ಅಡಿಕೆ ಆಮದು ಕಾರಣದಿಂದಲೇ ಅಡಿಕೆ ಮಾರುಕಟ್ಟೆಯಲ್ಲಿ ಅಸ್ಥಿರತೆ ಕಂಡುಬಂದಿದೆ ಎನ್ನುವುದು ಈಗಾಗಲೇ ಎಲ್ಲೆಡೆಯೂ ಚರ್ಚೆಯಾಗುತ್ತಿದೆ. ಈ ನಡುವೆಯೇ ರೈತರು ಹೋರಾಟ ಆರಂಭಿಸಿದ್ದಾರೆ. ಅಡಿಕೆ ಬೆಳೆಯುವ ಕರ್ನಾಟಕದ ವಿವಿಧ ಕಡೆ ಬೆಳೆಗಾರರು ಜಾಗೃತರಾದರೆ ಅಸ್ಸಂ ಸಹಿತ ಈಶಾನ್ಯ ರಾಜ್ಯಗಳಲ್ಲೂ ಈಗ ಅಡಿಕೆ ಆಮದು ವಿರುದ್ಧ ಬೆಳೆಗಾರರು ಹಾಗೂ ಸ್ಥಳೀಯ ಶಾಸಕರುಗಳು ಎಚ್ಚೆತ್ತುಕೊಂಡು ಹೋರಾಟಕ್ಕೆ ಇಳಿದಿದ್ದಾರೆ.
ಅಡಿಕೆ ಆಮದು ಮಾಡುತ್ತಿರುವುದರಿಂದ ದ.ಕ. ಜಿಲ್ಲೆಯಲ್ಲಿ ಅಡಿಕೆ ಬೆಲೆ ತೀವ್ರ ಕುಸಿದು ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಅಡಿಕೆ ಆಮದು ನಿಷೇಧಿಸುವುದು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಜಿಲ್ಲೆಯ ಎಲ್ಲ ರೈತ ಸಂಘಗಳ ಒಕ್ಕೂಟದ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು. ಟ್ರ್ಯಾಕ್ಟರ್‌ಗಳು ಹಾಗೂ ಇತರ ವಾಹನಗಳೊಂದಿಗೆ ಬೃಹತ್ ಪ್ರತಿಭಟನಾ ಜಾಥಾದೊಂದಿಗೆ ಹೋರಾಟ ನಡೆಯಿತು.
ದ.ಕ. ಜಿಲ್ಲೆಯಲ್ಲಿ ಕೆಲವು ವರ್ಷಗಳಿಂದ ಎಲೆಚುಕ್ಕಿ ರೋಗ, ಹಳದಿ ಎಲೆ ರೋಗ, ತೆಂಗಿನ ಬೆಲೆ ಕುಸಿತದಿಂದಾಗಿ ರೈತರು ಆತ್ಮಹತ್ಯೆಗೆ ಶರಣಾಗುವ ಪರಿಸ್ಥಿತಿಯಲ್ಲಿದ್ದಾರೆ. ಇದೀಗ ಅಡಿಕೆ ಆಮದಿನಿಂದ ಬೆಲೆ ಕುಸಿತ ಉಂಟಾಗಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ ಎಂದು ಹೋರಾಟಗಾರರು ಹೇಳಿದ್ದಾರೆ.
ಇದೇ ವೇಳೆ ಈಶಾನ್ಯ ರಾಜ್ಯಗಳ ಮೂಲಕವೂ ಅವ್ಯಾಹತವಾಗಿ ಅಡಿಕೆ ಕಳ್ಳಸಾಗಾಣಿಕೆಯಾಗುತ್ತಿರುವುದು ಅಲ್ಲಿನ ಅಡಿಕೆ ಬೆಳೆಗಾರರಿಗೂ ಸಮಸ್ಯೆಯಾಗುತ್ತಿದೆ. ಇದಕ್ಕಾಗಿ ಅಸ್ಸಾಂ ಸಹಿತ ವಿವಿಧ ಕಡೆಗಳಲ್ಲಿ ಕೃಷಿಕರು ಹೋರಾಟ ಆರಂಭಿಸಿದ್ದಾರೆ. ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಾಟ ಮತ್ತು ಈ ಕಾರಣದಿಂದ ಅಲ್ಲಿನ ರೈತರ ಮೇಲೆ ಹಲ್ಲೆ ನಡೆಸುತ್ತಿರುವ ವರದಿಗಳ ಹಿನ್ನೆಲೆಯಲ್ಲಿ ಹೋರಾಟ ಆರಂಭಗೊಂಡಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಅಭಿಯಾನ ಆರಂಭವಾಗಿದೆ. ಅಸ್ಸಾಂ ವಿಧಾನಸಭೆ ಅಧಿವೇಶನದಲ್ಲಿ ವಿಷಯವನ್ನು ಪ್ರಸ್ತಾಪಿಸಿದ ಶಾಸಕ ಮುಕುಲ್ ತೀವ್ರವಾಗಿ ಖಂಡಿಸಿದ್ದಾರೆ. ಇದೇ ರೀತಿ ಮುಂದುವರಿದರೆ ರಾಜ್ಯದ ರೈತರು ಸಚಿವಾಲಯದ ಮುಂದೆ ಅಡಿಕೆ ಸುರಿಯುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಹೇಳಿದ್ದಾರೆ. ಅಕ್ರಮ ಕಳ್ಳಸಾಗಾಣಿಕೆಯ ಕಾರಣದಿಂದ ಅಸ್ಸಾಂನ ಗುಡ್ಡಗಾಡು ಪ್ರದೇಶವಾದ ಗಾರೋ ಹಿಲ್ಸ್ ಪ್ರದೇಶದ ಬಹುತೇಕ ಎಲ್ಲಾ ಮಾರುಕಟ್ಟೆಗಳಲ್ಲಿ ಒಂದು ಚೀಲ ಅಡಿಕೆಗೆ 6000 ರೂ ಇದ್ದ ಬೆಲೆಯು ಈಗ 3000 ರೂ.ಗೆ ಇಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ನಡುವೆ ಅಕ್ರಮ ಅಡಿಕೆ ಆಮದು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ನಿಯೋಗವೊಂದು ಕೇಂದ್ರ ಸಚಿವರನ್ನು ಭೇಟಿಯಾಗಿ ಒತ್ತಾಯಿಸಿದೆ. ಅಡಿಕೆ ಆಮದು ತಡೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು, ಅಡಿಕೆ ಬೆಳೆಗಾರರನ್ನು ನಿರ್ಲಕ್ಷ್ಯ ಮಾಡುವುದಿಲ್ಲ ಎಂದು ಕೇಂದ್ರ ಗೃಹಖಾತೆ ರಾಜ್ಯ ಸಚಿವ ನಿತ್ಯಾನಂದ ಅವರು ಭರವಸೆ ನೀಡಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…
ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ. ಏಕೆಂದರೆ ಈಗ ಕರ್ಕಾಟಕ…
ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಕಲಜೀವಿಗಳ ಆಡುಂಬೊಲ ನಮ್ಮೀ ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…