ಕುಂತೂರು ಮಾರ್ ಇವನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ 4 ಸೆಮಿಸ್ಟರ್ ನ ವಿದ್ಯಾರ್ಥಿನಿ, ಯುವ ಕವಯತ್ರಿ ಸುಪ್ರೀತಾ ಚರಣ್ ಪಾಲಪ್ಪೆ ಕಡಬ (ಸೀತಾಲಕ್ಷ್ಮಿ) ರಚಿಸಿದ `ನನ್ನೊಳಗಿನ ನಾನು’ ಎಂಬ ಕವನ ಸಂಕಲನ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿತು.
ವಂ. ಬಿಷಪ್ ಡಾ. ಮಾರ್ ಮಕಾರಿಯೋಸ್ ಅವರ ಸಮ್ಮುಖದಲ್ಲಿ ಸಂಸ್ಥೆಯ ವ್ಯವಸ್ಥಾಪಕ ಡಾ. ಎಲ್ದೊ ಪುತ್ತನ್ ಕಂಡತ್ತಿಲ್, ಕಡಬ ಸೈಂಟ್ ಆನ್ಸ್ ಸಂಸ್ಥೆಗಳ ಸಂಚಾಲಕ ಫಾ. ಅರುಣ್ ವಿಲ್ಸನ್ ಲೋಬೋ ಅವರು ಪುಸ್ತಕ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಕವಿಯತ್ರಿ ಸುಪ್ರಿತಾ ಚರಣ್ ಪಾಲಪ್ಪೆ ಕಡಬ ಮಾತನಾಡಿ, ಈ ಕವನ ಸಂಕಲನ ಬಿಡುಗಡೆಗೊಂಡಿರುವುದು ನನಗೆ ಹೆಮ್ಮೆಯ ವಿಚಾರವಾಗಿದೆ. ಯುವ ಬರಹಗಾರರು ಪುಸ್ತಕವನ್ನು ಕೊಂಡು ಓದಿ ಪ್ರೋತ್ಸಾಹಿಸಿ, ಅದು ನಮಗೆ ಸ್ಫೂರ್ತಿಯಾಗಲಿದೆ ಎಂದ ಅವರು ಪುಸ್ತಕದ ಹಿಂದೆ ಪರಿಶ್ರಮಿಸಿದವರಿಗೆ ನಾನು ಅಭಾರಿಯಾಗಿರುತ್ತೇನೆಂದು ಹೇಳಿದರು. ವೇದಿಕೆಯಲ್ಲಿ ಪ್ರಾಂಶುಪಾಲೆ ಉಷಾ ಎಂ.ಎಲ್ ಹಾಗೂ ಉಪನ್ಯಾಸಕ ವೃಂದ ಉಪಸ್ಥಿತರಿದ್ದರು.
ಇದೇ ವೇಳೆ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಬಿ.ಎಡ್ ಪಠ್ಯಕ್ರಮದ ದ್ವಿತೀಯ ಸೆಮಿಸ್ಟರ್‌ಗೆ ಅನುಗುಣವಾಗಿ ಹಿಂದಿ ಶಿಕ್ಷಣ ಪದ್ಧತಿ ಎಂಬ ಪಠ್ಯ ಪುಸ್ತಕವನ್ನು ಕುಂತೂರು ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ರಘುನಂದನ .ಕೆ ಅವರು ಬರೆದ ಪಠ್ಯ ಪುಸ್ತಕವನ್ನು ಕಾಲೇಜಿನ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.