ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಎರಡು ದಿನಗಳ ಕಾಲ ದೇಶವ್ಯಾಪಿ ಬಂದ್ ಗೆ ಕರೆ ನೀಡಿವೆ.ಬ್ಯಾಂಕ್ ಒಕ್ಕೂಟಗಳು ಮಾ. 28 ಮತ್ತು ಮಾ. 29 ರಂದು ಮುಷ್ಕರಕ್ಕೆ ಕರೆ ನೀಡಿವೆ, ಹೀಗಾಗಿ ಬ್ಯಾಂಕ್ ಸೇವೆಯಲ್ಲಿ ಎರಡು ದಿನಗಳ ಕಾಲ ವ್ಯತ್ಯಯ ಸಾಧ್ಯತೆ ಇದೆ. ರಾಜ್ಯದಲ್ಲಿ ರಾಜ್ಯ ಸರ್ಕಾರದಿಂದ ಸಹಾಯಧನವನ್ನು ಒದಗಿಸಿದ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳ ಸೇವೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗಿದೆ.
ಬ್ಯಾಂಕ್ ಮಾತ್ರವಲ್ಲ ಅಂಚೆ, ಟೆಲಿಕಾಂ, ವಿಮೆ ಸೇರಿದಂತೆ ಇತರ ಕ್ಷೇತ್ರಗಳೂ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಈ ಕ್ಷೇತ್ರಗಳಲ್ಲೂ ಎರಡು ದಿನಗಳ ಕಾಲ ಸೇವೆಯಲ್ಲಿ ವ್ಯತ್ಯಯವಾಗಬಹುದು. ಮುಷ್ಕರಕ್ಕೆ ಹಿಂದ್ ಮಜ್ದೂರ್ ಸಭಾ , ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU), ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (INTUC), ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…