ಇದೇ ಭಾನುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಕುರಿತು ರಾಜ್ಯದ ಜನತೆ ಕಾತರದಿಂದ ಕಾಯುತ್ತಿದ್ದು, ವಿವಿಧ ಕ್ಷೇತ್ರಗಳು ಹಲವು ನಿರೀಕ್ಷೆಗಳೊಂದಿಗೆ ಎದುರುನೋಡುತ್ತಿವೆ.
ಬಜೆಟ್ ಕುರಿತು ಆಕಾಶವಾಣಿಯೊಂದಿಗೆ ಮಾತನಾಡಿದ ಎಫ್‌ಕೆಸಿಸಿಐ ಅಧ್ಯಕ್ಷೆ ಉಮಾರೆಡ್ಡಿ, ಈ ಬಾರಿ ಬಜೆಟ್‌ನಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಣ್ಣ ಹಾಗೂ ಸೂಕ್ಷ್ಮ ಕೈಗಾರಿಕೆಗಳು ರಾಜ್ಯದ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಈ ಕ್ಷೇತ್ರಕ್ಕೆ ವಿಶೇಷ ಕೈಗಾರಿಕಾ ನೀತಿ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಾಯಿಸಿದ್ದಾರೆ. ಉದ್ಯೋಗ ಸೃಷ್ಟಿ ಹಾಗೂ ಕೈಗಾರಿಕಾ ಬೆಳವಣಿಗೆಗೆ ಇವುಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




