ಮ್ಯಾನ್ಮಾರ್‌ನಿಂದ ಬೃಹತ್ ಪ್ರಮಾಣದ ಅಡಿಕೆ ಕಳ್ಳಸಾಗಾಣಿಕೆ ಪತ್ತೆ | ಬಿಎಸ್‌ಎಫ್ ಕಾರ್ಯಾಚರಣೆ | 1.20 ಕೋಟಿ ಮೌಲ್ಯದ ಅಡಿಕೆ ವಶ | ಅಡಿಕೆ ಕಳ್ಳಸಾಗಾಣಿಕೆ ತಡೆ ಹೇಗೆ ? | ಯಾರು ಇಷ್ಟೊಂದು ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮಾಡುತ್ತಾರೆ.. ? |

April 5, 2023
10:40 PM
Advertisement

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. ಈ ಅಡಿಕೆಯನ್ನು ಯಾರು ಸಾಗಾಟ ಮಾಡುತ್ತಿದ್ದಾರೆ ? ಎಲ್ಲಿಗೆ ಸಾಗಾಟ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಇದುವರೆಗೂ ಸಮಗ್ರವಾದ ತನಿಖೆ ಆಗಿಲ್ಲ. ಬುಧವಾರ ಕೂಡಾ ಸುಮಾರು 1.20 ಕೋಟಿ ರೂಪಾಯಿ ಮೌಲ್ಯದ ಅಡಿಕೆ ಕಳ್ಳಸಾಗಾಣಿಕೆ ಬೆಳಕಿಗೆ ಬಂದಿದೆ. 

Advertisement
Advertisement
Advertisement

ಅಡಿಕೆ ಕಳ್ಳಸಾಗಾಣಿಕೆಯ ಖಚಿತ ಮಾಹಿತಿ ಮೇರೆಗೆ 172 ಬಿಎನ್ ಬಿಎಸ್ಎಫ್ ಮೇಘಾಲಯದ ಸೈನಿಕರು ಉಮ್ಕಿಯಾಂಗ್ ಪ್ರದೇಶದಿಂದ  ಬೃಹತ್ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮಾಡುತ್ತಿದ್ದ ಟ್ರಕ್ ಅನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಟ್ರಕ್‌ ಚಾಲಕನನ್ನು ವಶಕ್ಕೆ ಪಡೆದು ವಿಚಾರಿಸಿದಾಗ  ಅಡಿಕೆಯು ಮ್ಯಾನ್ಮಾರ್‌ನಿಂದ ಹೊರಟಿದ್ದು ಅಸ್ಸಾಂನ ಸಿಲ್ಚಾರ್‌ನಿಂದ ಬರ್ಪೇಟಾಗೆ ಸಾಗಿಸಲಾಗುತ್ತಿದೆ ಎಂದು ಚಾಲಕ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Advertisement

ಈ ಪ್ರದೇಶದಲ್ಲಿ  ಸತತವಾಗಿ 3 ನೇ ಬಾರಿ ಅಧಿಕ ಪ್ರಮಾಣದಲ್ಲಿ ಅಡಿಕೆ ಸಾಗಾಣಿಕೆ ಪತ್ತೆಯಾಗಿದೆ. ಆದರೆ ಯಾರು ಈ ರೀತಿಯಲ್ಲಿ ಅಡಿಕೆ ಸಾಗಾಣಿಕೆ ಮಾಡುತ್ತಿದ್ದಾರೆ ? ಎಲ್ಲಿಗೆ ಸಾಗಾಟವಾಗುತ್ತಿದೆ, ಇದರ ಹಿಂದೆ ಯಾರಿದ್ದಾರೆ ಎನ್ನುವುದು  ಇದುವರೆಗೂ ಸಮಗ್ರ ತನಿಖೆಯಾಗಿಲ್ಲ. ಭಾರತದೊಳಕ್ಕೆ ಸತತವಾಗಿ ಈ ಮಾದರಿಯಲ್ಲಿ ಅಡಿಕೆ ಕಳ್ಳಸಾಗಾಣಿಕೆಯಾಗುವಾಗಲೂ ಅಧಿಕಾರಿಗಳು, ಸರ್ಕಾರ ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎನ್ನುವುದು  ಅಡಿಕೆ ಮಾರುಕಟ್ಟೆ ವಲಯದ ಪ್ರಶ್ನೆಯಾಗಿದೆ.

 

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೆದರ್‌ ಮಿರರ್‌ | 20.04.2024 | ರಾಜ್ಯದ ಹಲವೆಡೆ ಇಂದು ಮಳೆಯ ಮುನ್ಸೂಚನೆ
April 20, 2024
11:35 AM
by: ಸಾಯಿಶೇಖರ್ ಕರಿಕಳ
ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆ | ಗಾಳಿಗೆ ಉರುಳಿದ ಮರ | ಸುಳ್ಯ- ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಡಿತ |
April 19, 2024
11:07 PM
by: ದ ರೂರಲ್ ಮಿರರ್.ಕಾಂ
ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |
April 19, 2024
4:02 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror