ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ,ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಈಗಾಗಲೇ ಎತ್ತಿನಹೊಳೆ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಅರಣ್ಯ ಪ್ರದೇಶದ ಜಮೀನನ್ನು ಗುರುತಿಸಲಾಗಿದೆ. ಅದನ್ನು ಅಪ್ಲೋಡ್ ಮಾಡಿ ಕೆಲಸ ನಿರ್ವಹಿಸಲು ಸರ್ಕಾರಕ್ಕೆ ಹಸ್ತಾಂತರಿಸಬೇಕು. ಈ ಕುರಿತು ಮುಖ್ಯಮಂತ್ರಿಗಳೂ ಸಹ ಸಭೆ ನಡೆಸುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದು, ಎತ್ತಿನಹೊಳೆ ಯೋಜನೆ ಸಂಬಂಧ ಚರ್ಚೆ ನಡೆಸಿದ್ದು, 2025 ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು ಹರಿಸಲು ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಇದಕ್ಕೂ ಮೊದಲು ಎತ್ತಿನಹೊಳೆ ಯೋಜನೆ ಕುರಿತಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಗೃಹ ಸಚಿವ ಪರಮೇಶ್ವರ್ ಚರ್ಚೆ ನಡೆಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel