ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಮೊಟ್ಟೆಯಲ್ಲಿ ಅದರಲ್ಲೂ ನಿರ್ದಿಷ್ಟ ಬ್ರಾಂಡ್ನ ಮೊಟ್ಟೆಗಳಲ್ಲಿ ಕ್ಯಾನ್ಸರ್ ಗೆ ಕಾರಣವಾಗುವ ಜಿನೋಟಾಕ್ಸಿಕ್ ಅಂಶ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿದ್ದರೂ, ಪ್ರಯೋಗಾಲಯದ ಪರೀಕ್ಷೆಗಳ ವರದಿಗಳು ನಿರ್ದಿಷ್ಟವಾದ ಉತ್ತರ ನೀಡಿದೆ.
ಬೆಂಗಳೂರಿನ ಎಚ್ ಸಿಜಿ ಕ್ಯಾನ್ಸರ್ ಆಸ್ಪತ್ರೆಯ ಕನ್ಸಲ್ಟೆಂಟ್ ಮೆಡಿಕಲ್ ಆಂಕೊಲಾಜಿಸ್ಟ್ ಡಾ.ಸ್ಮಿತಾ ಸಲ್ಡಾನಾ, ನೈಟ್ರೋಫ್ಯೂರಾನ್ ಗಳು ಸೇರಿದಂತೆ ಇತರೆ ವಸ್ತುಗಳನ್ನು ಕೆಲವೊಮ್ಮೆ ಕೋಳಿ ಸಾಕಣೆಯಲ್ಲಿ ಬಳಸಲಾಗುತ್ತದೆ. ನೈಟ್ರೋಫ್ಯೂರಾನ್ ಗಳ ಕೆಲವು ಮೆಟಾಬಾಲೈಟ್ ಗಳು, ಮಾನವ ದೇಹದಲ್ಲಿ ದೀರ್ಘಕಾಲದವರೆಗೆ ಮುಂದುವರಿದರೆ ಡಿಎನ್ಎ ಗೆ ಹಾನಿ ಮಾಡಬಹುದು ಮತ್ತು ಅವು ಜಿನೋಟಾಕ್ಸಿಕ್ ಸಾಮರ್ಥ್ಯವನ್ನು ಹೊಂದಿರುತ್ತವೆ. ಮೊಟ್ಟೆಗಳು ಸ್ವತಃ ಕ್ಯಾನ್ಸರ್ ಕಾರಕವಲ್ಲ ಎಂದು ವಿವರಿಸಿದ್ದಾರೆ.
ಮೊಟ್ಟೆಗಳು ಪ್ರೋಟೀನ್ ನ ಅಮೂಲ್ಯ ಮೂಲವಾಗಿ ಉಳಿದಿವೆ ಮತ್ತು ಅವುಗಳನ್ನು ಸುರಕ್ಷಿತವಾದ ಆಹಾರ. ಜನರು ಮೊಟ್ಟಯನ್ನು ಖರೀದಿ ಮಾಡುವಾಗ ಅಸ್ಪಷ್ಟ ಲೇಬಲ್ ಗಳನ್ನು ಹೊಂದಿರುವ ಪ್ಯಾಕ್ ಮಾಡಿದ ಉತ್ಪನ್ನಗಳೊಂದಿಗೆ ಎಚ್ಚರಿಕೆಯಿಂದ ಇರಬೇಕು ಎಂದು ಆಸ್ಟರ್ ವೈಟ್ಫೀಲ್ಡ್ ಆಸ್ಪತ್ರೆಯ ಮುಖ್ಯ ಕ್ಲಿನಿಕಲ್ ಡಯಟಿಷಿಯನ್ ವೀಣಾ ವಿ ಹೇಳಿದರು.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…