MIRROR FOCUS

ಲೋಕಸಭಾ ಚುನಾವಣೆಗೂ ಮುನ್ನವೇ ಸಿಎಎ ಜಾರಿ | ಮುನ್ಸೂಚನೆ ನೀಡಿದ ಗೃಹ ಸಚಿವ ಅಮಿತ್ ಶಾ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಲೋಕಸಭೆ ಚುನಾವಣೆಗೆ – 2024 (Loka sabha Election) ಇನ್ನೇನು ಕೆಲವೇ ತಿಂಗಳು ಬಾಕಿ ಇದೆ. ಇದೀಗ ಚುನಾವಣೆ  ಮುನ್ನ ಮತ್ತೊಮ್ಮೆ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA Act) ಅನುಷ್ಠಾನಗೊಳಿಸುವ ಬಗ್ಗೆ ಚರ್ಚೆ ಆರಂಭಗೊಂಡಿದ್ದು, ಈಗಾಗಲೇ ಈಶಾನ್ಯದ ಕೆಲವು ರಾಜ್ಯಗಳಲ್ಲಿ ಪ್ರತಿಭಟನೆ ಶುರುವಾಗಿದೆ. ಇದರ ಬೆನ್ನಲ್ಲೇ ಅಮಿತ್ ಶಾ (Amit Shah) ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಕೇಂದ್ರ ಗೃಹ(Home Minister) ಸಚಿವ ಅಮಿತ್ ಶಾ, ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನವೇ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಅಧಿಸೂಚನೆ ಹೊರಡಿಸಿ ಜಾರಿಗೊಳಿಸಲಾಗುವುದು ಎಂದು ಮಹತ್ವದ ಹೇಳಿಕೆ ನೀಡಿದ್ದಾರೆ.

Advertisement
Advertisement

2019ರ ಡಿಸೆಂಬರ್ ತಿಂಗಳಲ್ಲಿ ಸಂಸತ್ತು ಅಂಗೀಕರಿಸಿದ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಅಧಿಸೂಚನೆ ಹೊರಡಿಸಿ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದು, ಸಿಎಎ ಜಾರಿಗೊಳಿಸುವ ಭರವಸೆಯಿಂದ ಕಾಂಗ್ರೆಸ್ ಹಿಂದೆ ಸರಿಯುತ್ತಿದೆ ಎಂದು ಇದೇ ವೇಳೆ ಆರೋಪಿಸಿದ್ದಾರೆ. ಸಿಎಎ ಕಾಯ್ದೆ ಕಾಂಗ್ರೆಸ್ ಸರ್ಕಾರದ ಭರವಸೆಯಾಗಿತ್ತು ಎಂದಿರುವ ಅಮಿತ್ ಶಾ, ದೇಶ ವಿಭಜನೆಯಾದಾಗ ಮತ್ತು ಆ ದೇಶಗಳಲ್ಲಿ ಅಲ್ಪಸಂಖ್ಯಾತರು ಕಿರುಕುಳಕ್ಕೊಳಗಾದಾಗ, ನಿರಾಶ್ರಿತರಿಗೆ ಭಾರತದಲ್ಲಿ ಸ್ವಾಗತವಿದೆ ಮತ್ತು ಅವರಿಗೆ ಭಾರತೀಯ ಪೌರತ್ವವನ್ನು ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು ಎಂದು ಹೇಳಿದರು.

ಸಿಎಎ, ಪೌರತ್ವವನ್ನು ಒದಗಿಸಲು ತರಲಾಗಿದೆಯೇ ಹೊರತು ಯಾರ ಪೌರತ್ವವನ್ನು ಕಸಿದುಕೊಳ್ಳಲು ಅಲ್ಲ ಎಂದು ಒತ್ತಿ ಹೇಳಿದ ಅಮಿತ್ ಶಾ, ನಮ್ಮ ದೇಶದಲ್ಲಿ ಅಲ್ಪಸಂಖ್ಯಾತರು ಮತ್ತು ವಿಶೇಷವಾಗಿ ನಮ್ಮ ಮುಸ್ಲಿಂ ಸಮುದಾಯವನ್ನು ಪ್ರಚೋದಿಸಲಾಗುತ್ತಿದೆ. ಕಾಯಿದೆಯಲ್ಲಿ ಯಾವುದೇ ನಿಬಂಧನೆ ಇಲ್ಲದ ಕಾರಣ CAA ಯಾರ ಪೌರತ್ವವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಸಿಎಎ ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ನಿರಾಶ್ರಿತರಿಗೆ ಪೌರತ್ವವನ್ನು ನೀಡುವ ಕಾಯಿದೆ ಎಂದು ಹೇಳಿದರು.

2019 ರಲ್ಲಿ ಮೋದಿ ಸರ್ಕಾರವು ಪರಿಚಯಿಸಿದ ಸಿಎಎ ಕಾಯ್ದೆಯು, ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದು ಭಾರತಕ್ಕೆ ಆಗಮಿಸಿದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುವ ಗುರಿಯನ್ನು ಹೊಂದಿದೆ. ಏತನ್ಮಧ್ಯೆ, ಮುಂಬರುವ ಲೋಕಸಭಾ ಚುನಾವಣೆಯ ಕುರಿತು ಮಾತನಾಡಿದ ಶಾ, ಬಿಜೆಪಿ 370 ಮತ್ತು ಎನ್‌ಡಿಎ 400 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವ ಮೂಲಕ ನರೇಂದ್ರ ಮೋದಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು .

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮರ್ಕಂಜ ಪ್ರಶಾಂತ್ ಕೆ ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ 52 ನೇ ವಾರ್ಷಿಕ ಬಹುಮಾನ

ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ನಡೆದ ಕಲಾ ಸ್ಪರ್ಧೆಯಲ್ಲಿ ಸಂಸ್ಕೃತಿಯ ಚಲನೆ ಎನ್ನುವ ಕಲಾ…

33 seconds ago

ರಾಜ್ಯದಲ್ಲಿ 35 ಕೋವಿಡ್ ಸಕ್ರಿಯ ಪ್ರಕರಣ | ಜನರು ಆತಂಕ ಪಡುವ ಅಗತ್ಯವಿಲ್ಲ | ಸಚಿವ ದಿನೇಶ್ ಗುಂಡೂರಾವ್

ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…

7 hours ago

ಕೊಡಗು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ರೆಡ್‌-ಎಲ್ಲೋ ಎಲರ್ಟ್‌ |

ದಕ್ಷಿಣಕನ್ನಡ, ಉಡುಪಿ, ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದೆ.…

7 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ | ಇಂದಿನಿಂದಲೇ ಮುಂಗಾರು ಆರಂಭ | 8 ದಿನ ಮುಂಚಿತವಾಗಿ ಆರಂಭವಾದ ಮಳೆಗಾಲ |

ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…

13 hours ago

ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ

ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…

19 hours ago