍ನಲ್ಲಿ ಟಿಕೆಟ್ ಪಡೆಯದೇ ಪ್ರಯಾಣಿಸುತ್ತಿದ್ದ ಹಾಗೂ ಸಂಸ್ಥೆಯ ಸಾರಿಗೆ ಆದಾಯ ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಸಂಸ್ಥೆಯ ತನಿಖಾ ತಂಡ ನಗರದಾದ್ಯಂತ ಆಗಸ್ಟ್‌ನಲ್ಲಿ 18,972 ಟ್ರಿಪ್‍ಗಳಲ್ಲಿ ತಪಾಸಣೆ ನಡೆಸಿತ್ತು. ಇದರಲ್ಲಿ 2,625 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ ಅವರಿಂದ ಒಟ್ಟು 4.50 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದೆ.

Advertisement
Advertisement
Advertisement

ಟಿಕೆಟ್ ರಹಿತ ಪ್ರಯಾಣಿಕರು ಸಂಚಾರ ಮಾಡುತ್ತಿದ್ದ ಬಸ್‍ಗಳಲ್ಲಿ ಕರ್ತವ್ಯ ನಿರ್ಲಕ್ಷ್ಯ ಆಧಾರದ ಮೇಲೆ ನಿರ್ವಾಹಕರಗಳ ವಿರುದ್ಧವು ಕೂಡ 1,430 ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಮಹಿಳೆಯರಿಗಾಗಿ ಮೀಸಲಿರಿಸಿದ್ದ ಸೀಟ್‍ಗಳಲ್ಲಿ ಕೂತು ಚೆಕ್ಕಿಂಗ್ ಸ್ಕ್ವಾಡ್ ಕೈಯಲ್ಲಿ ಸಿಕ್ಕಿ ಹಾಕಿಕೊಂಡವರ ಸಂಖ್ಯೆ ಕೂಡ ಕಡಿಮೆ ಇಲ್ಲ. ನಗರದಾದ್ಯಂತ ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ ಪುರುಷ ಪ್ರಯಾಣಿಕರಿಗೂ ದಂಡದ ಬಿಸಿ ತಟ್ಟಿದೆ.

 

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಬಸ್ಸಿನಲ್ಲಿ ಲೇಡೀಸ್‌ ಸೀಟಲ್ಲಿ ಕುಳಿತು ಪ್ರಯಾಣಿಸಿದರೆ ದಂಡ ಗ್ಯಾರಂಟಿ….! |"

Leave a comment

Your email address will not be published.


*