Advertisement
ಸುದ್ದಿಗಳು

ಗಂಗಾ ಕಲ್ಯಾಣ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

Share

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮ ನಡೆಸುತ್ತಿರುವ ಗಂಗಾ ಕಲ್ಯಾಣ ಯೋಜನೆಯ ಸಂಪೂರ್ಣ ಸಹಾಯಧನವನ್ನು ಈ ಬಾರಿ ಕ್ರಿಶ್ಚಿಯನ್ ರೈತರಿಗೆ ನೀಡಲಾಗುತ್ತದೆ. ಈ ಯೋಜನೆಯಲ್ಲಿ ಬೋರ್‍ವೆಲ್ ಕೊರೆಯಿಸುವುದು, ಪಂಪ್‍ಸೆಟ್ ಅಳವಡಿಸುವುದು ಮತ್ತು ವಿದ್ಯುತ್ ಸಂಪರ್ಕ ಒದಗಿಸಲಾಗುತ್ತದೆ.

ಈ ಯೋಜನೆಯನ್ನು ಜಿಲ್ಲೆಗಳಿಗೆ ಅನುಸಾರವಾಗಿ ಸಹಾಯಧನವನ್ನು ನೀಡಲಾಗುತ್ತದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಿ ರೂ 4 ಲಕ್ಷ ಹಾಗೂ ಉಳಿದ ಎಲ್ಲ ಜಿಲ್ಲೆಗಳಿ ರೂ 3 ಲಕ್ಷ ನೀಡಲಾಗುತ್ತದೆ. ಈ ಯೋಜನೆಯನ್ನು ಪಡೆಯುವ ಪ್ರತಿಯೊಬ್ಬ ರೈತನ ಕುಟುಂಬದ ವಾರ್ಷಿಕ ಆದಾಯ ರೂ 6 ಲಕ್ಷಕ್ಕಿಂತ ಕಡಿಮೆ ಇರಬೇಕು. ಹಾಗೂ ಸ್ವಂತ ಜಮೀನುವನ್ನು ಹೊಂದಿರಬೇಕು. ಅಂದರೆ, ಸಾಮಾನ್ಯವಾಗಿ ಜಿಲ್ಲೆಗಳಲ್ಲಿ ಕನಿಷ್ಠ 1.20 ಎಕರೆಯಿಂದ 5 ಎಕರೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆಯನ್ನು ಹೊಂದಿರಲೇ ಬೇಕು.  ಈ ಯೋಜನೆಗೆ ಬೇಕಾಗಿರುವ ಅಗತ್ಯ ದಾಖಲೆಗಳು:

  • ಆಧಾರ್ ಕಾರ್ಡ್ ಪ್ರತಿ
  • ಕ್ರಿಶ್ಚಿಯನ್ ಸಮುದಾಯದ ಪ್ರಮಾಣಪತ್ರ
  • ಆದಾಯ ಪ್ರಮಾಣಪತ್ರ
  • ಸಣ್ಣ/ಅತಿ ಸಣ್ಣ ರೈತ ಪ್ರಮಾಣಪತ್ರ
  • ಇತ್ತೀಚಿನ ಆರ್‍ಟಿಸಿ ಪ್ರತಿ
  • ಭೂ ಕಂದಾಯ ರಸೀದಿ
  • ಪಾಸ್‍ಪೋರ್ಟ್ ಗಾತ್ರದ ಫೋಟೋ
  • ಸ್ವಯಂ ಫೋಷಣಾ ಪತ್ರ
  • ಬ್ಯಾಂಕ್ ಪಾಸ್‍ಬುಕ್

ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ:   ಆಯಾ ಜಿಲ್ಲೆಯ ಕೆಎಮ್‍ಡಿಸಿ ಕಚೇರಿಗೆ ಭೇಟಿ ನೀಡಿ ದಾಖಲೆಗಳನ್ನು ನೀಡಬೇಕು ಅಥವಾ ತಹಶೀಲ್ದಾರ್ ಕಚೇರಿ/ ತಾಲೂಕು ಕ್ರಿಶ್ಚಿಯನ್ ಅಲ್ಪಸಂಖ್ಯಾತ ಅಭಿವೃದ್ಧಿ ಅಧಿಕಾರಿಗಳ ಮೂಲಕವೂ ಸಲ್ಲಿಸಬಹುದು. ಯಾವುದೇ ಆನ್‍ಲೈನ್ ವ್ಯವಸ್ಥೆಗಳಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

4 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

1 day ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

1 day ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

1 day ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

1 day ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago