ರಿಯಾಯಿತಿ ದರದ ಹೊಸ ಬಸ್ಸು ಪಾಸುಗಳ ವಿತರಣೆ

November 18, 2020
11:21 AM

ರಾಜ್ಯರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಸಕಾಲ ಸಂಬಂಧಿತ ಸೇವೆಗಳಾದ ವಿದ್ಯಾರ್ಥಿ ರಿಯಾಯಿತಿ ದರದ ಬಸ್ಸುಪಾಸು, ವಿಕಲಚೇತನರ ರಿಯಾಯಿತಿ ಬಸ್ಸುಪಾಸು, ಅಂಧರ ಉಚಿತ ಬಸ್ಸುಪಾಸು, ಸ್ವಾತಂತ್ರ್ಯ ಹೋರಾಟಗಾರರ ಉಚಿತ ಬಸ್ಸುಪಾಸು, ಸ್ವಾತಂತ್ರ್ಯ ಹೋರಾಟಗಾರರ ಪತ್ನಿ/ವಿಧವಾ ಪತ್ನಿಯರ ಉಚಿತ ಕೂಪನ್, ಅಪಘಾತ ಪರಿಹಾರ ನಿಧಿ ಇವುಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ನಿರ್ವಹಿಸಲಾಗುತ್ತದೆ.

ನಿಗಮದ ಬಸ್ಸುಪಾಸು ಪಡೆಯುವ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಸೇವಾಸಿಂಧು ಪೋರ್ಟಲ್‍ಗೆ ಅಪ್‍ಲೋಡ್ ಮಾಡಿದ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಸಂಬಂಧಪಟ್ಟ ಶಾಲಾ/ಕಾಲೇಜುಗಳಲ್ಲಿ ನೀಡಬೇಕಾಗಿರುತ್ತದೆ. ಪಾಸಿನ ಶುಲ್ಕವನ್ನು ಶಾಲಾ/ಕಾಲೇಜಿನಲ್ಲಿ ಪಾವತಿಸಿ ಶಾಲಾ/ಕಾಲೇಜು ಮುಖಾಂತರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸು ನಿಲ್ದಾಣದ ಪಾಸ್‍ ಕೌಂಟರ್‍ನಲ್ಲಿ ಮಾತ್ರ ಪಾವತಿಸಲು ಅವಕಾಶವಿರುತ್ತದೆ.

ಸಂಬಂಧಪಟ್ಟಎಲ್ಲಾ ದಾಖಲೆಗಳನ್ನು JPEG ಹಾಗೂ PDF ನಮೂನೆಯಲ್ಲಿ ಸೇವಾಸಿಂಧು ಪೋರ್ಟಲ್ ನಲ್ಲಿಅಪ್‍ಲೋಡ್ ಮಾಡಿ ಸದರಿ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಹಾಗೂ ಪಾಸ್‍ನ ಶುಲ್ಕವನ್ನು ನಿಗಮದ ಪಾಸ್‍ಕೌಂಟರ್‍ನಲ್ಲಿ ನೀಡಿ ಪಾಸುಗಳನ್ನು ಪಡೆಯಬಹುದು ಎಂದು ಕರಾರಸಾಸಂ, ಮಂಗಳೂರು, ವಿಭಾಗೀಯ ನಿಯಂತ್ರಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror