ಮಡಿಕೇರಿಯ ಸುದರ್ಶನ ಬಡಾವಣೆಯ ನಿವಾಸಿ ಆಶಾ ಅವರು ಅನಾರೋಗ್ಯಕ್ಕೆ ತುತ್ತಾಗಿ ಮೆದುಳು ನಿಷ್ಕ್ರಿಯಗೊಂಡಿತ್ತು. ಹೀಗಾಗಿ ಅವರ ಕುಟುಂಬಸ್ಥರು ಅಂಗಾಗ ದಾನ ಮಾಡುವ ಮೂಲಕ 8 ಜನರ ಜೀವ ಉಳಿಸಿದ್ದಾರೆ. ಕಣ್ಣು, ಕಿಡ್ನಿ, ಹೃದಯ, ಲಿವರ್ ದಾನದ ಮೂಲಕ ಸಾರ್ಥಕತೆ ಮೆರೆದಿದ್ದಾರೆ.
18 ವರ್ಷದಿಂದ ಬೇಬಿ ಸಿಟಿಂಗ್ ನಡೆಸುತ್ತಿದ್ದ ಪಂದ್ಯಂಡ ಆಶಾ (53) ಕಳೆದ ಶನಿವಾರ ಬೆಂಗಳೂರಿನಲ್ಲಿರುವ ಪುತ್ರಿ ಮನೆಗೆ ಹೋಗಿದ್ದರು. ಈ ವೇಳೆ ಅನಾರೋಗ್ಯಕ್ಕೆ ತುತ್ತಾದ ಆಶಾ ಅವರ ಮೆದುಳು ಪಾರ್ಶ್ವವಾಯುವಿಗೆ ಒಳಗಾಗಿತ್ತು. ತಕ್ಷಣವೇ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ಹೇಳಿದರು. ವೈದ್ಯರ ಸಲಹೆ ಮೇರೆಗೆ ಅಂಗಾಂಗ ದಾನಕ್ಕೆ ಆಶಾ ಅವರ ಪತಿ, ಮಕ್ಕಳ ಒಪ್ಪಿಗೆ ಪಡೆಯಲಾಯಿತು. ಬೆಂಗಳೂರು ನಾರಾಯಣ ಹೃದಯಾಲಯದಲ್ಲಿ ಅಂಗಾಂಗವನ್ನು ಬೇರ್ಪಡಿಸಿ 8 ಜನರಿಗೆ ಕಸಿ ಮಾಡಲಾಗಿದೆ.
ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ 900 ಬಸ್ ಗಳು ಸೇರ್ಪಡೆಗೊಳ್ಳಲಿವೆ ಎಂದು…
2025-26 ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ…
ರಾಜ್ಯದಲ್ಲಿ ಈಗಾಗಲೇ ಮಲೆನಾಡು ಪ್ರದೇಶದಲ್ಲಿ ಕಳೆದ ವರ್ಷ 100 ಕಾಲುಸಂಕ ನಿರ್ಮಾಣ ಮಾಡಲಾಗಿದೆ.…
ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ಫಸಲು ಬಂದಾಗ ಭೂತಾಯಿಗೆ ಪೂಜೆ ಸಲ್ಲಿಸಿ ಫಸಲನ್ನು…
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಜನರ ಸಾಮಾಜಿಕ ಮತ್ತು…