#RamKathaCambridge | ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಮೊರಾರಿ ಬಾಪು ಅವರಿಂದ “ರಾಮಕಥೆ” | ಕಾರ್ಯಕ್ರಮಕ್ಕೆ ಭೇಟಿ ನೀಡಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್ |

August 16, 2023
3:06 PM
ಕೇಂಬ್ರಿಡ್ಜ್‌ ವಿಶ್ವವಿದ್ಯಾಲಯದಲ್ಲಿ ಮೊರಾರಿ ಬಾಪು ಅವರಿಂದ ನಡೆದ ರಾಮಕಥಾ  ಕಾರ್ಯಕ್ರಮದಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಭಾಗವಹಿಸಿದರು. ಶ್ರೀರಾಮನು ಯಾವಾಗಲೂ ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಲು, ನಮ್ರತೆಯಿಂದ ಆಡಳಿತ ಮಾಡಲು ಮತ್ತು ನಿಸ್ವಾರ್ಥವಾಗಿ ಕೆಲಸ ಮಾಡಲು ಸ್ಪೂರ್ತಿದಾಯಕ ವ್ಯಕ್ತಿಯಾಗಿದ್ದಾನೆ, ಎಂದು ರಿಷಿ ಸುನಕ್‌ ಹೇಳಿದರು.

ಕೇಂಬ್ರಿಡ್ಜ್‌ ವಿಶ್ವವಿದ್ಯಾಲಯದಲ್ಲಿ ಮೊರಾರಿ ಬಾಪು ಅವರಿಂದ ನಡೆದ ರಾಮಕಥಾ  ಕಾರ್ಯಕ್ರಮದಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಭಾಗವಹಿಸಿದರು. ನಾನು ಪ್ರಧಾನಿಯಾಗಿ ಬಂದಿಲ್ಲ, ಹಿಂದುವಾಗಿ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದು ಹೇಳಿದರು.

Advertisement

ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಆಧ್ಯಾತ್ಮಿಕ ಬೋಧಕ ಮೊರಾರಿ ಬಾಪು ಅವರಿಂದ ರಾಮಕಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಾಮಕಥೆಯಲ್ಲಿ ಪಾಲ್ಗೊಂಡ ಬ್ರಿಟನ್ ಪ್ರಧಾನಿ ರಿಷಿ ಸುನಕ್, ಕೆಲ ಸಾಧಕರು ಅದೆಷ್ಟೇ ದೊಡ್ಡ ಸ್ಥಾನಕ್ಕೇ ಏರಿದರು ತಮ್ಮ ಧರ್ಮಕ್ಕೆ ಗೌರಯುತವಾಗಿ ನಡೆದುಕೊಳ್ಳುವುದನ್ನು ಮರೆಯುವುದಿಲ್ಲ. ಹಾಗೆ ನಾನು ಪ್ರಧಾನಿಯಾಗಿ ಅಲ್ಲ, ಓರ್ವ ಹಿಂದೂವಾಗಿ ಕಾರ್ಯಕ್ರಮಕ್ಕೆ ಬಂದಿದ್ದೇನೆ  ಎಂದು  ಹೇಳಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯಂದೇ ರಾಮಕಥಾ ಕಾರ್ಯಕ್ರಮ ನಡೆಯಿತು. ನನ್ನ ನಂಬಿಕೆ ವೈಯಕ್ತಿಕವಾದದ್ದು, ಪ್ರಧಾನಿಯಾಗಿರುವುದು ದೊಡ್ಡ ಗೌರವವಾದರೂ ಈ ಹುದ್ದೆಯನ್ನು ನಿಭಾಯಿಸುವುದು ಅಷ್ಟು ಸುಲಭವಲ್ಲ. ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಕಠಿಣ ಆಯ್ಕೆಗಳನ್ನು ಮಾಡಬೇಕು. ಜನರಲ್ಲಿ ಆತ್ಮವಿಶ್ವಾಸವನ್ನು ತುಂಬಬೇಕು. ನನ್ನ ಧರ್ಮವು ನನಗೆ ಈ ನಿರ್ಧಾರಗಳನ್ನು ತೆಗೆದುಕೊಳ್ಳುವ ಶಕ್ತಿಯನ್ನು ನೀಡುತ್ತದೆ. ಯಾವುದೇ ಕೆಲಸವನ್ನು ಮಾಡುವ ಮೊದಲು ಸಮಸ್ಯೆಗಳನ್ನು ಆಲಿಸಿ, ಸಮಾಧಾನದಿಂದ ನಿರ್ಧಾರ ತೆಗೆದುಕೊಳ್ಳುವಂತೆ ನನ್ನ ಧರ್ಮವು ಹೇಳುತ್ತದೆ ಎಂದು ರಿಷಿ ಸುನಕ್‌ ಹೇಳಿದರು. ಶ್ರೀರಾಮನು ಯಾವಾಗಲೂ ತನಗೆ ಸ್ಪೂರ್ತಿದಾಯಕ ವ್ಯಕ್ತಿಯಾಗಿರುತ್ತಾನೆ. ರಾಮನು ಯಾವಾಗಲೂ ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಲು, ನಮ್ರತೆಯಿಂದ ಆಡಳಿತ ಮಾಡಲು ಮತ್ತು ನಿಸ್ವಾರ್ಥವಾಗಿ ಕೆಲಸ ಮಾಡಲು ಸ್ಪೂರ್ತಿದಾಯಕ ವ್ಯಕ್ತಿಯಾಗಿದ್ದಾನೆ, ಎಂದು ಅವರು ಹೇಳಿದರು.

ಮೊರಾರಿ ಬಾಪು ಅವರ ಆಸನದ ಹಿಂದೆ ಹನುಮಂತನ ವಿಗ್ರಹವನ್ನು ಹೇಗೆ ಇರಿಸಲಾಗಿದೆಯೋ ಅದೇ ರೀತಿ ಗಣೇಶನ ವಿಗ್ರಹವನ್ನು ನನ್ನ ಕಚೇರಿಯ ಮೇಜಿನ ಮೇಲೆ ಇರಿಸಲಾಗಿದೆ ಎಂದು ಬ್ರಿಟನ್ ಪ್ರಧಾನಿ ಸುನಕ್ ಹೇಳಿದರು.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಭಯಾರಣ್ಯದಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರ ನಿಷೇಧಕ್ಕೆ ಮನವಿ
April 4, 2025
7:22 AM
by: The Rural Mirror ಸುದ್ದಿಜಾಲ
ಪಂಚಗ್ರಹಿ ಯೋಗ ಎಂದರೇನು..? | ಈ ಯೋಗವು ಮಹತ್ವದ್ದಾಗಿದೆ ಏಕೆ.. ?
April 4, 2025
7:16 AM
by: ದ ರೂರಲ್ ಮಿರರ್.ಕಾಂ
ಕೃಷಿ ಸಖಿಯರ ಪ್ರಥಮ ಪ್ರಗತಿ ಪರಿಶೀಲನಾ ಸಭೆ | ವಿವಿಧ ತರಕಾರಿ ಬೀಜಗಳ ವಿತರಣೆ | ತರಕಾರಿ ಬೆಳೆಸುವ ವಿಧಾನಗಳ ಬಗ್ಗೆ ಮಾಹಿತಿ |
April 4, 2025
12:17 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
April 3, 2025
8:17 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group