ಕಾಂತಾರ ಸಿನಿಮಾದ ಸಕ್ಸಸ್ ನಂತರ ಮತ್ತೆ ದೈವದ ಕಥೆಯೊಂದು ತೆರೆಗೆ ಬರಲು ಸಿದ್ಧವಾಗಿದೆ. ಕನ್ನಡದ ಸಿನಿಮಾಗಳು ವಿಶ್ವದೆಲ್ಲೆಡೆ ಸದ್ದು ಮಾಡ್ತಿರೋದನ್ನ ನೋಡಿ, ಪರಭಾಷಿಕರು ಕನ್ನಡದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಾಲಿವುಡ್ ನಟ ಕಬೀರ್ ಬೇಡಿ ಒಂದು ಹೆಜ್ಜೆ ಹೋಗಿ, ಕನ್ನಡದ ‘ಕೊರಗಜ್ಜ’ ಚಿತ್ರದಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದಾರೆ.
ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಸಿನಿಮಾದಲ್ಲಿ ಬರುವ ಉದ್ಯಾವರ ಅರಸರ ಪಾತ್ರವನ್ನು ಕಬೀರ್ ಬೇಡಿ ನಟಿಸಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಅವರು ಕನ್ನಡ ಚಿತ್ರದಲ್ಲಿ ನಟಿಸಿದ್ದಾರೆ. ನಿರ್ದೇಶಕರ ಕೆಲಸವನ್ನು ಅವರು ನಟ ಕಬೀರ್ ಮೆಚ್ಚಿದ್ದಾರೆ. ತಮ್ಮ ಪಾತ್ರಕ್ಕೆ ತಾವೇ ಧ್ವನಿ ನೀಡಿದ್ದಾರೆ.
ಕಬೀರ್ ಬೇಡ ಅವರು ತಮ್ಮ ಪಾತ್ರಕ್ಕೆ ತಾವೇ ಡಬ್ಬಿಂಗ್ ಮಾಡುತ್ತೇನೆ ಎಂದು ಶೂಟಿಂಗ್ ಸಂದರ್ಭದಲ್ಲಿ ನಿರ್ದೇಶಕರಿಗೆ ಹೇಳಿದ್ದರು. ಆದರೆ ಅವರ ಮಾತನ್ನು ಒಪ್ಪುವುದು ನಿರ್ದೇಶಕ ಸುಧೀರ್ ಅತ್ತಾವರ್ ಅವರಿಗೆ ಅಷ್ಟು ಸುಲಭದಲ್ಲಿ ಸಾಧ್ಯವಿರಲಿಲ್ಲ. ಯಾವ, ಬಾಲಿವುಡ್, ಹಾಲಿವುಡ್, ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದ ನಟ ಏಕಾಏಕಿ ದಕ್ಷಿಣ ಭಾರತದಲ್ಲಿ ಕನ್ನಡ, ತುಳು, ಸೊಗಡನ್ನು ಅರಿತು ಕೊರಗಜ್ಜ ಸಿನಿಮಾಗೆ ಡಬ್ಬಿಂಗ್ ಸಿನಿಮಾಗೆ ಸಾಥ್ ನೀಡಿದೆ. ಮುಂಬೈ ಸ್ಟುಡಿಯೋದಲ್ಲಿ 2-3 ಬಾರಿ ಸಂಭಾಷಣೆಯನ್ನು ಒಪ್ಪಿಸುತ್ತಾ ಡಬ್ಬಿಂಗ್ ನಡೆಸುತ್ತಿದ್ದಾರೆ.
ಸುಧೀರ್ ನಿರ್ದೇಶನದ ಸಿನಿಮಾ ನಟಿ ಭವ್ಯ ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಾಲ್ಕೈದು ಇಟ್ಟುಕೊಂಡು ಸಿನಿಮಾವನ್ನು ಶೂಟ್ ಮಾಡಿದ್ದಾರೆ. ಭಿನ್ನ ಕಥೆಯನ್ನ ತೆರೆಗೆ ತರಲು ಚಿತ್ರತಂಡ ಸಜ್ಜಾಗಿದ್ದಾರೆ. ಸದ್ಯದಲ್ಲೇ ಈ ಕುರಿತು ಅಪ್‌ಡೇಟ್ ಸಿಗಲಿದೆ
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…