ಜಗದೀಶ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಬಿಜೆಪಿ ಪಕ್ಷದ ಬೆನ್ನಿಗೆ ಚೂರಿ ಹಾಕಿದವರು. ಅವರು ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಗೆಲ್ಲುವುದಿಲ್ಲ. ಲಕ್ಷ್ಮಣ ಸವದಿ ಅವರಿಗೆ ಪಕ್ಷದಲ್ಲಿ ವಿಧಾನ ಪರಿಷತ್ ಸ್ಥಾನ ಇದ್ದರೂ ಕೂಡ ಇಂದು ಅವರು ಪಕ್ಷ ದ್ರೋಹ ಮಾಡಿದ್ದಾರೆ. ಅಥಣಿ ಮತಕ್ಷೇತ್ರದ ಮತದಾನ ಬಾಂಧವರು ಮೇ.10ರಂದು ನಡೆಯುವ ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುಡುಗಿದರು.
ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಪರ ಪ್ರಚಾರಾರ್ಥ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮತಕ್ಷೇತ್ರದ ಮನೆ ಮನೆಗೆ ತೆರಳಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಾಧನೆಯನ್ನು ಮತ್ತು ಮಹೇಶ್ ಕುಮಟಳ್ಳಿ ಶಾಸಕರಾದ ನಂತರ ಅಥಣಿ ಮತ ಕ್ಷೇತ್ರದಲ್ಲಿ ಹೆಚ್ಚಿನ ಅನುದಾನ ತಂದು ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸಬೇಕು. ನಮ್ಮ ಪಕ್ಷಕ್ಕೆ ದ್ರೋಹ ಮಾಡಿದ ಸವದಿ ಸೋಲಬೇಕು. ಮಹೇಶ್ ಕುಮಟಳ್ಳಿ 25 ರಿಂದ 30 ಸಾವಿರ ಮತಗಳ ಅಂತರದಿಂದ ಗೆಲ್ಲಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.
ಪಂಚಮಸಾಲಿ ಲಿಂಗಾಯತ ಮತ್ತು ಅನೇಕ ಒಳಪಂಗಡಗಳಿಗೆ 2ಡಿ ಮೀಸಲಾತಿ ಸಿಗಬೇಕಾದರೆ ಪಂಚಮಸಾಲಿ ಸ್ವಾಮೀಜಿಗಳ ಹೋರಾಟದಿಂದ ದೊರಕಿದೆ. ಹಾಲುಮತದ ಕುರುಬರ ಸಮಾಜಕ್ಕೆ ಎಸ್ಟಿಮೀಸಲಾತಿ ಚಿಂತನೆ ಸರ್ಕಾರ ಮಟ್ಟದಲ್ಲಿ ನಡೆದಿದೆ. ಭಾರತೀಯ ಜನತಾ ಪಕ್ಷದಿಂದ ದೇಶದಲ್ಲಿ ಮತ್ತು ರಾಜ್ಯದಲ್ಲಿ ಉತ್ತಮ ಕೆಲಸಗಳಾಗುತ್ತವೆ. ಆದ್ದರಿಂದ ಮತ್ತೊಮ್ಮೆ ಪಕ್ಷವನ್ನ ಗೆಲ್ಲಿಸಬೇಕು. ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದರೇ ರಾಜ್ಯ ಸರ್ಕಾರ ಈಗ ಮಾಡಿರುವ ಮೀಸಲಾತಿ ಕಿತ್ತುಕೊಳ್ಳುವುದರ ಜೊತೆಗೆ ಅನೇಕ ಮಸೂದೆಗಳನ್ನು ಕಿತ್ತುಕೊಳ್ಳುವ ಸಾಧ್ಯತೆ ಇದೆ. ಅವರ ಗ್ಯಾರಂಟಿ ಕಾರ್ಡ್‌ಗಳನ್ನು ನಂಬಿ ಮೋಸ ಹೋಗಬಾರದು. ಮಾಜಿ ಸಿಎಂ ಸಿದ್ದರಾಮಯ್ಯ ಲಿಂಗಾಯತ ಸಮುದಾಯದವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಲಿಂಗಾಯತ ಸಮುದಾಯ ಬಾಂಧವರು ಸ್ವಾಭಿಮಾನದಿಂದ ಬಿಜೆಪಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.
ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅವರಿಗೆ ಬಿಜೆಪಿಯಲ್ಲಿ ಉನ್ನತ ಸ್ಥಾನಮಾನ ನೀಡಿದ್ದರೂ ಕೂಡ ಪಕ್ಷದ ಬೆನ್ನಿಗೆ ಚೂರಿ ಹಾಕಿದ್ದಾರೆ. ಲಕ್ಷ್ಮಣ ಸವದಿ ಸ್ಥಳೀಯ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ನಿರ್ಲಕ್ಷ್ಯ ಮಾಡಿ ಅನೇಕ ಕಾಮಗಾರಿಗಳಿಗೆ ಭೂಮಿಪೂಜೆ ಮಾಡಿದ್ದಾರೆ. ಇಂಥವರಿಗೆ ತಕ್ಕ ಪಾಠ ಕಲಿಸಬೇಕು ಎಂದರು.
ಭಾರತೀಯ ಜನತಾ ಪಕ್ಷದ ಮಾಡಿದ ಸಾಧನೆ ಮತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ದೂರ ದೃಷ್ಟಿಯಿಂದ ದೇಶದ ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ನಡೆಸುತ್ತಿದೆ. ಇತ್ತೀಚಿಗೆ ಉತ್ತರ ಪ್ರದೇಶದಲ್ಲಿ ನಡೆದ ಚುನಾವಣೆಯಲ್ಲಿ 400 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಕೇವಲ 6 ಸ್ಥಾನಗಳನ್ನು ಗೆದ್ದಿದೆ. ರಾಹುಲ… ಗಾಂಧಿ ಪ್ರಧಾನಿ ಮೋದಿ ಅವರ ಸಮಾನ ಸ್ಥಾನ ಹೊಂದಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ಅದೊಂದು ಮುಳುಗುತ್ತಿರುವ ಹಡಗು. ರಾಜ್ಯ ವಿಧಾನಸಭಾ ಈ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ. ರಾಜ್ಯದಲ್ಲಿ ಕನಿಷ್ಠ 130ಕ್ಕೂ ಅಧಿಕ ಸ್ಥಾನಗಳನ್ನು ಬಿಜೆಪಿ ಪಕ್ಷ ಗೆಲ್ಲುತ್ತದೆ ಅಂತ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಒಂದೇ ವೇದಿಕೆಯಲ್ಲಿ ಬಿಎಸ್‌ವೈ-ಯತ್ನಾಳ
ಒಂದೇ ಪಕ್ಷದವರಾಗಿದ್ದರು ಕೂಡ ಹಾವು ಮೂಗುಸಿಯಂತೆ ಕಚ್ಚಾಡುತ್ತಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಮತದಾರರಲ್ಲಿ ಕುತೂಹಲ ಮೂಡಿಸಿದರು.
ಸುಡುಬಿಸಿಲಿನಲ್ಲಿಯೇ ಕುಳಿತು ಭಾಷಣ ಆಲಿಸಿದ ಜನರು
ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಪ್ರಚಾರ ಸಭೆಯಲ್ಲಿ ಸಾವಿರಾರು ಕಾರ್ಯಕರ್ತರು ಸುಡುಬಿಸಲಿನಲ್ಲಿಯೇ ಕುಳಿತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಭಾಷಣ ಆಲಿಸಿದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…