ಆಯುರ್ವೇದ ಪದ್ಧತಿ ಬಗ್ಗೆ ನಂಬಿಕೆ ಮತ್ತು ವಿಶ್ವಾಸ ಹೆಚ್ಚಾಗಬೇಕು. ನಮ್ಮನ್ನು ನಾವು ತಿಳಿದುಕೊಂಡು ನಮಗೆ ಸೂಕ್ತವಾದ ಪೌಷ್ಠಿಕ ಆಹಾರವನ್ನು ಸೇವಿಸಬೇಕು. ಆಹಾರವೇ ಔಷಧಿಯಾಗಬೇಕು ಅಲ್ಲದೆ ಔಷಧಿಯೇ ಆಹಾರವಾಗಬಾರದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಉಡುಪಿ ಜಿಲ್ಲಾಉಸ್ತುವಾರಿ ಸಚಿವ ಎಸ್. ಅಂಗಾರ ಮಾತನಾಡಿ, ಧರ್ಮದ ನೆಲೆಯಲ್ಲಿ ನಾವು ಕರ್ಮ ಮಾಡಿ ಗೌರವಯುತ ಜೀವನ ನಡೆಸಬೇಕು. ಪ್ರಗತಿಯ ಹೆಸರಿನಲ್ಲಿ ಪ್ರಕೃತಿಯಿಂದ ನಾವು ವಿಮುಖರಾಗಿರುವುದೇ ಹೆಚ್ಚಿನ ರೋಗ ರುಜಿನಗಳಿಗೆ ಕಾರಣವಾಗಿದೆ. ಯಾವುದೇ ಪಾಶ್ರ್ವಪರಿಣಾಮಗಳಿಲ್ಲದ ಆಯುರ್ವೇದ ಪದ್ಧತಿಯನ್ನೆ ನಾವು ಬಳಸಬೇಕು ಎಂದು ಅವರು ಕಿವಿಮಾತು ಹೇಳಿದರು. ಡಾ. ಗಿರಿಧರಕಜೆ ಅವರ ಆಯುರ್ವೇದ ಚಿಕಿತ್ಸಾ ಪದ್ಧತಿಯ ಶುಶ್ರೂಷೆಯಿಂದ ತಾನು ಕೊರೊನಾದಿಂದ ಮುಕ್ತಿ ಪಡೆದಿರುವುದಾಗಿ ಸಚಿವರು ತಿಳಿಸಿದರು.
ಪ್ರಜಾವಾಣಿ ಪತ್ರಿಕೆಯ ಪ್ರಧಾನ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಮಾತನಾಡಿ, ಆಯುರ್ವೇದ ನಮ್ಮಜೀವನ ಪದ್ಧತಿಯಾಗಬೇಕು. ಆಯುರ್ವೇದ ಪದ್ಧತಿಯಿಂದ ನಮ್ಮಆರೋಗ್ಯ, ಆಯುಷ್ಯ ಮತ್ತುಆನಂದ ವೃದ್ಧಿಯಾಗಿ ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸಬಹುದು. ಆದರೆ ಇಂದಿನ ಬದಲಾದ ಆಧುನಿಕ ಜೀವನ ಶೈಲಿಯಲ್ಲಿ ನಾವು ಹಗಲು ಮಾಡುವ ಕೆಲಸವನ್ನು ರಾತ್ರಿ ಮಾಡುತ್ತೇವೆ. ರಾತ್ರಿ ಮಾಡುವ ಕೆಲಸವನ್ನು ಹಗಲು ಮಾಡುತ್ತೇವೆ. ಪ್ರಕೃತಿಯಿಂದ ದೂರವಾದಷ್ಟು ನಮ್ಮಲ್ಲಿ ವಾತ, ಪಿತ್ತ, ಕಫಗಳು ಜಾಸ್ತಿಯಾಗುತ್ತವೆ. ಆಹಾರ ಮತ್ತುಔಷಧಿ ಬೇರೆ ಬೇರೆಅಲ್ಲ ಒಂದೇ ಆಗಿರಬೇಕು ಎಂದು ಅವರು ಹೇಳಿದರು. ಟಿ.ವಿ. 9 ವಾಹಿನಿಯ ಪ್ರಧಾನ ನಿರೂಪಕ ರಂಗನಾಥ್ ಭಾರಧ್ವಾಜ್ ಮಾತನಾಡಿ ಸ್ವಚ್ಛ ಭಾರತ ನಿರ್ಮಾಣದ ಆಶಯದಂತೆ ಸ್ವಸ್ಥ ಬಾರತವೂ ನಮ್ಮಗುರಿಯಾಗಬೇಕು. ಮನೆಯ ಹಿತ್ತಲಲ್ಲಿರುವ ಗಿಡಮೂಲಿಕೆಗಳು ಕೂಡಾ ಔಷಧೀಯ ಗುಣ ಹೊಂದಿದ್ದು ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಮ್ಮ ಮನಸ್ಸುಗಳು ಸದಾಜಾಗೃತವಾಗಿ, ಕಲ್ಮಶ ರಹಿತವಾಗಿದ್ದು, ಮಾನವೀಯ ಸಂಬಂಧಗಳೊಂದಿಗೆ ಜೀವನ ಮೌಲ್ಯಗಳನ್ನು ಉಳಿಸಿ, ಬೆಳೆಸಿದಾಗ ಆರೋಗ್ಯವಂತರಾಗಲು ಸಾಧ್ಯ. ಯೋಗಕ್ಕೆ ದೊರಕಿದಷ್ಟು ಮಹತ್ವ ಮತ್ತು ಪ್ರಚಾರ ಆಯುರ್ವೇದಕ್ಕೂ ಸಿಗಬೇಕು ಎಂದುಅವರು ಹೇಳಿದರು. “ಪ್ರಕೃತಿ” ಕೃತಿಯ ಲೇಖಕ ಡಾ. ಗಿರಿಧರಕಜೆ ಪುಸ್ತಕದ ಬಗ್ಗೆ ಸವಿವರ ಮಾಹಿತಿ ನೀಡಿದರು. ಸೆಲ್ಕೊ ಸಂಸ್ಥೆಯ ಸಿ.ಇ.ಒ. ಮೋಹನ ಭಾಸ್ಕರ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಗೋವಿಂದಪ್ರಸಾದ್ ಕಜೆ ಸ್ವಾಗತಿಸಿದರು. ಶ್ರೀನಿವಾಸರಾವ್ ಧರ್ಮಸ್ಥಳ ವಂದಿಸಿದರು.12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…