ನಿವೃತ್ತ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ್ ಭಾಸ್ಕರ್ ನೇತೃತ್ವದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ ಶುಕ್ರವಾರ ತನ್ನ ಎರಡನೇ ಮತ್ತು ಮೂರನೇ ವರದಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿದೆ.
ವರದಿಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಇಂಧನ, ಸಮಾಜ ಕಲ್ಯಾಣ, ಎಸ್.ಸಿ/ಎಸ್.ಟಿ ಕಲ್ಯಾಣ, ಹಿಂದುಳಿದ ವರ್ಗಗಳ ಅಭಿವೃದ್ಧಿ, ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ಗೃಹ ಇಲಾಖೆಗಳಿಗೆ ಸಂಬಂಧಿಸಿದೆ. ಒಟ್ಟು 1165 ಶಿಫಾರಸ್ಸುಗಳೊಂದಿಗೆ ಎರಡನೇ ಮತ್ತು ಮೂರನೇ ವರದಿಯನ್ನು ಸಲ್ಲಿಸಲಾಗಿದೆ. ವರದಿಯ ಪ್ರಮುಖ ಅಂಶಗಳ ಕುರಿತು ಸಂಕ್ಷಿಪ್ತವಾಗಿ ಮಾಹಿತಿ ಪಡೆದ ಮುಖ್ಯಮಂತ್ರಿ ಬೊಮ್ಮಾಯಿ ವರದಿಗಳ ಶಿಪಾರಸ್ಸುಗಳನ್ನು ಅಧ್ಯಯನ ಮಾಡುವುದಾಗಿ ತಿಳಿಸಿದ ಮುಖ್ಯ ಕಾರ್ಯದರ್ಶಿಯವರಿಗೆ ಕ್ರಮ ಕೈಗೊಳ್ಳಬಹುದಾದ ಶಿಪಾರಸುಗಳ ಅನುಷ್ಠಾನಕ್ಕೆ ಕ್ರಮಕೈಗೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಆಯೋಗದ ಮೊದಲ ವರದಿಯನ್ನು ಜುಲೈ 2021 ರಲ್ಲಿ ಸರ್ಕಾರಕ್ಕೆ ಸಲ್ಲಿಸಲಾಯಿತು, 3 ಇಲಾಖೆಗಳಿಗೆ ಒಟ್ಟು 856 ಶಿಪಾರಸುಗಳೊಂದಿಗೆ ಕಂದಾಯ, ಆಹಾರ ಮತ್ತು ನಾಗರಿಕ ಸರಬರಾಜುವಾಗಿದೆ. ಕರ್ನಾಟಕ ಆಡಳಿತ ಸುಧಾರಣಾ ಆಯೋಗ -2 ಅನ್ನು ಜನವರಿ 7-2021 ರ ಸರ್ಕಾರಿ ಆದೇಶದ ಮೂಲಕ ರಚಿಸಲಾಗಿದೆ ಮತ್ತು ಫೆಬ್ರವರಿ 11-2021 ರಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಮೂಲಗಳು ತಿಳಿಸಿದೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…