ಬೆಂಬಲ ಬೆಲೆಯಡಿಯಲ್ಲಿ ಕರ್ನಾಟಕದಿಂದ ಸುಮಾರು 16105 ಮೆಟ್ರಿಕ್ ಟನ್ ಹೆಸರುಕಾಳು ಖರೀದಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಕೇಂದ್ರ ಆಹಾರ ಸಾರ್ವಜನಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಪ್ರಲ್ಹಾದ್ ಜೋಶಿ, ಒಟ್ಟಾರೆಯಾಗಿ ಕೇಂದ್ರ ಸರ್ಕಾರ 38320 ಮೆಟ್ರಿಕ್ ಟನ್ ಖರೀದಿಸಲು ಒಪ್ಪಿಗೆ ನೀಡಿದೆ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಸಲಾಗುವ ಹೆಸರುಕಾಳುಗೆ ಎಫ್‌ಎಕ್ಯೂ ಗುಣಮಟ್ಟದ ಮಾನದಂಡದಲ್ಲಿ ಕೇಂದ್ರ ಸಂಬಂಧಿತ ಸಂಸ್ಥೆಗಳು ಖರೀದಿ ಪ್ರಕ್ರಿಯೆ ಆರಂಭಿಸಲಿವೆ ಎಂದು ಮಾಹಿತಿ ನೀಡಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel