ಕರ್ನಾಟಕದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಪ್ರೋತ್ಸಾಹ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ(Ministry of rural development) ಕರ್ನಾಟಕ ರಾಜ್ಯಕ್ಕೆ ಬೃಹತ್ ಮೂಲಸೌಕರ್ಯ ಯೋಜನೆ ಕೈಗೆತ್ತಿಕೊಂಡಿದೆ. ಗ್ರಾಮೀಣ ಸಂಪರ್ಕವನ್ನು(rural connection) ಬಲಪಡಿಸಲು ಮತ್ತು ಆರ್ಥಿಕ ಅಭಿವೃದ್ಧಿಯನ್ನು ವೇಗಗೊಳಿಸಲು ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
Advertisement
Advertisement
ಕರ್ನಾಟಕದಲ್ಲಿ ಗ್ರಾಮೀಣ ಸಂಪರ್ಕವನ್ನು ಬಲಪಡಿಸಲು ಮತ್ತು ಆರ್ಥಿಕ ಅಭಿವೃದ್ಧಿಯನ್ನು ವೇಗಗೊಳಿಸಲು ಗ್ರಾಮೀಣಾಭಿವೃದ್ಧಿ ಸಚಿವಾಲಯವು PM-JANMAN ಯೋಜನೆಯಡಿ 23.766 km ಉದ್ದದ 18 ರಸ್ತೆಗಳು ಮತ್ತು 2 ಸೇತುವೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. 25.1796 ಕೋಟಿ ಅಂದಾಜು ವೆಚ್ಚದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಪ್ರಕಟಣೆಯಲ್ಲಿ ಕೇಂದ್ರ ಸರ್ಕಾರ ತಿಳಿಸಿದೆ.
- ಗ್ರಾಮೀಣ ಪ್ರದೇಶಗಳಲ್ಲಿ ಸಂಪರ್ಕವನ್ನು ಸುಧಾರಿಸುವ ಮೂಲಕ ದುರ್ಬಲ ಬುಡಕಟ್ಟು ಗುಂಪುಗಳ ಸಾಮಾಜಿಕ-ಆರ್ಥಿಕ ಪರಿಸ್ಥಿತಿಗಳನ್ನು ಸುಧಾರಿಸುವುದು, ಹಳ್ಳಿಗಳು ಮತ್ತು ನಗರ ಕೇಂದ್ರಗಳ ನಡುವಿನ ಅಂತರವನ್ನು ಕಡಿಮೆ ಮಾಡುವುದು, ದುರ್ಬಲ ಬುಡಕಟ್ಟು ಕುಟುಂಬಗಳು ಮತ್ತು ವಸಾಹತುಗಳ ಸ್ವಾವಲಂಬನೆಯನ್ನು ಸಕ್ರಿಯಗೊಳಿಸುವ ಉದ್ದೇಶವಾಗಿದೆ.
- ಪ್ರದೇಶದಲ್ಲಿ ಆರ್ಥಿಕ ಅಭಿವೃದ್ಧಿ, ವ್ಯಾಪಾರ ಮತ್ತು ವಾಣಿಜ್ಯವನ್ನು ಉತ್ತೇಜಿಸುವ ಉದ್ದೇಶ.
- ಉದ್ಯೋಗಗಳನ್ನು ರಚಿಸಿ ಮತ್ತು ಸ್ಥಳೀಯ ಆರ್ಥಿಕತೆಯನ್ನು ಹೆಚ್ಚಿಸುವ ಗುರಿ
- ಸಮೃದ್ಧ ಮತ್ತು ಅಭಿವೃದ್ಧಿ ಹೊಂದಿದ ವಿಕಸಿತ ಭಾರತದ ಕನಸು ನನಸಾಗಿಸುವ ನಿಟ್ಟಿನಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ.
– ಅಂತರ್ಜಾಲ ಮಾಹಿತಿ
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement