Advertisement
ಸುದ್ದಿಗಳು

ಗುಂಬಜ್ ಮಾದರಿ ಬಸ್‌ ನಿಲ್ದಾಣ | ಸಂಸದ ಪ್ರತಾಪ್‌ ಸಿಂಹ್‌ ಎಚ್ಚರಿಕೆ ಬೆನ್ನಲ್ಲೆ ಬದಲಾಯ್ತು ವಿನ್ಯಾಸ |

Share

ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು, ಟಿಪ್ಪು ಪ್ರತಿಮೆ, ಶಾಲೆಗಳಿಗೆ ಕೇಸರಿ ಬಣ್ಣ ವಿವಾದದ ಬೆನ್ನಲ್ಲೇ ಮೈಸೂರಿನಲ್ಲಿ  ಇನ್ನೊಂದು ವಿವಾದ ಸೃಷ್ಟಿಯಾಗುವ ಬೆನ್ನಲ್ಲೇ ಶಮನ ಮಾಡಲಾಗಿದೆ. ಮೈಸೂರಿನಲ್ಲಿ ಮಸೀದಿ ಮಾದರಿಯ ಬಸ್ ಶೆಲ್ಟರ್ ಗಳ ನಿರ್ಮಾಣ ಹೊಸದೊಂದು ವಿವಾದವನ್ನು ಹುಟ್ಟು ಹಾಕಿತ್ತು. ಇದಕ್ಕೆ ಹಲವೆಡೆಯಿಂದ ವಿರೋಧ ವ್ಯಕ್ತವಾಗಿತ್ತು. ಸಂಸದ ಪ್ರತಾಪ್‌ ಸಿಂಹ್‌ ಇಂತಹ ನಿಲ್ದಾಣಗಳನ್ನು ಒಡೆದು ಹಾಕುವುದಾಗಿ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಬಸ್‌ ಶೆಲ್ಟರ್‌ ವಿನ್ಯಾಸ ಬದಲಾಗಿದೆ. ಹೀಗಾಗಿ ವಿವಾದವೊಂದು ತಣ್ಣಗಾಗಿದೆ.

ಮೈಸೂರಿನ ನಂಜನಗೂಡು ರಸ್ತೆಯಲ್ಲಿ ಹಲವೆಡೆಗಳಲ್ಲಿ ಮಸೀದಿ ಮಾದರಿಯ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗಿದ್ದು, ಸಂಸದ ಪ್ರತಾಪ್ ಸಿಂಹ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಟಿಪ್ಪು ಪ್ರತಿಮೆ ನಿರ್ಮಾಣ ವಿಚಾರಗಳ ಬೆನ್ನಲ್ಲೇ ಈಗ ಇಂಥದ್ದೊಂದು ಬೆಳವಣಿಗೆಗಳು ನಡೆಯುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದರು.ಈ ಬೆನ್ನಲ್ಲೇ ರಾತ್ರೋ ರಾತ್ರಿ ಬಸ್ ಶೆಲ್ಟರ್ ಮಾದರಿ ಬದಲಾಗಿದೆ.ಇದೀಗ ಬಸ್ ಶೆಲ್ಟರ್ ಗುಂಬಜ್ ಮೇಲೆ ಕಳಶ ಪ್ರತಿಷ್ಠಾಪನೆ ಮಾಡಲಾಗಿದೆ. ಶಾಸಕ ಎಸ್​ಎ ರಾಮದಾಸ್ ಕ್ಷೇತ್ರ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಬಸ್​ ನಿಲ್ದಾಣದ ಶೆಲ್ಟರ್​ನಲ್ಲಿ ಮೂರು ಗುಂಬಜ್‌ಗಳ ಮೇಲೆ ಕಳಸ ಮಾದರಿಯ ಆಕೃತಿ ನಿರ್ಮಾಣ ಮಾಡಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

4 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

10 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

14 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

18 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago