ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರಿಂದ ರಾಜ್ಯ ಬಜೆಟ್‌ ಮಂಡನೆ | ಅಡಿಕೆ ಹಳದಿ ರೋಗ ಸಂಶೋಧನೆ ಹಾಗೂ ಪರ್ಯಾಯ ಬೆಳೆ ಪ್ರೋತ್ಸಾಹಕ್ಕೆ 25 ಕೋಟಿ ರೂಪಾಯಿ ಘೋಷಣೆ

March 8, 2021
1:18 PM
 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯ ಬಜೆಟ್‌ ಮಂಡನೆ ಮಾಡುತ್ತಿದ್ದು ಅಡಕೆ ಹಳದಿ ರೋಗ ಸಂಶೋಧನೆ ಹಾಗೂ ಪರ್ಯಾಯ ಬೆಳೆ ಪ್ರೋತ್ಸಾಹಕ್ಕೆ 25  ಕೋಟಿ ರೂಪಾಯಿಯನ್ನು ಘೋಷಣೆ ಮಾಡಿದ್ದಾರೆ. ಉಳಿದಂತೆ ಕೃಷಿ ಪರವಾದ ವಿವಿಧ ಘೋಷಣೆ ಮಾಡಿದ್ದಾರೆ.
ರಾಜ್ಯ ಬಜೆಟ್ ಈವರೆಗಿನ ಸಂಕ್ಷಿಪ್ತ ಮಾಹಿತಿ ಹೀಗಿದೆ….
  • 19 ಜಿಲ್ಲೆಗಳಲ್ಲಿ 25 ಹಾಸಿಗೆಗಳ ಐಸಿಯು ನಿರ್ಮಾಣ
  • ಪ್ರತಿ ಜಿಲ್ಲೆಗೆ ಒಂದರಂತೆ ಗೋಶಾಲೆ ನಿರ್ಮಾಣ
  •  ರಾಮನಗರದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ
  •  ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ 10 ಕೋಟಿ ಅನುದಾನ
  • ಡಾ. ಎಸ್ಎಲ್ ಭೈರಪ್ಪ ವಿರಚಿತ ‘ಪರ್ವ’ ನಾಟಕ ಪ್ರದರ್ಶನಕ್ಕೆ 1 ಕೋಟಿ ರುಪಾಯಿ ಅನುದಾನ
  •   ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ಪ್ರಸ್ತಾವನೆ; ಕೃಷ್ಣ ಮೇಲ್ದಂಡೆ ಯೋಜನೆಗೂ ರಾಷ್ಟ್ರೀಯ ಯೋಜನೆಯ ಮಾನ್ಯತೆ ಪಡೆಯಲು ಕ್ರಮ
  •  ರಾಜ್ಯದ ಆಯ್ದ ಮಹಾನಗರ ಪಾಲಿಕೆಗಳಲ್ಲಿ ಪ್ರಾಯೋಗಿಕವಾಗಿ ಸಂಜೆ ಕಾಲೇಜು ಪ್ರಾರಂಭ
  • ಬೆಂಗಳೂರು ಮತ್ತು ಇತರೆ ಮಹಾ ನಗರದ ಅಂಗನವಾಡಿ ಗಳನ್ನ ಹಂತ ಹಂತವಾಗಿ ಶಿಶುಪಾಲನಾ ಕೇಂದ್ರಗಳಾಗಿ ಉನ್ನತೀರಣ.
  • ಜಿಲ್ಲಾ ಕೇಂದ್ರಗಳಲ್ಲಿ ತಲಾ ಎರಡು ಪ್ರಮುಖ ಸರ್ಕಾರಿ ಕಚೇರಿಗಳಲ್ಲಿ ಶಿಶುಪಾಲನ ಕೇಂದ್ರ ಸ್ಥಾಪನೆ
  •  ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ , ಕಿತ್ತೂರು ಕೋಟೆ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ
  • ಬಾಗಲಕೋಟೆಯ ಗುಳೇದಗುಡ್ಡೆಯಲ್ಲಿ ಜವಳಿಪಾರ್ಕ್‌ ಸ್ಥಾಪನೆ
  • ಬೆಂಗಳೂರು ಗಾರ್ಮೆಂಟ್ ಮಹಿಳಾ ಸಿಬ್ಬಂದಿ, ಮಹಿಳಾ ಕಾರ್ಮಿಕಕರಿಗೆ ರಿಯಾಯಿತಿ ದರದಲ್ಲಿ ನೀಡುವ ಬಸ್ ಪಾಸ್ ವನಿತಾ ಸಂಗಾತಿ ಯೋಜನೆಗೆ 30 ಕೋಟಿ ಅನುದಾನ
  •  ಉಡುಪಿ ಜಿಲ್ಲೆಯ ತ್ರಾಸಿ, ಮರವಂತೆ, ಒತ್ತಿನೆಣೆ, ಸೋಮೇಶ್ವರ ಸೇರಿದಂತೆ ಕಡಲ ತೀರದ ಅಭಿವೃದ್ಧಿಗೆ ಹತ್ತು ಕೋಟಿ ರೂ. ಮೀಸಲು
  •  ಚಿತ್ರದುರ್ಗ ಜಿಲ್ಲೆಯಲ್ಲಿ ಹೊಸ ವೈದ್ಯಕೀಯ ಕಾಲೇಜು ಪ್ರಾರಂಭ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಡಿ ಯೋಜನೆ
  •  ರಾಜ್ಯದಲ್ಲಿ ಹೊಸದಾಗಿ 52 ಬಸ್ ನಿಲ್ದಾಣಗಳ ಸ್ಥಾಪನೆ
  • ಕೃಷಿ ವಿವಿಯಲ್ಲಿ ರೈತರ ಮಕ್ಕಳಿಗೆ ಮೀಸಲಾತಿಯನ್ನ ಶೇ.40ರಿಂದ ಶೇ.50ಕ್ಕೆ ಏರಿಕೆ 
  • ಕೃಷಿ ಸಿಂಚಾಯ್ ಯೋಜನೆಗೆ 831 ಕೋಟಿ ಅನುದಾನ
  •  2 ಕೋಟಿ ವೆಚ್ಚದಲ್ಲಿ ಶಿವಮೊಗ್ಗ ಪಶುವೈದ್ಯಕೀಯ ಕಾಲೇಜಿನಲ್ಲಿ ಸಂಶೋಧನ ಕೇಂದ್ರ
  •  ಜಕ್ಕೂರಿನಲ್ಲಿರುವ ಸರ್ಕಾರಿ ವೈಮಾನಿಕ ತರಬೇತಿ ಶಾಲೆಗೆ 2 ಕೋಟಿ ರೂ ಅನುದಾನ
  •  ಮೀನುಮರಿ ಉತ್ಪಾದನಾ ಕೇಂದ್ರಗಳ ಉನ್ನತೀಕರಣಕ್ಕೆ 2 ಕೋಟಿ
  • ತುಮಕೂರು ಸ್ವಾಮೀಜಿಗಳ ಮತ್ತು ಪೇಜಾವರ ವಿಶ್ವೇಶ್ವರ ತೀರ್ಥ ಶ್ರೀಪಾದರ ಸ್ಮೃತಿವನ ಕ್ಕೆ ತಲಾ 2 ಕೋಟಿ ರೂ. ಅನುದಾನ
  • ಹಪ್ಪಳ, ಉಪ್ಪಿನಕಾಯಿ, ರೊಟ್ಟಿ, ಮಸಾಲೆಪುಡಿ ಬ್ರ್ಯಾಂಡಿಂಗ್ ಗೆ ಮಹಿಳೆಯರಿಗೆ 25 ಸಾವಿರ ತಾಂತ್ರಿಕ ನೆರವು
  •  ವೀರಶೈವ ಲಿಂಗಾಯತ ಅಭಿವೃದ್ಧಿ 500 ಕೋಟಿ, ಒಕ್ಕಲಿಗೆ ಅಭಿವೃದ್ಧಿ ನಿಗಮ ಸ್ಥಾಪನೆ, ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 50 ಕೋಟಿ, ಆದಿಚುಂಚನಗಿರಿ ಮಠಕ್ಕೆ 10 ಕೋಟಿ, ಅಯೋಧ್ಯೆಯಲ್ಲಿ ಶ್ರೀರಾಮಜನ್ಮಭೂಮಿಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ಮೀಸಲು
  •  ಥಾರ್ ಪಾರ್ಕ್, ದೇವಣಿ ತಳಿಗಳ ಅಭಿವೃದ್ಧಿಗೆ ಯೋಜನೆ
  •  ಯಾಂತ್ರೀಕೃತ ದೋಣಿಗಳಿಗೆ ತೆರಿಗೆ ರಹಿತ ಡೀಸೆಲ್‌
  •  ಕೇಂಪೇಗೌಡ ಏರ್ಪೋರ್ಟ್ ಎರಡನೇ ರನ್ ವೇ, ಟರ್ಮಿನಲ್ ಕಟ್ಟಡ ನಿರ್ಮಾಣಕ್ಕೆ 4751 ಕೋಟಿ ಮೀಸಲು
  • ಕರಾವಳಿ ಭಾಗದಲ್ಲಿ ಗ್ರಾಮೀಣ ಭಾಗದಲ್ಲಿ ಸಂಪರ್ಕ ವ್ಯವಸ್ಥೆಗೆ ಕಾಲು ಸೇತುವೆ ನಿರ್ಮಾಣಕ್ಕೆ  ಅನುದಾನ
Advertisement
Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ
January 30, 2026
8:05 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ
January 30, 2026
7:57 AM
by: ಮಿರರ್‌ ಡೆಸ್ಕ್
ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror