ಬಿಎಸ್ ಎನ್ ಎಲ್ ಅಭಿವೃದ್ಧಿಪಡಿಸಿರುವ 4-ಜಿ ಅಂತರ್ಜಾಲ ಸೌಲಭ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಒಡಿಶಾದ ಝಾರ್ಸುಗುಡದಲ್ಲಿ ಚಾಲನೆ ನೀಡಿದರು. ಇದೇ ವೇಳೆ ಅಮೃತ್ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದರು. ಹಲವು ರೈಲ್ವೆ ಕಾಮಗಾರಿ ಸೇರಿದಂತೆ, ಉನ್ನತ ಶಿಕ್ಷಣ, ಆರೋಗ್ಯ, ಕೌಶಲ್ಯಾಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿದರು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಬಿಎಸ್ ಎನ್ ಎಲ್ ನ ಸ್ವದೇಶಿ 4 – ಜಿ ಸೇವೆ ದೇಶಾದ್ಯಂತ ಇಂದಿನಿಂದ ಆರಂಭವಾಗಿದೆ. ವಿವಿಧ ರಾಜ್ಯಗಳಲ್ಲಿರುವ ಐಐಟಿಗಳ ವಿಸ್ತರಣೆ ಕಾರ್ಯವನ್ನು ಆರಂಭಿಸಲಾಗುತ್ತಿದೆ. ಈ ಯೋಜನೆಗಳು ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲಿವೆ ಎಂದು ಹೇಳಿದರು. ಒಡಿಶಾ ರಾಜ್ಯಪಾಲ ಹರಿಬಾಬು ಕಂಭಮ್ ಪತಿ, ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಸೇರಿದಂತೆ, ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಪಾಲ್ಗೊಂಡರು.
ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ. ಈಗ ಬಿಎಸ್‌ಎನ್‌ಎಲ್ 4 ಜಿ ಮೂಲಕ 26,700 ಕ್ಕೂ ಹೆಚ್ಚು ಹಳ್ಳಿಗಳನ್ನು ಹೈ-ಸ್ಪೀಡ್ ಇಂಟರ್ನೆಟ್ ಸಂಪರ್ಕದೊಂದಿಗೆ ಸಂಪರ್ಕಿಸುತ್ತಿದೆ. ಬಿಎಸ್‌ಎನ್‌ಎಲ್ ಈ ನೆಟ್‌ವರ್ಕ್ ಅನಾವರಣಗೊಳಿಸಿದೆ, ಇದು ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS), ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ (C-DOT) ಮತ್ತು ತೇಜಸ್ ನೆಟ್‌ವರ್ಕ್ಸ್ ಲಿಮಿಟೆಡ್ ಸಹಯೋಗದೊಂದಿಗೆ ಭಾರತದಲ್ಲಿ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಲಾದ ಆಧುನಿಕ ಮತ್ತು ಸುರಕ್ಷಿತ ನೆಟ್ವರ್ಕ್ ವಿಧಾನವಾಗಿದೆ. ಸ್ಥಳೀಯ ಟೆಲಿಕಾಂ ತಂತ್ರಜ್ಞಾನದೊಂದಿಗೆ ಸೇವೆ ನೀಡುತ್ತಿರುವ ವಿಶ್ವದ ಐದನೇ ದೇಶವಾಗಿದೆ.
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel