ರಾಜ್ಯ ಸರಕಾರವು ಅಡಿಕೆ ಬೆಳೆಯ ಸರ್ವತೋಮುಖ ಅಭಿವೃದ್ಧಿಗಾಗಿ ರೂಪಿಸಿರುವ ಅಡಿಕೆ ಕಾರ್ಯಪಡೆ (ಅರೆಕಾ ಟಾಸ್ಕ್ ಫೋರ್ಸ್) ಯು ಅಡಿಕೆಯ ಭವಿಷ್ಯತ್ತಿಗಾಗಿ ಎಲ್ಲಾ ರೀತಿಯಲ್ಲೂ ಕಾರ್ಯಪ್ರವೃತ್ತವಾಗಿದ್ದು, ಅಡಿಕೆ ಮಾರುಕಟ್ಟೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಪಡೆಗೆ ಇದೀಗ ರಾಜ್ಯಸರಕಾರವು ರೂ.10 ಕೋಟಿಗಳ ಅನುದಾನವನ್ನು ಘೋಷಿಸಿದ್ದು ಇದಕ್ಕಾಗಿ ಸರಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಕ್ಯಾಂಪ್ಕೋ ಅಧ್ಯಕ್ಷ ಎಸ್ ಆರ್ ಸತೀಶ್ಚಂದ್ರ ಹೇಳಿದ್ದಾರೆ.
ಈ ಅನುದಾನದ ಮೂಲಕ ಕಾರ್ಯಪಡೆಯ ಕೆಲಸ ಕಾರ್ಯಗಳಿಗೆ ಇನ್ನಷ್ಟು ವೇಗವನ್ನು ನೀಡಲಿದೆ. ಈ ಅನುದಾನವು ಅಡಿಕೆಯ ಬಗೆಗಿನ ಕಾನೂನಾತ್ಮಕ ವ್ಯವಹಾರಗಳಿಗಾಗಿ ಮತ್ತು ಅಡಿಕೆಯ ಮೌಲ್ಯವರ್ಧನೆ ಸಂಬಂಧ ಸಂಶೋಧನೆಗಳನ್ನು ನಡೆಸುವುದಕ್ಕಾಗಿ ವಿನಿಯೋಗವಾಗಲಿದೆ. ಅಡಿಕೆ ಕೃಷಿಯ ಬಗ್ಗೆ ಒಲವಿರಿಸಿಕೊಂಡು ಮುತುವರ್ಜಿ ವಹಿಸಿ ಕಾರ್ಯಪಡೆಗೆ ಅನುದಾನವನ್ನೊದಗಿಸಿಕೊಟ್ಟ ಮಾನ್ಯ ಮುಖ್ಯಮಂತ್ರಿಗಳ ಮತ್ತು ರಾಜ್ಯ ಸರಕಾರದ ನಡೆಯು ಪ್ರಶಂಸನೀಯ. ಇದಕ್ಕಾಗಿ ಅಡಿಕೆ ಕೃಷಿಕರ ಪರವಾಗಿ ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕ್ಯಾಂಪ್ಕೋ ಅಭಿನಂದಿಸುತ್ತದೆ. ಅಲ್ಲದೆ ಈ ಅನುದಾನಕ್ಕಾಗಿ ಶ್ರಮಿಸಿದ ದಕ್ಷಿಣ ಕನ್ನಡದ ಸಂಸದರಾದ ನಳಿನ್ ಕುಮಾರ್ ಕಟೀಲ್ ಮತ್ತು ಅಡಿಕೆ ಬೆಳೆಯುವ ಪ್ರದೇಶದ ಎಲ್ಲ ಶಾಸಕರುಗಳಿಗೆ ಕೃತಜ್ಞತೆಗಳನ್ನು ಕ್ಯಾಂಪ್ಕೋ ಸಲ್ಲಿಸುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್ ಆರ್ ಸತೀಶ್ಚಂದ್ರ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…