Advertisement
MIRROR FOCUS

ಬಜೆಟ್ 2026-27 : ರಸಗೊಬ್ಬರಗಳಿಗೆ ₹1.71 ಲಕ್ಷ ಕೋಟಿ ಅನುದಾನ, ರೈತರಿಗೆ ಕೈಗೆಟುಕುವ ದರದಲ್ಲಿ ಪೂರೈಕೆ ಖಚಿತ – ಕೇಂದ್ರ ಸರ್ಕಾರ

Share

ಕೇಂದ್ರ ಬಜೆಟ್ 2026-27ರಲ್ಲಿ ರಸಗೊಬ್ಬರ ಇಲಾಖೆಗೆ ₹1.71 ಲಕ್ಷ ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ರಸಾಯನ ಹಾಗೂ ರಸಗೊಬ್ಬರ ಸಚಿವಾಲಯ ಮಾಹಿತಿ ನೀಡಿದೆ. ಈ ಅನುದಾನವು ದೇಶದ ರೈತರಿಗೆ ಸಮಯಕ್ಕೆ ಸರಿಯಾಗಿ ಮತ್ತು ಕೈಗೆಟುಕುವ ದರದಲ್ಲಿ ರಸಗೊಬ್ಬರ ಪೂರೈಕೆಯನ್ನು ಖಚಿತಪಡಿಸಲು ನೆರವಾಗಲಿದೆ ಎಂದು ಸಚಿವಾಲಯ ಹೇಳಿದೆ.

ಬಜೆಟ್‌ನಲ್ಲಿ ಪೋಷಕಾಂಶ ಆಧಾರಿತ ಸಹಾಯಧನ (NBS) ಯೋಜನೆಯಡಿ ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳಿಗೆ ಸರ್ಕಾರ ಬೆಂಬಲ ಮುಂದುವರಿಸಿದೆ. ಇದು , NPK ಪೋಷಕಾಂಶಗಳ ಸಮತೋಲನ ಬಳಕೆ, ಮಣ್ಣಿನ ಗುಣಮಟ್ಟ ಕಾಪಾಡಿಕೊಳ್ಳುವುದು ,ಕೃಷಿ ಉತ್ಪಾದಕತೆ ಹೆಚ್ಚಿಸುವುದು ಎಂಬ ಉದ್ದೇಶ ಹೊಂದಿದೆ ಎಂದು ಸಚಿವಾಲಯ ತಿಳಿಸಿದೆ.

ಬಜೆಟ್‌ನಲ್ಲಿ ಸಹಾಯಧನ ನಿರ್ವಹಣಾ ವ್ಯವಸ್ಥೆ(Fertilizer Subsidy Management System) ಸ್ಥಾಪನೆಗೆ ಮತ್ತು ಮಾಹಿತಿ ತಂತ್ರಜ್ಞಾನ (ICT) ಸಂಬಂಧಿತ ವೆಚ್ಚಗಳಿಗೆ ಸಹ ಅನುದಾನ ಒದಗಿಸಲಾಗಿದೆ. ಇದರಿಂದ ರಸಗೊಬ್ಬರ ವಿತರಣೆ ಪಾರದರ್ಶಕವಾಗಲು ಮತ್ತು ಸಮಯಬದ್ಧವಾಗಲು ಸಾಧ್ಯ ಎಂದು ಹೇಳಲಾಗಿದೆ. ಸರ್ಕಾರ ಜೈವಿಕ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಲು Organic Fertilizers Promotion Policy ಅಡಿಯಲ್ಲಿ ಮಾರುಕಟ್ಟೆ ಅಭಿವೃದ್ಧಿ ನೆರವು, ಸಂಶೋಧನೆ ಮತ್ತು ಅಭಿವೃದ್ಧಿಗೆ ಬೆಂಬಲ, ಆರ್ಗ್ಯಾನಿಕ್ ಫಾರ್ಮಿಂಗ್ ಪ್ರೋತ್ಸಾಹ ಎಂಬ ಯೋಜನೆಗಳಿಗೆ ಅನುದಾನ ಮೀಸಲಿಟ್ಟಿದೆ.  ಕೇಂದ್ರ ಸರ್ಕಾರ ರೈತರಿಗೆ ಕಡಿಮೆ ದರದಲ್ಲಿ ರಸಗೊಬ್ಬರಗಳನ್ನು ಸಮಯಕ್ಕೆ ಸರಿಯಾಗಿ ಒದಗಿಸುವ ತನ್ನ ಬದ್ಧತೆಯನ್ನು ಬಜೆಟ್ ಮತ್ತೊಮ್ಮೆ ದೃಢಪಡಿಸಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

19 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

19 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

20 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

20 hours ago

ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ

ಎಥೆನಾಲ್‌ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…

20 hours ago

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

2 days ago