ಕಳೆದ 10 ವರ್ಷದಲ್ಲಿ ಕೃಷಿ, ಹೈನುಗಾರಿಕೆ, ಪೂರಕ ವಲಯಗಳಿಗೆ ಬಜೆಟ್ ನಲ್ಲಿ ಅನುದಾನ ಗಣನೀಯ ಏರಿಕೆಯಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಲೋಕಸಭೆಯಲ್ಲಿ ಹೇಳಿದ್ದಾರೆ.………ಮುಂದೆ ಓದಿ……..
2025-26ರ ಸಾಲಿನಲ್ಲಿ ಕೃಷಿ ವಲಯಕ್ಕೆ ನೀಡಲಾದ ಬಜೆಟ್ ಅನುದಾನ ಕುರಿತ ಚರ್ಚೆಯಲ್ಲಿ ಉತ್ತರ ನೀಡಿದ ಅವರು, ದೇಶದ ಅರ್ಥವ್ಯವಸ್ಥೆಯ ಆತ್ಮದಂತೆ ಇರುವ ರೈತರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕಟಿಬದ್ಧವಾಗಿದೆ ಎಂದರು. ಸ್ವಾತಂತ್ರ್ಯ ನಂತರ 60 ವರ್ಷಗಳಲ್ಲಿ 60 ಸಾವಿರ ಕೋಟಿ ರೂಪಾಯಿ ಕೃಷಿ ಸಾಲ ಮನ್ನಾ ಕುರಿತು ಪ್ರಚಾರ ಮಾಡಲಾಗುತ್ತಿದೆ. ಆದರೆ, 2014ರ ನಂತರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 3 ಲಕ್ಷ 68 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಯೋಜನೆಗಳಿಗೆ ಬಿಡುಗಡೆಯಾದ ಹಣದಲ್ಲಿ ಕೇವಲ ಶೇಕಡ 15ರಷ್ಟು ಮಾತ್ರ ಫಲಾನುಭವಿಗಳನ್ನು ತಲುಪುತ್ತಿತ್ತು. ಆದರೆ, ಎನ್ ಡಿಎ ಸರ್ಕಾರದ ಅವಧಿಯಲ್ಲಿ ಡಿಬಿಟಿ ಮೂಲಕ ಶೇಕಡ 100ರಷ್ಟು ಹಣ ಫಲಾನುಭವಿಗಳಿಗೆ ತಲುಪುವುದನ್ನು ಖಾತರಿಪಡಿಸಲಾಗಿದೆ ಎಂದರು. ಕೃಷಿ ವಲಯದಲ್ಲಿ ಯಾಂತ್ರೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಸಣ್ಣ ಹಿಡುವಳಿದಾರರು ಹಾಗೂ ಅಂಚಿನ ರೈತರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನ, ರಾಶಿಗಳ ಸಂಯೋಜನೆ, ಮತ್ತು ಜನ್ಮಕುಂಡಲಿಯ ಭಾವಗಳು…
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…