#BrahmaMuhurta |ಬ್ರಾಹ್ಮೀ ಮುಹೂರ್ತ ವಿಚಾರ ಧಾರೆ | ರಾತ್ರಿಯ ಅಂತಿಮ ಪ್ರಹರವೇ ಬ್ರಾಹ್ಮೀ ಮುಹೂರ್ತ

July 20, 2023
9:13 PM
ಬ್ರಹ್ಮಮುಹೂರ್ತದಲ್ಲಿ ಎದ್ದೇಳುವುದರಿಂದ ಶರೀರದ ಸೌಂದರ್ಯ, ಬಲ, ವಿದ್ಯೆ, ಬುದ್ಧಿ ಹಾಗೂ ಆರೋಗ್ಯಗಳು ವೃದ್ಧಿಸುತ್ತವೆ. ಈ ಸಮಯದಲ್ಲಿ ನಿದ್ರಿಸುವುದು ಶಾಸ್ತ್ರ ನಿಷಿದ್ಧ. ವೈಜ್ಞಾನಿಕ ದೃಷ್ಟಿಯಿಂದಲೂ ಬ್ರಹ್ಮ ಮುಹೂರ್ತಕ್ಕೆ ವಿಶೇಷವಾದ ಮಹತ್ವವಿದೆ.

ಬ್ರಹ್ಮ ಮುಹೂರ್ತ ಅಥವಾ ಸೂರ್ಯೋದಯದಕ್ಕೆ ಮುಂಚಿನ ರಾತ್ರಿಯ ಕೊನೆಯ ಪಾದದ ಮಹತ್ವವೇನು? ಈ ಸಮಯವು “ಬ್ರಹ್ಮ” ಅಥವಾ ಸೃಷ್ಟಿಕರ್ತನನ್ನಾಗಿಸಿಕೊಳ್ಳುವ ಸಾಧ್ಯತೆಯನ್ನು ನೀಡುತ್ತದೆ ಮತ್ತು ನಿಮ್ಮ ಜೀವನವನ್ನು ನೀವು ಬಯಸಿದ ರೀತಿಯಲ್ಲಿ ನಿರ್ಮಿಸಿಕೊಳ್ಳಬಹುದು.

Advertisement
Advertisement

ಆಯುರ್ವೇದದ ಪ್ರಕಾರ ಮುಂಜಾನೆಯ ನಸುಕಿನ 03:00 ರಿಂದ 06:00 ರವರೆಗಿನ ಸಮಯ. ನಮ್ಮ ಪ್ರಾಚೀನ ಋಷಿಮುನಿಗಳು ಈ ಸಮಯಕ್ಕೆ ವಿಶೇಷವಾದಂತಹ ಸ್ಥಾನಮಾನವನ್ನು ನೀಡಿದ್ದಾರೆ. ಈ ಸಮಯದಲ್ಲಿ ಧ್ಯಾನ, ಯೋಗ, ಜಪ, ಪೂಜೆ ಮುಂತಾದ ಸತ್ಕರ್ಮಗಳನ್ನಾಚರಿಸಿದರೆ ಹೆಚ್ಚು ಫಲಪ್ರದ. ಪ್ರತಿನಿತ್ಯ ಬ್ರಹ್ಮಮುಹೂರ್ತದಲ್ಲಿ ಎದ್ದೇಳುವುದರಿಂದ ಶರೀರದ ಸೌಂದರ್ಯ, ಬಲ, ವಿದ್ಯೆ, ಬುದ್ಧಿ ಹಾಗೂ ಆರೋಗ್ಯಗಳು ವೃದ್ಧಿಸುತ್ತವೆ. ಈ ಸಮಯದಲ್ಲಿ ನಿದ್ರಿಸುವುದು ಶಾಸ್ತ್ರ ನಿಷಿದ್ಧ. ವೈಜ್ಞಾನಿಕ ದೃಷ್ಟಿಯಿಂದಲೂ ಬ್ರಹ್ಮ ಮುಹೂರ್ತಕ್ಕೆ ವಿಶೇಷವಾದ ಮಹತ್ವವಿದೆ.

ಭೂಮಿಯ ಜೊತೆ ಸೂರ್ಯ ಮತ್ತು ಚಂದ್ರನೊಂದಿಗಿನ ಸಂಬಂಧದ ಸ್ವರೂಪ ಹೇಗಿದೆಯೆಂದರೆ ಈ ಸಮಯದಲ್ಲಿ ಮಾನವರಲ್ಲಿ ಕೆಲವು ದೈಹಿಕ ಬದಲಾವಣೆಗಳು ಸಂಭವಿಸುತ್ತವೆ. ನಿಮ್ಮ ದೇಹದಲ್ಲಿನ ತ್ಯಾಜ್ಯ ವಸ್ತುಗಳು, ಉದಾಹರಣೆಗೆ ಮೂತ್ರ ಮುಂತಾದವುಗಳ ಕೆಲವು ಗುಣಗಳು ಆ ಸಮಯದಲ್ಲಿ ಹೊಂದಿರುವ ರೀತಿ ದಿನದ ಬೇರೆ ಯಾವುದೇ ಸಮಯದಲ್ಲಿ ಇರುವುದಿಲ್ಲ ಎಂದು ವೈದ್ಯಕೀಯ ವಿಜ್ಞಾನವು ಕಂಡುಹಿಡಿದಿದೆ.

ಈ ಸಮಯದಲ್ಲಿ ವಾಯುಮಂಡಲ ಮಾಲಿನ್ಯದಿಂದ ವಿಮುಕ್ತವಾಗಿರುತ್ತದೆ. ಆಮ್ಲಜನಕದ ಪ್ರಮಾಣ ಶೇಕಡಾ
೪೧ರಷ್ಟಿರುತ್ತದೆ. ಇದರಿಂದ ನಮ್ಮ ಶ್ವಾಸಕೋಶಗಳು ಶುದ್ಧಿಯಾಗುತ್ತದೆ. ಶುದ್ಧವಾಯುವಿನಿಂದ ಮನಸ್ಸು ಹಾಗೂ ಬುದ್ಧಿ ಆರೋಗ್ಯವಾಗಿರುತ್ತವೆ. ಯಾರು ಬ್ರಹ್ಮ ಮುಹೂರ್ತದಲ್ಲೆದ್ದು ನಡೆಯುತ್ತಾರೋ ಅವರ ಶರೀರದಲ್ಲಿ ಸಂಜೀವಿನೀ ಶಕ್ತಿಯ ಸಂಚಾರವಾಗುತ್ತದೆ ಎಂದು ಆಯುರ್ವೇದ ತಿಳಿಸುತ್ತದೆ.

ಈ ಸಮಯದಲ್ಲಿ ಬೀಸುವ ಗಾಳಿಗೆ ಅಮೃತದಂತಹ ಶಕ್ತಿಯಿರುತ್ತದೆ. ರಾತ್ರಿಯ ವಿಶ್ರಾಂತಿಯ ನಂತರ ಶರೀರ ಹಾಗೂ ಬುದ್ಧಿ ಉಲ್ಲಸಿತವಾಗಿರುತ್ತವೆ. ಬ್ರಾಹ್ಮೀ ಮುಹೂರ್ತದಲ್ಲಿ ಅಧ್ಯಯನ ಮಾಡಿದರೆ ಸುಲಭವಾಗಿ ಮನವರಿಕೆಯಾಗುತ್ತದೆ. ಅಧ್ಯಯನ ಮಾಡಲು ಬ್ರಹ್ಮಮುಹೂರ್ತವೇ ಪ್ರಶಸ್ತ. ಪ್ರಮುಖ ಮಂದಿರಗಳ ಮುಖ್ಯದ್ವಾರ ತೆರೆಯುವುದು ಬ್ರಹ್ಮ ಮುಹೂರ್ತದ ಸಮಯದಲ್ಲೇ. ದೇವರ ಶೃಂಗಾರ ಹಾಗೂ ಪೂಜೆಗಳನ್ನು ಬ್ರಹ್ಮ ಮುಹೂರ್ತದಲ್ಲಿ ನಡೆಸಲಾಗುತ್ತದೆ.

Advertisement

ಬ್ರಹ್ಮ ಮುಹೂರ್ತದಲ್ಲಿ ಭಗವಂತನ ಪೂಜೆ, ಧ್ಯಾನ ಹಾಗೂ ಪವಿತ್ರಕಾರ್ಯಗಳನ್ನು ಮಾಡುವುದರಿಂದ ಆತ್ಮ ಶಕ್ತಿ ಪ್ರಾಪ್ತಿಯಾಗುತ್ತದೆ. ಮನುಷ್ಯನ ಜ್ಞಾನ, ವಿವೇಕ, ಶಾಂತಿ, ಸುಖಮುಂತಾದ ಸದ್ಗುಣಗಳ ವೃದ್ಧಿಯಾಗುತ್ತದೆ. ಭಗವಂತನ ಸ್ಮರಣೆಯ ನಂತರ ಮೊಸರು, ತುಪ್ಪ, ಕನ್ನಡಿ, ಬಿಲ್ವಪತ್ರೆ, ಹೂವಿನ ಮಾಲೆ ಮುಂತಾದ ಪವಿತ್ರ ವಸ್ತುಗಳನ್ನು ನೋಡುವುದರಿಂದ ದಿನ ಶುಭವಾಗಿರುತ್ತದೆ.

ಸೀತೆಯನ್ನು ಹುಡುಕುತ್ತಾ ಸಾಗಿದ ಆಂಜನೇಯ ಬ್ರಹ್ಮ ಮುಹೂರ್ತದಂದೇ ಅಶೋಕವನ ತಲುಪಿದ್ದ. ಅಲ್ಲಿ ವೇದ ಮಂತ್ರಗಳ ಉಚ್ಛಾರಣೆಯನ್ನು ಕೇಳಿದ್ದ, ಮತ್ತು ಯಜ್ಞಾದಿ ಕಾರ್ಯಗಳನ್ನು ನೋಡಿದ್ದನೆಂದು ವಾಲ್ಮೀಕಿ ರಾಮಾಯಣದಲ್ಲಿ ತಿಳಿಸಲಾಗಿದೆ. ರಾತ್ರಿಯ ವಿಶ್ರಾಂತಿಯ ನಂತರ ಮನಸ್ಸು ಶಾಂತ ಹಾಗೂ ಸ್ಥಿರವಾಗಿರುತ್ತದೆ. ವಾತಾವರಣದಲ್ಲಿ ಶುದ್ಧತೆಯೂ ಹೆಚ್ಚಿರುತ್ತದೆ. ಆಗ ದೇವರ ಉಪಾಸನೆ, ಧ್ಯಾನ, ಯೋಗ, ಪೂಜೆಗಳನ್ನು ಮಾಡುವುದರಿಂದ ಮನಸ್ಸು ಹಾಗೂ ಬುದ್ಧಿ ಆರೋಗ್ಯದಿಂದ ಕೂಡಿರುತ್ತವೆ. ಆಲಸ್ಯವನ್ನು ಬಿಟ್ಟು ಬ್ರಹ್ಮ ಮುಹೂರ್ತದಲ್ಲೆದ್ದು ಪುಣ್ಯ ಕರ್ಮಗಳನ್ನು ಮಾಡಿದರೆ ಶ್ರೇಯಸ್ಸು ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಲೋಕಾಃ ಸಮಸ್ತಾಃ ಸುಖಿನೋ ಭವಂತು
-(ಸಂಗ್ರಹ ಮಾಹಿತಿ)

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ
July 26, 2025
9:05 PM
by: The Rural Mirror ಸುದ್ದಿಜಾಲ
ಬದುಕಿಗೆ ಧರ್ಮದ ತಳಹದಿ ಅಗತ್ಯ : ರಾಘವೇಶ್ವರ ಶ್ರೀ
July 26, 2025
2:08 PM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ರಹಿತ ದಂತಮಂಜನ ‘ದಂತಸುರಭಿ’ ಲೋಕಾರ್ಪಣೆ | ಜನಜೀವನ ವಿಷದಿಂದ ಅಮೃತದತ್ತ ಸಾಗಲಿ: ರಾಘವೇಶ್ವರ ಶ್ರೀ ಆಶಯ
July 24, 2025
6:19 AM
by: The Rural Mirror ಸುದ್ದಿಜಾಲ
ವಿಷ್ಣುಗುಪ್ತ ವಿವಿಗೆ ಕರ್ಣಾಟಕ ಬ್ಯಾಂಕ್ ಸಂಶೋಧನಾ ಕೇಂದ್ರ ಕೊಡುಗೆ
July 20, 2025
10:25 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group