ಹೊಸರುಚಿ | ಬದನೆಕಾಯಿ ಪಲ್ಯ

January 3, 2026
9:07 AM

ಬದನೆಕಾಯಿ ಪಲ್ಯಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಬದನೆಕಾಯಿ ತೊಳೆದು ಕಟ್ ಮಾಡಿ ನೀರಿನಲ್ಲಿ ಹಾಕಿ, ಹುಣಸೆ ರಸ ಸ್ವಲ್ಪ. ಹಸಿಮೆಣಸಿನ ಕಾಯಿ 4 ರೌಂಡ್ ಆಗಿ ಕಟ್ ಮಾಡಿ,  ಈರುಳ್ಳಿ 1,  ಟೊಮೆಟೊ 1, ಬೆಳ್ಳುಳ್ಳಿ 8 ಎಸಳು, ಅರಿಸಿನ ಪುಡಿ ಸ್ವಲ್ಪ, ಕೊತ್ತಂಬರಿ ಸೊಪ್ಪು, ಉಪ್ಪು ರುಚಿಗೆ ತಕ್ಕಷ್ಟು,  ಚಿಕ್ಕ ತುಂಡು ಬೆಲ್ಲ, ಕಾಯಿತುರಿ

ಮಾಡುವ ವಿಧಾನ:  ಬಾಣಲೆಗೆ ಎಣ್ಣೆ ಸಾಸಿವೆ, ಉದ್ದಿನ ಬೇಳೆ, ಜೀರಿಗೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಚಟಪಟಾಯಿಸಿ ಇದಕ್ಕೆ ಬೆಳ್ಳುಳ್ಳಿ ಕಟ್ ಮಾಡಿ ಹಾಕಿ, ಹಸಿಮೆಣಸಿನ ಕಾಯಿ, ಈರುಳ್ಳಿ, ಟೊಮೆಟೊ, ಹಾಕಿ ಫ್ರೈ ಮಾಡಿ ನಂತರ ಬದನೆಕಾಯಿ ಹಾಕಿ, ಮಿಕ್ಸ್ ಮಾಡಿ ಇದಕ್ಕೆ ಹುಣಸೆ ರಸ, ಉಪ್ಪು ರುಚಿಗೆ ತಕ್ಕಷ್ಟು ಅರಿಸಿನ ಪುಡಿ, ಸ್ವಲ್ಪ ನೀರು ಸೇರಿಸಿ ಬೇಯಿಸಿಕೊಳ್ಳಿ ನಂತರ ಕೊತ್ತಂಬರಿ ಸೊಪ್ಪು, ಕಾಯಿತುರಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ.
ಬಿಸಿ ಬಿಸಿ ಅನ್ನದ ಜೊತೆ ಸೂಪರ್.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ಹೊಸರುಚಿ | ಎಳೆಯ ಹಲಸಿನ ಕಾಯಿ ಬಜ್ಜಿ – ಮನೆಯಲ್ಲೇ ಸವಿಯುವ ಕ್ರಿಸ್ಪಿ ಸ್ನ್ಯಾಕ್
March 28, 2026
9:12 AM
by: ದ ರೂರಲ್ ಮಿರರ್.ಕಾಂ
ಸಂಸ್ಥೆಯ ನಿಜವಾದ ಶಕ್ತಿ : ಮಾನವ ಸಂಪನ್ಮೂಲವೇ ಯಶಸ್ಸಿನ ಮೂಲಾಧಾರ
March 27, 2026
2:05 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹೊಸರುಚಿ | ಎಳೆಯ ಹಲಸಿನ ಕಾಯಿ ರೋಲ್ – ಕ್ರಿಸ್ಪಿ ಟೀ ಟೈಮ್ ಸ್ನ್ಯಾಕ್
March 21, 2026
5:00 PM
by: ದಿವ್ಯ ಮಹೇಶ್
ಕೌಶಲ್ಯಾಭಿವೃದ್ಧಿ ಮತ್ತು ಸ್ವಾವಲಂಬನೆ : ಯುವಜನತೆಗೆ ಕಾಲದ ಕರೆಯೇ?
March 20, 2026
8:07 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror