Advertisement
MIRROR FOCUS

ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರಿಂದ ರಾಜ್ಯ ಬಜೆಟ್‌ ಮಂಡನೆ | ಅಡಿಕೆ ಹಳದಿ ರೋಗ ಸಂಶೋಧನೆ ಹಾಗೂ ಪರ್ಯಾಯ ಬೆಳೆ ಪ್ರೋತ್ಸಾಹಕ್ಕೆ 25 ಕೋಟಿ ರೂಪಾಯಿ ಘೋಷಣೆ

Share
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯ ಬಜೆಟ್‌ ಮಂಡನೆ ಮಾಡುತ್ತಿದ್ದು ಅಡಕೆ ಹಳದಿ ರೋಗ ಸಂಶೋಧನೆ ಹಾಗೂ ಪರ್ಯಾಯ ಬೆಳೆ ಪ್ರೋತ್ಸಾಹಕ್ಕೆ 25  ಕೋಟಿ ರೂಪಾಯಿಯನ್ನು ಘೋಷಣೆ ಮಾಡಿದ್ದಾರೆ. ಉಳಿದಂತೆ ಕೃಷಿ ಪರವಾದ ವಿವಿಧ ಘೋಷಣೆ ಮಾಡಿದ್ದಾರೆ.
ರಾಜ್ಯ ಬಜೆಟ್ ಈವರೆಗಿನ ಸಂಕ್ಷಿಪ್ತ ಮಾಹಿತಿ ಹೀಗಿದೆ….
  • 19 ಜಿಲ್ಲೆಗಳಲ್ಲಿ 25 ಹಾಸಿಗೆಗಳ ಐಸಿಯು ನಿರ್ಮಾಣ
  • ಪ್ರತಿ ಜಿಲ್ಲೆಗೆ ಒಂದರಂತೆ ಗೋಶಾಲೆ ನಿರ್ಮಾಣ
  • ರಾಮನಗರದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ
  • ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ 10 ಕೋಟಿ ಅನುದಾನ
  • ಡಾ. ಎಸ್ಎಲ್ ಭೈರಪ್ಪ ವಿರಚಿತ ‘ಪರ್ವ’ ನಾಟಕ ಪ್ರದರ್ಶನಕ್ಕೆ 1 ಕೋಟಿ ರುಪಾಯಿ ಅನುದಾನ
  • ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ಪ್ರಸ್ತಾವನೆ; ಕೃಷ್ಣ ಮೇಲ್ದಂಡೆ ಯೋಜನೆಗೂ ರಾಷ್ಟ್ರೀಯ ಯೋಜನೆಯ ಮಾನ್ಯತೆ ಪಡೆಯಲು ಕ್ರಮ
  • ರಾಜ್ಯದ ಆಯ್ದ ಮಹಾನಗರ ಪಾಲಿಕೆಗಳಲ್ಲಿ ಪ್ರಾಯೋಗಿಕವಾಗಿ ಸಂಜೆ ಕಾಲೇಜು ಪ್ರಾರಂಭ
  • ಬೆಂಗಳೂರು ಮತ್ತು ಇತರೆ ಮಹಾ ನಗರದ ಅಂಗನವಾಡಿ ಗಳನ್ನ ಹಂತ ಹಂತವಾಗಿ ಶಿಶುಪಾಲನಾ ಕೇಂದ್ರಗಳಾಗಿ ಉನ್ನತೀರಣ.
  • ಜಿಲ್ಲಾ ಕೇಂದ್ರಗಳಲ್ಲಿ ತಲಾ ಎರಡು ಪ್ರಮುಖ ಸರ್ಕಾರಿ ಕಚೇರಿಗಳಲ್ಲಿ ಶಿಶುಪಾಲನ ಕೇಂದ್ರ ಸ್ಥಾಪನೆ
  • ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ , ಕಿತ್ತೂರು ಕೋಟೆ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ
  • ಬಾಗಲಕೋಟೆಯ ಗುಳೇದಗುಡ್ಡೆಯಲ್ಲಿ ಜವಳಿಪಾರ್ಕ್‌ ಸ್ಥಾಪನೆ
  • ಬೆಂಗಳೂರು ಗಾರ್ಮೆಂಟ್ ಮಹಿಳಾ ಸಿಬ್ಬಂದಿ, ಮಹಿಳಾ ಕಾರ್ಮಿಕಕರಿಗೆ ರಿಯಾಯಿತಿ ದರದಲ್ಲಿ ನೀಡುವ ಬಸ್ ಪಾಸ್ ವನಿತಾ ಸಂಗಾತಿ ಯೋಜನೆಗೆ 30 ಕೋಟಿ ಅನುದಾನ
  • ಉಡುಪಿ ಜಿಲ್ಲೆಯ ತ್ರಾಸಿ, ಮರವಂತೆ, ಒತ್ತಿನೆಣೆ, ಸೋಮೇಶ್ವರ ಸೇರಿದಂತೆ ಕಡಲ ತೀರದ ಅಭಿವೃದ್ಧಿಗೆ ಹತ್ತು ಕೋಟಿ ರೂ. ಮೀಸಲು
  • ಚಿತ್ರದುರ್ಗ ಜಿಲ್ಲೆಯಲ್ಲಿ ಹೊಸ ವೈದ್ಯಕೀಯ ಕಾಲೇಜು ಪ್ರಾರಂಭ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಡಿ ಯೋಜನೆ
  • ರಾಜ್ಯದಲ್ಲಿ ಹೊಸದಾಗಿ 52 ಬಸ್ ನಿಲ್ದಾಣಗಳ ಸ್ಥಾಪನೆ
  • ಕೃಷಿ ವಿವಿಯಲ್ಲಿ ರೈತರ ಮಕ್ಕಳಿಗೆ ಮೀಸಲಾತಿಯನ್ನ ಶೇ.40ರಿಂದ ಶೇ.50ಕ್ಕೆ ಏರಿಕೆ
  • ಕೃಷಿ ಸಿಂಚಾಯ್ ಯೋಜನೆಗೆ 831 ಕೋಟಿ ಅನುದಾನ
  • 2 ಕೋಟಿ ವೆಚ್ಚದಲ್ಲಿ ಶಿವಮೊಗ್ಗ ಪಶುವೈದ್ಯಕೀಯ ಕಾಲೇಜಿನಲ್ಲಿ ಸಂಶೋಧನ ಕೇಂದ್ರ
  • ಜಕ್ಕೂರಿನಲ್ಲಿರುವ ಸರ್ಕಾರಿ ವೈಮಾನಿಕ ತರಬೇತಿ ಶಾಲೆಗೆ 2 ಕೋಟಿ ರೂ ಅನುದಾನ
  • ಮೀನುಮರಿ ಉತ್ಪಾದನಾ ಕೇಂದ್ರಗಳ ಉನ್ನತೀಕರಣಕ್ಕೆ 2 ಕೋಟಿ
  • ತುಮಕೂರು ಸ್ವಾಮೀಜಿಗಳ ಮತ್ತು ಪೇಜಾವರ ವಿಶ್ವೇಶ್ವರ ತೀರ್ಥ ಶ್ರೀಪಾದರ ಸ್ಮೃತಿವನ ಕ್ಕೆ ತಲಾ 2 ಕೋಟಿ ರೂ. ಅನುದಾನ
  • ಹಪ್ಪಳ, ಉಪ್ಪಿನಕಾಯಿ, ರೊಟ್ಟಿ, ಮಸಾಲೆಪುಡಿ ಬ್ರ್ಯಾಂಡಿಂಗ್ ಗೆ ಮಹಿಳೆಯರಿಗೆ 25 ಸಾವಿರ ತಾಂತ್ರಿಕ ನೆರವು
  • ವೀರಶೈವ ಲಿಂಗಾಯತ ಅಭಿವೃದ್ಧಿ 500 ಕೋಟಿ, ಒಕ್ಕಲಿಗೆ ಅಭಿವೃದ್ಧಿ ನಿಗಮ ಸ್ಥಾಪನೆ, ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 50 ಕೋಟಿ, ಆದಿಚುಂಚನಗಿರಿ ಮಠಕ್ಕೆ 10 ಕೋಟಿ, ಅಯೋಧ್ಯೆಯಲ್ಲಿ ಶ್ರೀರಾಮಜನ್ಮಭೂಮಿಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ಮೀಸಲು
  • ಥಾರ್ ಪಾರ್ಕ್, ದೇವಣಿ ತಳಿಗಳ ಅಭಿವೃದ್ಧಿಗೆ ಯೋಜನೆ
  • ಯಾಂತ್ರೀಕೃತ ದೋಣಿಗಳಿಗೆ ತೆರಿಗೆ ರಹಿತ ಡೀಸೆಲ್‌
  • ಕೇಂಪೇಗೌಡ ಏರ್ಪೋರ್ಟ್ ಎರಡನೇ ರನ್ ವೇ, ಟರ್ಮಿನಲ್ ಕಟ್ಟಡ ನಿರ್ಮಾಣಕ್ಕೆ 4751 ಕೋಟಿ ಮೀಸಲು
  • ಕರಾವಳಿ ಭಾಗದಲ್ಲಿ ಗ್ರಾಮೀಣ ಭಾಗದಲ್ಲಿ ಸಂಪರ್ಕ ವ್ಯವಸ್ಥೆಗೆ ಕಾಲು ಸೇತುವೆ ನಿರ್ಮಾಣಕ್ಕೆ  ಅನುದಾನ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

3 minutes ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

18 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago