ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಅಡಿಕೆಗೆ ಬಾಧಿಸಿರುವ ಹಳದಿರೋಗದ ಬಗ್ಗೆ ಸಂಶೋಧನೆಗಳನ್ನು ನಡೆಸಿ ಪರಿಹಾರವನ್ನು ಕಂಡುಕೊಳ್ಳುವುದರ ಜೊತೆಗೆ ಪರ್ಯಾಯ ಬೆಳೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ರೂ.25 ಕೋಟಿಗಳ ನಿಧಿ ಹಂಚಿಕೆಯನ್ನು ಘೋಷಿಸಿದ್ದಾರೆ. ರಾಜ್ಯಸರಕಾರದ ಈ ನಡೆಯನ್ನು ಪ್ರಶಂಸಿಸಿರುವ ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ಅವರು ಮುಖ್ಯಮಂತ್ರಿಗಳನ್ನು ಅಭಿನಂದಿಸಿದ್ದಾರೆ.
ಇತ್ತೀಚೆಗೆ ಹಳದಿರೋಗದ ಪರಿಹಾರಕ್ಕಾಗಿ ಮತ್ತು ನೊಂದಿರುವ ರೈತರು ಹೊಸದಾಗಿ ಕೃಷಿಯಲ್ಲಿ ತೊಡಗಿಸಿಕೊಳ್ಳುವಲ್ಲಿ ನೆರವಾಗುವ ಸಲುವಾಗಿ ಪ್ಯಾಕೇಜ್ ಘೋಷಿಸುವಂತೆ ತಾವು ಮಾಡಿರುವ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಮುಖ್ಯಮಂತ್ರಿಗಳು ಇದೀಗ ನುಡಿದಂತೆ ನಡೆದು, ರಾಜ್ಯ ಮುಂಗಡ ಪತ್ರದಲ್ಲಿ ಹಳದಿರೋಗ ಪರಿಹಾರಕ್ಕಾಗಿ ಪ್ಯಾಕೇಜ್ ಘೋಷಣೆ ಮಾಡಿದ್ದಕ್ಕಾಗಿ ಹರ್ಷ ವ್ಯಕ್ತಪಡಿಸಿದ್ದಾರೆ.
ಘೋಷಿತ ಅನುದಾನವು ಹಳದಿರೋಗದ ಪರಿಹಾರಕ್ಕಾಗಿ ನಡೆಸಲಾಗುವ ವೈಜ್ಞಾನಿಕ ಸಂಶೋಧನೆಗಳಿಗಾಗಿ ಮತ್ತು ರೋಗಬಾಧೆಯಿಂದ ತಮ್ಮಅಡಿಕೆ ತೋಟಗಳನ್ನು ಕಳೆದುಕೊಂಡಿರುವ ರೈತರು ಹೊಸದಾಗಿ ಕೃಷಿಯನ್ನುಆರಂಭಿಸುವಲ್ಲಿ ನೆರವಾಗಲಿದೆ. ಈಗಾಗಲೇ ದ.ಕ.ಜಿಲ್ಲೆಯ ಸುಳ್ಯ, ಕೊಡಗು ಜಿಲ್ಲೆಯ ಮಡಿಕೇರಿ, ಶಿವಮೊಗ್ಗ ಜಿಲ್ಲೆಯ ಶೃಂಗೇರಿ, ಕೊಪ್ಪ ತಾಲೂಕುಗಳಲ್ಲಿ ಹಳದಿರೋಗವು ಅಡಿಕೆ ತೋಟಗಳಲ್ಲಿ ವ್ಯಾಪಿಸಿದ್ದು, ಆದಾಯ ನಷ್ಟ ಅನುಭವಿಸಿರುವ ರೈತರು ನೋವಿನಿಂದ ಹೊರಬಂದು ತಮ್ಮತೋಟಗಳಲ್ಲಿ ಪರ್ಯಾಯ ಬೆಳೆಗಳನ್ನು ಬೆಳೆಸುವತ್ತ ಗಮನಹರಿಸಬೇಕಾಗಿದೆ ಎಂದು ಕಿಶೋರ್ ಕುಮಾರ್ ಕೊಡ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…