ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025 ರಲ್ಲಿ ಎಲ್ಲ ಕೃಷಿ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಶಾಸನ ಬದ್ಧ ಖಾತ್ರಿ ಕಾನೂನು ಜಾರಿ ಆಗಬೇಕು ಎಂದು ರಾಜ್ಯದ ರೈತ ಸಂಘಟನೆಗಳು ಒತ್ತಾಯಿಸಿವೆ.
ಎಲ್ಲಾ ಬೆಳೆಗಳಿಗೂ ಬೆಳೆ ವಿಮೆ ಜಾರಿಯಾಗಬೇಕು. ಪ್ರಕೃತಿ ವಿಕೋಪದಿಂದಾಗುವ ಬೆಳೆನಷ್ಟಕ್ಕೆ ವಿಮೆ ಪರಿಹಾರ ಸಿಗಬೇಕು. ಕೃಷಿಗೆ ಬಳಸುವ ಕೀಟನಾಶಕ ರಸಗೊಬ್ಬರ, ಹನಿ ನೀರಾವರಿ ಉಪಕರಣಗಳು ಟ್ಯಾಕ್ಟರ್ ಬಿಡಿಭಾಗಗಳ ಜಿಎಸ್‌ಟಿ ತೆರಿಗೆ ರದ್ದುಗೊಳಿಸಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ. ಕಳಪೆ ಬಿತ್ತನೆ ಬೀಜ, ರಾಸಾಯನಿಕ ಗೊಬ್ಬರ, ನರ್ಸರಿ ಸಸಿಗಳು, ಕೀಟನಾಶಕ ಮಾರಾಟ ಮಾಡುವವರಿಗೆ ಜಾಮೀನು ರಹಿತ ಕಠಿಣ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿ ಮಾಡಬೇಕು ಎಂದು ಅವರು ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel