#Arecanut | ಅಸ್ಸಾಂನಲ್ಲಿ ಮತ್ತೆ ಅಡಿಕೆ ಕಳ್ಳಸಾಗಾಣಿಕೆ ಪತ್ತೆ | 15 ಟನ್‌ ಬರ್ಮಾ ಅಡಿಕೆ ವಶ |

August 19, 2023
2:08 PM
ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಲೇ ಇದೆ. ಇದೀಗ ಅಸ್ಸಾಂನ ಹೈಲಕಂಡಿಯ ಗ್ರಾಮದ ಮನೆಯೊಂದರಲ್ಲಿ ದಾಸ್ತಾನಿದ್ದ ಸುಮಾರು 300 ಚೀಲ ಅಡಿಕೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಅಸ್ಸಾಂನ ಹೈಲಕಂಡಿಯ ಗ್ರಾಮವೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 300 ಚೀಲದಲ್ಲಿದ್ದ 15 ಟನ್ ಬರ್ಮಾ ಅಡಿಕೆಯನ್ನು  ಹೈಲಕಂಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳ್ಳಸಾಗಾಣಿಕೆ ಆರೋಪಿ ರೋಸನ್‌ ಉದ್ದೀನ್‌ ವಶಕ್ಕೆ ತೆಗೆದುಕೊಂಡಿದ್ದಾರೆ.

Advertisement
Advertisement

ಮನೆಯಲ್ಲಿ ಅಕ್ರಮವಾಗಿ ಅಡಿಕೆ ಸಂಗ್ರಹಿಸಿಟ್ಟಿರುವ ಮಾಹಿತಿ ಆಧಾರದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭ ಅಡಿಕೆ ದಾಸ್ತಾನು ಪತ್ತೆಯಾಗಿದೆ. ಬರ್ಮಾ ಅಡಿಕೆ ಭಾರತದೊಳಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಹಾಗಿದ್ದರೂ ತಲೆಹೊರೆಯ ಮೂಲಕ ದೇಶದ ಗಡಿಭಾಗಗಳಲ್ಲಿ ಅಡಿಕೆ ತಂದು ದಾಸ್ತಾನು ಇರಿಸುವುದು ನಡೆಯುತ್ತಿದೆ. ಪೊಲೀಸರು ಆಗಾಗ ದಾಳಿ ನಡೆಸಿದರೂ ಈ ಜಾಲ ನಿರಂತರವಾಗಿ ನಡೆಯುತ್ತಿದೆ.

Advertisement

ಹೀಗೇ ದಾಸ್ತಾನು ಆಗಿರುವ ಅಡಿಕೆ ಭಾರತದ ವಿವಿಧ ಕಡೆಗಳಿಗೆ ಬರುತ್ತಿದೆ. ಈಚೆಗೆ ಅದೇ ಮಾದರಿಯಲ್ಲಿ ದಾಸ್ತಾನು ಆಗಿರುವ ಕಳಪೆ ಗುಣಮಟ್ಟದ ಅಡಿಕೆಯು ದಕ್ಷಿಣ ಕನ್ನಡ ಸೇರಿದಂತೆ ದೇಶದ ಹಲವು ಕಡೆಗೆ  ಅಡಿಕೆ ಬಂದಿರುವ ಬಗ್ಗೆ ಮಾರುಕಟ್ಟೆ ವಲಯ ಹೇಳುತ್ತದೆ. ಈ ಕಾರಣದಿಂದ ಇಲ್ಲಿನ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |
April 28, 2024
9:26 PM
by: ಪ್ರಬಂಧ ಅಂಬುತೀರ್ಥ
ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ
April 28, 2024
9:24 PM
by: The Rural Mirror ಸುದ್ದಿಜಾಲ
ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |
April 28, 2024
4:55 PM
by: The Rural Mirror ಸುದ್ದಿಜಾಲ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |
April 28, 2024
4:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror