ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಈವರೆಗೆ 150 ಮಿಲಿಯನ್ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ತಪಾಸಣೆ ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಹೇಳಿದ್ದಾರೆ.……..ಮುಂದೆ ಓದಿ…..
ಬ್ರೆಸ್ಟ್ ಇಮೇಜಿಂಗ್ ಸೊಸೈಟಿ ಆಫ್ ಇಂಡಿಯಾ ಆಯೋಜಿಸಿದ್ದ MIDTERM BISICON-2025 ಅನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶಾದ್ಯಂತ 200 ಡೇ-ಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಆರೋಗ್ಯಕರ ಜೀವನಶೈಲಿ, ಜಾಗೃತಿ, ಸಕಾಲಿಕ ತಪಾಸಣೆ ಮತ್ತು ಚಿಕಿತ್ಸೆಯು, ಸ್ತನ ಕ್ಯಾನ್ಸರ್ ಮರಣ ಪ್ರಮಾಣವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದರು. ಅರಿವಿನ ಕೊರತೆಯಿಂದಾಗಿ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ ಎಂದ ಅವರು, ಸರ್ಕಾರವು ಇದನ್ನು ನಿಭಾಯಿಸುವ ಬಗ್ಗೆ ಕಾಳಜಿ ವಹಿಸುತ್ತಿದೆ. ಪ್ರತಿ ವರ್ಷ, ಭಾರತದಲ್ಲಿ 1.4 ಮಿಲಿಯನ್ ಹೊಸ ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ. ಈ ಪೈಕಿ ಸುಮಾರು ಎರಡು ಲಕ್ಷ ಸ್ತನ ಕ್ಯಾನ್ಸರ್ ಪ್ರಕರಣಗಳಿವೆ ಎಂದು ಅವರು ವಿವರಿಸಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel