ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2022-23 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಇದು ವಿತ್ತ ಸಚಿವರ ಸಾಲ್ಕನೇ ಬಜೆಟ್ ಆಗಿದ್ದು, ಕೋವಿಡ್ ಮೂರನೇ ಅಲೆ ಸಂದರ್ಭದಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್ ನಲ್ಲಿ ಈಗಾಗಲೇ ಸಾಕಷ್ಟು ವಿಷಯಗಳನ್ನು ಘೋಷಣೆಯನ್ನು ಮಾಡಲಾಗಿದೆ. ಇದೇ ವೇಳೆ ಭಾರತವು ಮುಂದಿನ 25 ವರ್ಷಗಳಲ್ಲಿ ಆರ್ಥಿಕತೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು
ಇದೇ ವೇಳೆ ಬಜೆಟ್ ಮಂಡನೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿಯನ್ನು ತಿಳಿಸುತ್ತಾ, ಮುಂದಿನ ಐದು ವರ್ಷಗಳಲ್ಲಿ 60 ಲಕ್ಷ ಹೊಸ ಉದ್ಯೋಗಗಳು ಮತ್ತು 30 ಲಕ್ಷ ಕೋಟಿ ಹೆಚ್ಚುವರಿ ಉತ್ಪಾದನೆಯನ್ನು ಸೃಷ್ಟಿಸುವ ಸಾಮರ್ಥ್ಯದೊಂದಿಗೆ, ಆತ್ಮನಿರ್ಭರ ಭಾರತವನ್ನು ಸಾಧಿಸಲು ಪ್ರೋಡಕ್ಷನ್ ಲಿಂಕ್ಡ್ ಇನ್ಸೆಂಟಿವ್ ಯೋಜನೆಯು ಅತ್ಯುತ್ತಮ ಪ್ರಕ್ರಿಯೆಯನ್ನು ಪಡೆದಿದೆ ಎಂದು ತಿಳಿಸಿದರು.
ಮುಂದಿನ 3 ವರ್ಷಗಳಲ್ಲಿ ಉತ್ತಮ ದಕ್ಷತೆಯೊಂದಿಗೆ 400 ಹೊಸ ತಲೆಮಾರಿನ ವಂದೇ ಭಾರತ್ ರೈಲುಗಳನ್ನು ತರಲಾಗುವುದು. ಮಾತ್ರವಲ್ಲದೆ 3 ವರ್ಷಗಳಲ್ಲಿ ಅಭಿವೃದ್ಧಿಪಡಿಸಲಾಗುವುದು ಮತ್ತು ಮೆಟ್ರೋ ವ್ಯವಸ್ಥೆಯನ್ನು ನಿರ್ಮಿಸಲು ನವೀನ ಮಾರ್ಗಗಳ ಅನುಷ್ಠಾನ ಮಾಡಲಾಗುವುದು ಎಂದರು.