ಹಲವು ದಿನಗಳ ಕುತೂಹಲಕ್ಕೆ ಬಿತ್ತು ಬ್ರೇಕ್‌ | ಕಾಂತಾರ-1ರ ಫಸ್ಟ್ ಲುಕ್ ರಿಲೀಸ್ | ಭಯಂಕರ ಲುಕ್‌ನಲ್ಲಿ ರಿಷಬ್ ಶೆಟ್ಟಿ

November 27, 2023
1:04 PM

ಕಾಂತರ(Kantara) ಚಿತ್ರ ನೋಡಿದ ಕೋಟ್ಯಾಂತರ ಅಭಿಮಾನಿಗಳಲ್ಲಿ ಮೂಡಿದ ಕಟ್ಟಕಡೆಯ ಪ್ರಶ್ನೆ ಕಾಂತಾರ 2 ಯಾವಾಗ ಬರುತ್ತದೆ ಎಂಬುದು. ಅದಕ್ಕೆ ಚಿತ್ರ ತಂಡ ಬರುತ್ತೆ ಕಾದು ನೋಡಿ ಅಂತ ಹೇಳಿತ್ತು. ಅದರಂತೆ ಅದರ ಕೆಲಸಗಳು ಆರಂಭವಾಗಿದೆ. ಕಥೆ ಬರೆಯುತ್ತಿದ್ದಾರೆ, ಪಂಜುರ್ಲಿ, ಗುಳಿಗನ ಮೊರೆ ಹೋಗಿದ್ದಾರೆ ರಿಷಭ್‌ ಎಂದೆಲ್ಲಾ ಮಾತುಗಳು ಕೇಳಿ ಬರುತ್ತಿತ್ತು. ಆದರೆ ಇಂದು ಎಲ್ಲಾ ಅಭಿಮಾನಿಗಳ ಕುತೂಹಲಕ್ಕೆ ಉತ್ತರ ಕೊಟ್ಟಿದ್ದಾರೆ ರಿಷಬ್‌ ಶೆಟ್ಟಿ(Rishab Shetty).

Advertisement
Advertisement

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ ಅಧ್ಯಾಯ 1 ಫಸ್ಟ್ ಲುಕ್ (First Look) ರಿಲಿಸ್ ಆಗಿದೆ. ಹೊಂಬಾಳೆ ಫಿಲ್ಮಸ್ ಲಾಂಛನದಲ್ಲಿ(Hombale films) ಮೂಡಿ ಬರಲಿರುವ ಚಿತ್ರದ ಫಸ್ಟ್ ಲುಕ್ ಸಖತ್ ಕ್ಯೂರಿಯಾಸಿಟಿ ಮೂಡಿಸಿದೆ. ಅಘೋರಿ ಅವತಾರದಲ್ಲಿ ರಿಷಬ್ ಅಚ್ಚರಿ ಮೂಡಿಸುವಷ್ಟು ಕಂಡಿದ್ದಾರೆ. ಶಿವನ ಅವತಾರದ ಮತ್ತೊಂದು ರೂಪವಾಗಿ ರಿಷಬ್ ಬದಲಾಗಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ ಮತ್ತೊಂದು ಕೈಯಲ್ಲಿ ಜಮದಗ್ನಿ ಕೊಡಲಿಯನ್ನು ಹಿಡಿದುಕೊಂಡಿರುವ ಪೋಸ್ಟರ್ ನಾನಾ ಚರ್ಚೆಗಳನ್ನು ಹುಟ್ಟು ಹಾಕುವಂತಿದೆ.

ಕಾಂತಾರ ಚಿತ್ರದ ಮೊದಲ ಅಧ್ಯಾಯಕ್ಕೆ  (Kantara Chapter 1) ಇಂದು ಮುಹೂರ್ತ ನಡೆದಿದೆ. ಉಡುಪಿ ಜಿಲ್ಲೆ (Udupi) ಕುಂದಾಪುರ ತಾಲೂಕಿನ(Kundapura) ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ(Kumbashi Shri Vinayaka Temple) ಚಿತ್ರತಂಡ ವಿಶೇಷ ಪೂಜೆಯನ್ನ ಮಾಡಿಸಲಿದೆ. ಉದ್ಭವಮೂರ್ತಿ ವಿನಾಯಕ ದೇವರಿಗೆ ಮೂಡು ಗಣಪತಿ ಸೇವೆ, ತ್ರಿಕಾಲ ಸೇವೆ, ಅನ್ನದಾನ ನಡೆಯಲಿದೆ. ದೇಗುಲಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು ಬಣ್ಣ ಬಣ್ಣದ ಹೂವಿನಿಂದ ಸಿಂಗಾರ ಮಾಡಲಾಗಿದೆ.

ಸಿನಿಮಾ ಬಗ್ಗೆ ದಿನಕ್ಕೊಂದು ಮಾಹಿತಿ ಹೊರ ಬೀಳುತ್ತಿವೆ. ಸಿನಿಮಾ ಟೀಮ್ ಅಧಿಕೃತವಾಗಿ ಯಾವುದೇ ಮಾಹಿತಿ ಸಿಗದೇ ಇದ್ದರೂ, ಬಲ್ಲ ಮೂಲಗಳು ಮಾಹಿತಿಯನ್ನು ಹೊರ ಹಾಕುತ್ತಲೇ ಇವೆ. ಕಾಂತಾರ ಸಿನಿಮಾ ಮೊದಲು ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿತ್ತು. ಹಿಟ್ ಆದ ನಂತರ ಹಲವು ಭಾಷೆಗಳಲ್ಲಿ ಅದನ್ನು ಡಬ್ ಮಾಡಲಾಯಿತು. ಆದರೆ, ಕಾಂತಾರ 2 ಬರೋಬ್ಬರಿ ಏಳು ಭಾಷೆಗಳಲ್ಲಿ ನಿರ್ಮಾಣವಾಗಲಿದೆಯಂತೆ. ಹಾಗಾಗಿ ಅದ್ಧೂರಿ ಮೇಕಿಂಗ್ ಕೂಡ ಇರಲಿದೆಯಂತೆ.

Advertisement

ಮೊನ್ನೆಯಷ್ಟೇ ಸಿನಿಮಾ ಮುಹೂರ್ತದ (Muhurta) ಕುರಿತಂತೆ ಪಂಜುರ್ಲಿ (Panjurl) ಮತ್ತು ಗುಳಿಗ ದೈವಕ್ಕೆ ಚಿತ್ರತಂಡ ಮೊರೆ ಹೋಗಿದ್ದು, ದೈವಗಳು ಅಸ್ತು ಎಂದಿವೆ ಎನ್ನುವ ಮಾಹಿತಿ ಸಿಕ್ಕಿತ್ತು. ಹೀಗಾಗಿ ಸಿನಿಮಾ ತಂಡ ಮುಹೂರ್ತಕ್ಕೆ ಸರ್ವ ಸಿದ್ಧತೆ ಮಾಡಿಕೊಂಡಿದೆ. ಮತ್ತೊಂದು ಸಮಾಚಾರವೆಂದರೆ, ಈ ಸಿನಿಮಾದಲ್ಲಿ 14ನೇ ಶತಮಾನದಿಂದ ಶುರುವಾಗುವ ಕಥೆ ಕೂಡ ಇರಲಿದೆಯಂತೆ. ಈ ಕುರಿತು ಚಿತ್ರತಂಡ ಮಾಹಿತಿ ನೀಡದೇ ಇದ್ದರೂ, ಗಾಂಧಿ ನಗರದ ಗಲ್ಲಿ ಗಲ್ಲಿಗಳಲ್ಲಿ ಕಾಂತರ ಕಥೆ ಹಾಟ್ ಕೇಕ್ ತರಹ ಮಾರಾಟವಾಗುತ್ತಿದೆ.

‘ಕಾಂತಾರ‘ ಸಿನಿಮಾ ವರ್ಲ್ಡ್ ವೈಡ್ ರೀಚ್ ಸಕ್ಸಸ್‌ಫುಲ್ ಪ್ರದರ್ಶನ ಕಂಡಿತ್ತು. ‘ಕಾಂತಾರ‘ ಪಾರ್ಟ್ 2 ಯಾವಾಗ ಎಂದು ಕಾದು ಕುಳಿತ ಫ್ಯಾನ್ಸ್‌ಗೆ ಸಿಹಿಸುದ್ದಿ ಸಿಕ್ಕಿದೆ. ಇದೇ ನವೆಂಬರ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಹೊಂಬಾಳೆ ಸಂಸ್ಥೆ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ 2′ ಚಿತ್ರದ ಮುಹೂರ್ತ ಇಂದು ಸರಳವಾಗಿ ನಡೆದಿದೆ.

  • ಅಂತರ್ಜಾಲ ಮಾಹಿತಿ
Directed by Rishabh Shetty, the first look of Kantara Chapter 1 has been released. The first look of the film, which will be produced under the banner of Hombale Films, has created intense curiosity. Rishabh looks amazing in Aghori avatar. Rishabh has changed into another form of Shiva's avatar. The poster of Jamadagni holding a trident in one hand and an ax in the other seems to be sparking many debates.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?
May 17, 2025
7:27 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ
May 17, 2025
7:01 AM
by: ದ ರೂರಲ್ ಮಿರರ್.ಕಾಂ
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ
May 16, 2025
9:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group