Advertisement
MIRROR FOCUS

ಬಿಎಸ್ ಎನ್ ಎಲ್ 4ಜಿ ಸೌಲಭ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ | 26,700 ಕ್ಕೂ ಹೆಚ್ಚು ಹಳ್ಳಿಗಳಿಗೆ ಹೈ-ಸ್ಪೀಡ್ ಇಂಟರ್ನೆಟ್

Share
ಬಿಎಸ್ ಎನ್ ಎಲ್ ಅಭಿವೃದ್ಧಿಪಡಿಸಿರುವ 4-ಜಿ ಅಂತರ್ಜಾಲ ಸೌಲಭ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಒಡಿಶಾದ ಝಾರ್ಸುಗುಡದಲ್ಲಿ ಚಾಲನೆ ನೀಡಿದರು. ಇದೇ ವೇಳೆ ಅಮೃತ್ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದರು. ಹಲವು ರೈಲ್ವೆ ಕಾಮಗಾರಿ ಸೇರಿದಂತೆ, ಉನ್ನತ ಶಿಕ್ಷಣ, ಆರೋಗ್ಯ, ಕೌಶಲ್ಯಾಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿದರು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಬಿಎಸ್ ಎನ್ ಎಲ್ ನ ಸ್ವದೇಶಿ 4 – ಜಿ ಸೇವೆ ದೇಶಾದ್ಯಂತ ಇಂದಿನಿಂದ ಆರಂಭವಾಗಿದೆ. ವಿವಿಧ ರಾಜ್ಯಗಳಲ್ಲಿರುವ ಐಐಟಿಗಳ ವಿಸ್ತರಣೆ ಕಾರ್ಯವನ್ನು ಆರಂಭಿಸಲಾಗುತ್ತಿದೆ. ಈ ಯೋಜನೆಗಳು ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲಿವೆ ಎಂದು ಹೇಳಿದರು.  ಒಡಿಶಾ ರಾಜ್ಯಪಾಲ ಹರಿಬಾಬು ಕಂಭಮ್ ಪತಿ, ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಸೇರಿದಂತೆ, ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಪಾಲ್ಗೊಂಡರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್‌ ಮಾಡಿ.
ಈಗ ಬಿಎಸ್‌ಎನ್‌ಎಲ್‌ 4 ಜಿ ಮೂಲಕ 26,700 ಕ್ಕೂ ಹೆಚ್ಚು ಹಳ್ಳಿಗಳನ್ನು ಹೈ-ಸ್ಪೀಡ್ ಇಂಟರ್ನೆಟ್ ಸಂಪರ್ಕದೊಂದಿಗೆ ಸಂಪರ್ಕಿಸುತ್ತಿದೆ. ಬಿಎಸ್‌ಎನ್‌ಎಲ್‌  ಈ ನೆಟ್‌ವರ್ಕ್ ಅನಾವರಣಗೊಳಿಸಿದೆ, ಇದು ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS), ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ (C-DOT) ಮತ್ತು ತೇಜಸ್ ನೆಟ್‌ವರ್ಕ್ಸ್ ಲಿಮಿಟೆಡ್ ಸಹಯೋಗದೊಂದಿಗೆ  ಭಾರತದಲ್ಲಿ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಲಾದ ಆಧುನಿಕ ಮತ್ತು ಸುರಕ್ಷಿತ ನೆಟ್ವರ್ಕ್‌ ವಿಧಾನವಾಗಿದೆ. ಸ್ಥಳೀಯ ಟೆಲಿಕಾಂ ತಂತ್ರಜ್ಞಾನದೊಂದಿಗೆ ಸೇವೆ ನೀಡುತ್ತಿರುವ ವಿಶ್ವದ ಐದನೇ ದೇಶವಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

18 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

2 days ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

3 days ago