ಬ್ರಹ್ಮಾವರ ಸರ್ಕಾರಿ ಡಿಪ್ಲೋಮಾ ಕೃಷಿ ಕಾಲೇಜನ್ನು ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಎನ್. ಚೆಲುವರಾಯಸ್ವಾಮಿ ಅವರು ಭರವಸೆ ನೀಡಿದ್ದಾರೆ.
ಪುತ್ತೂರಿನಲ್ಲಿ ಆಯೋಜಿಸಲಾದ ಮೈಸೂರು ವಿಭಾಗ ಮಟ್ಟದ ಕೃಷಿಮೇಳದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಬ್ರಹ್ಮಾವರ ಡಿಪ್ಲೋಮಾ ಕೃಷಿ ಕಾಲೇಜನ್ನು ಮೇಲ್ದರ್ಜೆಗೇರಿಸುವುದರಿಂದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಕೃಷಿ ಶಿಕ್ಷಣ ಹಾಗೂ ಸಂಶೋಧನಾ ಅವಕಾಶಗಳು ದೊರೆಯಲಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಂಜುನಾಥ ಭಂಡಾರಿ ಅವರು ಬ್ರಹ್ಮಾವರ ಸರ್ಕಾರಿ ಕೃಷಿ ಕಾಲೇಜಿನ ಮೂಲಸೌಕರ್ಯ ಹಾಗೂ ಶೈಕ್ಷಣಿಕ ಪರಿಸ್ಥಿತಿಗಳ ಕುರಿತು ಸಚಿವರ ಗಮನಕ್ಕೆ ತಂದಿದ್ದು, ಇದಕ್ಕೆ ಸಚಿವ ಎನ್. ಚೆಲುವರಾಯಸ್ವಾಮಿ ಸಕಾರಾತ್ಮಕ ಸ್ಪಂದನೆ ನೀಡಿರುವುದು ಕಾಲೇಜಿನ ಅಭಿವೃದ್ಧಿಗೆ ಹೊಸ ನಿರೀಕ್ಷೆ ಮೂಡಿಸಿದೆ ಎಂದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

