ಮೈಸೂರು ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಈ ಬಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ದಸರಾ ಮಹೋತ್ಸವ ಸಮಿತಿ ಹಾಗೂ ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದ ಸಹಯೋಗದಲ್ಲಿ ಸೆ.22 ರಿಂದ ಅಕ್ಟೋಬರ್ 1 ರವರೆಗೆ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಮಾನಸ ತಿಳಿಸಿದ್ದಾರೆ. ಈ ಬಾರಿ ಹಿಂದೆಂದಿಗಿಂತಲೂ ವಿಭಿನ್ನವಾಗಿ ಪುಸ್ತಕ ಪ್ರದರ್ಶನ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮೇಳವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ ಉದ್ಘಾಟನೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

