ಕೃಷಿ ಹೊರತುಪಡಿಸಿ, ವಾಣಿಜ್ಯ, ಕೈಗಾರಿಕೆ ಹಾಗೂ ಗಣಿಗಾರಿಕೆ ಸಂಬಂಧಿಸಿದ ಸ್ಥಳಗಳಲ್ಲಿ ಕೊಳವೆ ಬಾವಿ ಕೊರೆದು ಅಂತರ್ಜಲ ಬಳಕೆ ಮಾಡಲು, ಕಡ್ಡಾಯವಾಗಿ ಜಿಲ್ಲಾ ಅಂರ್ತಜಲ ಸಮಿತಿಯಿಂದ ಅನುಮತಿ ಪಡೆಯಬೇಕು ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಅಂರ್ತಜಲ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅನುಪಯುಕ್ತ ಹಾಗೂ ವಿಫಲ ಕೊಳವೆ ಬಾವಿಗಳನ್ನು ಮುಚ್ಚಲಾಗಿದೆಯೇ ಎಂಬುದರ ಬಗ್ಗೆ ಅಧಿಕಾರಿಗಳು ತಪಾಸಣೆ ನಡೆಸಬೇಕು. ವಿಫಲ ಕೊಳವೆ ಬಾವಿಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚಲು ಕ್ರಮ ಕೈಗೊಳ್ಳಬೇಕು. ರೈತರಿಗೆ ಈ ಬಗ್ಗೆ ತಿಳುವಳಿಕೆ ನೀಡುವಂತೆ ಅವರು ತಿಳಿಸಿದ್ದಾರೆ.
5G ಮತ್ತು 6G ಮೊಬೈಲ್ ಸಂವಹನಕ್ಕಾಗಿ ಸಕ್ರಿಯ ಮತ್ತು ನಿಷ್ಕ್ರಿಯ ಆಂಟೆನಾ ವ್ಯವಸ್ಥೆಗಳಲ್ಲಿ…
ಅಡಿಕೆಯ ಬಗ್ಗೆ WHO ವರದಿಯನ್ನು ಸರ್ಕಾರ ನೇರವಾಗಿ ಪ್ರಶ್ನಿಸಲು ಸಾಧ್ಯವಿದೆಯೇ..?
30.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬೆಂಬಲ ಬೆಲೆಯಲ್ಲಿ ಭತ್ತ, ರಾಗಿ, ಜೋಳ ಮಾರಾಟಕ್ಕೆ ರೈತರ ನೋಂದಣಿ ಕಾರ್ಯವನ್ನು ಶೀಘ್ರವೇ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದೇ 30 ರಿಂದ ಡಿಸೆಂಬರ್ 3 ರವರೆಗೆ ಸಾಧಾರಣ…
ಬೆಂಗಳೂರಲ್ಲಿ ಕಳೆದ ಒಂದು ವಾರದಿಂದ ಮೈಕೊರೆವ ಚಳಿ ಶುರುವಾಗಿದೆ. ಮತ್ತೊಂದೆಡೆ ಚಂಡ ಮಾರುತದ…