ದಿನದಿಂದ ದಿನಕ್ಕೆ ಕಾವೇರಿ ಕಾವು ಕಾವೇರುತ್ತಿದೆ. ರೈತರು, ಕನ್ನಡ ಸಿನಿಮಾ ರಂಗದ ನಟರು, ಸಾಮಾಜಿಕ ಹೋರಾಟಗಾರರು ಸುಪ್ರೀಂ ಕೋರ್ಟ್ ಆದೇಶದ ಮೇಲೆ ಬೇಸರಗೊಂಡಿದ್ದಾರೆ. ಕಾವೇರಿಗಾಗಿ ನಾಳೆ ಮಂಡ್ಯ ಬಂದ್‌ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ ಅಂತ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಮಂಡ್ಯ ಬಂದ್ ವಿಚಾರವಾಗಿ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಕೆಆರ್‌ಎಸ್, ಮಂಡ್ಯ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆನಿಯೋಜನೆ ಮಾಡಲಾಗಿದೆ. ಹೆಚ್ಚುವರಿ ಕೆಎಸ್‌ಆರ್‌ಪಿ, ಆರ್‌ಎಎಫ್ ತುಕಡಿಯನ್ನ ನಿಯೋಜನೆ ಮಾಡಲಾಗಿದೆ. ಪ್ರತಿಭಟನೆ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದೇವೆ. ಪ್ರತಿಭಟನೆ ಮಾಡೂರು ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು. ಒಂದು ವೇಳೆ ಆ ರೀತಿ ಮಾಡಿದ್ರೆ ಕಾನೂನು ರೀತಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ಬಂದ್, ಪ್ರತಿಭಟನೆ ಮಾಡೋದು ಅವರ ಹಕ್ಕು. ಪ್ರತಿಭಟನೆ ಬಗ್ಗೆ ನಮಗೇನು ತಕರಾರು ಇಲ್ಲ. ರಾಜ್ಯದ ಹಿತ ಕಾಪಾಡಬೇಕು ನೀರು ಬಿಡಬಾರದು ಅಂತ ಹೇಳಿ ಸಂಘಟನೆಗಳು ಪ್ರತಿಭಟನೆ ಮಾಡ್ತಿದ್ದಾರೆ. ಯಾರು ಬೇಕಾದ್ರು ಪ್ರತಿಭಟನೆ ಮಾಡಬಹುದು. ಅದರಲ್ಲಿ ತಪ್ಪಿಲ್ಲ. ಆದರೆ ಯಾವುದೇ ರೀತಿಯಲ್ಲಿ ಸಾರ್ವಜನಿಕ ಆಸ್ತಿ ನಾಶ ಮಾಡೋದು, ಜನ ಸಮುದಾಯಕ್ಕೆ ತೊಂದರೆ ಮಾಡೋದು ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆ ಮೂಲಕ ಕಾನೂನು ಬಾಹಿರ ಚಟುವಟಿಕೆಗಳನ್ನ ಮಾಡಬಾರದು. ಒಂದು ವೇಳೆ ಅಂತಹ ಘಟನೆಗಳು ಕಂಡುಬಂದರೆ ಅದನ್ನ ನಿಯಂತ್ರಣ ಮಾಡಲು ಪೊಲೀಸ್ ಇಲಾಖೆ ಎಲ್ಲ ರೀತಿಯಲ್ಲೂ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ಸುಪ್ರೀಂ ತೀರ್ಪಿನ ಕುರಿತು ಪ್ರತಿಕ್ರಿಯಿಸಿದ ಅವರು, ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಬಗ್ಗೆ ಇವತ್ತಿನ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುತ್ತೇವೆ. ಸುಗ್ರಿವಾಜ್ಞೆ ತರೋ ವಿಚಾರದ ಬಗ್ಗೆಯೂ ಚರ್ಚೆ ನಡೆಯಬಹುದು. ಸಿಎಂ ಮತ್ತು ನೀರಾವರಿ ಸಚಿವರು ದೆಹಲಿಗೆ ಹೋಗಿ ಬಂದಿದ್ದಾರೆ. ಎಲ್ಲಾ ವಿಚಾರಗಳ ಬಗ್ಗೆ ಕ್ಯಾಬಿನೆಟ್‌ನಲ್ಲಿ ಬ್ರೀಫ್ ಮಾಡೋ ಸಾಧ್ಯತೆ ಇದೆ. ಇವತ್ತು ಕ್ಯಾಬಿನೆಟ್ ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದರು.
ಇವತ್ತು ಕೂಡಾ ನೀರಿನ ಪ್ರಮಾಣ ಕೆಆರ್‌ಎಸ್‌ನಲ್ಲಿ ಕಡಿಮೆ ಇದೆ. ಒಳ ಹರಿವು ಕಡಿಮೆ ಇದೆ. ನೀರಿನ ಮಟ್ಟ ಹೆಚ್ಚುತ್ತಿಲ್ಲ ನಮ್ಮಲ್ಲಿ ನೀರಿಲ್ಲ ಅಂತ ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡಿಕೊಡಲಾಗಿದೆ. ಆದರೂ ಸುಪ್ರೀಂ ಕೋರ್ಟ್ ಬೋರ್ಡ್ ಸೂಚನೆಯಂತೆ ನೀರು ಬಿಡಲು ಹೇಳಿದೆ. ಹೀಗಾಗಿ ಇವತ್ತಿನ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಿ ಚರ್ಚೆ ಬಳಿಕ ಯಾವ ತೀರ್ಮಾನ ಮಾಡೋದು ಅಂತ ನಿರ್ಧಾರ ಮಾಡಲಾಗುತ್ತದೆ ಎಂದರು.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…