ಶಿರಾಡಿ ಘಾಟ್ ಹೆದ್ದಾರಿ ಅಭಿವೃದ್ದಿಗೆ ಡಿಪಿಆರ್ ಪ್ರಕ್ರಿಯೆ ಚುರುಕುಗೊಳಿಸಲು ಸಂಸದ  ಕ್ಯಾ. ಬ್ರಿಜೇಶ್ ಚೌಟ ಮನವಿ

February 19, 2025
7:07 AM
ಶಿರಾಡಿ ಫಾಟಿ ರಸ್ತೆ ಅಭಿವೃದ್ಧಿಯ ಸಾಧ್ಯತೆಗಳ ಬಗ್ಗೆ ಆದಷ್ಟು ಬೇಗ ಯೋಜನಾ ವರದಿ ಸಿದ್ಧಪಡಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಒತ್ತಾಯಿಸಿದ್ದಾರೆ.

ಶಿರಾಡಿ ಘಾಟಿ ಹೆದ್ದಾರಿ ಅಭಿವೃದ್ಧಿ, ಮಂಗಳೂರು ನಗರಕ್ಕೆ ಹೊರ ವರ್ತುಲ ರಸ್ತೆ ನಿರ್ಮಾಣ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ರಸ್ತೆಗಳನ್ನು ಮೇಲ್ದರ್ಜೆಗೇರಿಸುವುದಕ್ಕೆ ಬಾಕಿಯಿರುವ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿ ಪ್ರಕ್ರಿಯೆಗಳನ್ನು ಚುರುಕುಗೊಳಿಸಿ ಆದಷ್ಟು ಬೇಗ ಅವುಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಒತ್ತಾಯಿಸಿದ್ದಾರೆ.

ದ ಕ ಜಿಲ್ಲೆಗೆ ಸಂಬಂಧಿಸಿದಂತೆ ಸಚಿವರೊಂದಿಗೆ ನಡೆದ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ಕ್ಯಾ. ಚೌಟ ಅವರು, ಹಲವು ಅಭಿವೃದ್ಧಿ ಯೋಜನೆಗಳ ಡಿಪಿಆರ್ ತಯಾರಿ ಬಾಕಿ ವಿಚಾರ ಹಾಗೂ ಹೊಸ ಪ್ರಸ್ತಾಪಿತ ಯೋಜನೆಗಳ ಬಗ್ಗೆ ಸೂಕ್ತ ಕ್ರಮ ಜರುಗಿಸುವಂತೆ ಕೋರಿದ್ದಾರೆ.

ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ಬರುವ ಶಿರಾಡಿ ಘಾಟಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ಇನ್ನು ಕೂಡ ಡಿಪಿಆರ್ ಸಿದ್ಧಗೊಂಡಿಲ್ಲ. ಅಲ್ಲದೆ ಈ ರಸ್ತೆ ಅಗಲೀಕರಣಕ್ಕೆ ಅರಣ್ಯ ಇಲಾಖೆಯ ಒಪ್ಪಿಗೆ ಪಡೆಯುವುದು ಕೂಡ ಬಾಕಿಯಿದೆ. ಹೀಗಾಗಿ, ಶಿರಾಡಿ ಫಾಟಿ ರಸ್ತೆ ಅಭಿವೃದ್ಧಿಯ ಸಾಧ್ಯತೆಗಳ ಬಗ್ಗೆ ಆದಷ್ಟು ಬೇಗ ಯೋಜನಾ ವರದಿ ಸಿದ್ಧಪಡಿಸಬೇಕು. ಈ ಪ್ರಸ್ತಾವಿತ ಯೋಜನೆ ಬಗ್ಗೆ ನಾನು ಹೆದ್ದಾರಿ ಇಲಾಖೆ ಜತೆಗೆ ನಿರಂತರ ಸಂಪರ್ಕದಲ್ಲಿದ್ದು, ಯೋಜನಾ ವರದಿ ಸಿದ್ಧಪಡಿಸುವುದು ವಿಳಂಬವಾದಷ್ಟು ಈ ಹೆದ್ದಾರಿ ಅಭಿವೃದ್ಧಿ ಯೋಜನೆ ಜಾರಿಗೂ ಹಿನ್ನಡೆಯಾಗುತ್ತದೆ. ಅಲ್ಲದೆ, ಈ ಯೋಜನೆಗೆ ಅರಣ್ಯ ಇಲಾಖೆಯಿಂದ ಒಪ್ಪಿಗೆ ಪಡೆಯುವುದಕ್ಕೂ ತಮ್ಮ ಪೂರ್ಣ ಸಹಕಾರ ಹಾಗೂ ಮಧ್ಯಪ್ರವೇಶದ ಅಗತ್ಯವಿದೆ. ಆ ಮೂಲಕ ಈ ಹೆದ್ದಾರಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವುದಕ್ಕೆ ಆದಷ್ಟು ಬೇಗ ಪೂರಕ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.

 

Brijesh Chauta’s appeal to expedite the DPR process for the Shiradi Ghat highway development highlights the critical need for infrastructure improvements along the Mangalore-Bangalore route. The potential benefits of this project are far-reaching, promising to enhance regional connectivity and economic growth. As stakeholders work collaboratively to overcome existing challenges, the successful execution of this project could set a precedent for future infrastructure endeavors in the region.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ
March 15, 2025
7:00 AM
by: ದಿವ್ಯ ಮಹೇಶ್
ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |
March 14, 2025
11:36 PM
by: ದ ರೂರಲ್ ಮಿರರ್.ಕಾಂ
ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ
March 14, 2025
11:03 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ
March 14, 2025
10:57 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror