ಅಡಿಕೆಯಿಂದ ಯಾವುದೇ ಹಾನಿ ಇಲ್ಲ | ಬೆಳೆಗಾರರ ಪರವಾಗಿ ನಿಂತ ಕ್ಯಾಂಪ್ಕೋ | ಅಡಿಕೆಯ ಬಗ್ಗೆ ವೈಜ್ಞಾನಿಕ ಸಂಶೋಧನೆ ನಡೆಸುವಂತೆ ಸೂಚಿಸಲು ಪ್ರಧಾನಿಗಳಿಗೆ ಮನವಿ |

November 9, 2021
7:29 PM

ಯಾವುದೇ  ವೈಜ್ಞಾನಿಕ ಪುರಾವೆಗಳು ಇಲ್ಲದೆ, ಮಾನವನ ಆರೋಗ್ಯದ ಮೇಲೆ ಅಡಿಕೆಯ ಹಾನಿಕಾರಕ ಪರಿಣಾಮಗಳನ್ನು ಜಾರ್ಖಾಂಡ್  ಸಂಸದ ನಿಶಿಕಾಂತ್ ದುಬೆ ಅವರು  ಪಟ್ಟಿ ಮಾಡಿದ್ದಾರೆ. ಇದು ತಪ್ಪುದಾರಿಗೆಳೆಯುವ ಮಾತ್ರವಲ್ಲದೆ, ಅಡಿಕೆ ರೈತರ ಭಾವನೆಗಳಿಗೆ ಧಕ್ಕೆ ತಂದಿದೆ ಇಂತಹ ಪ್ರಯತ್ನವನ್ನು ಕ್ಯಾಂಪ್ಕೋ ಖಂಡಿಸುತ್ತದೆ ಹಾಗೂ ಅಡಿಕೆ ಬೆಳೆಗಾರರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಕ್ಯಾಂಪ್ಕೋ ತಿಳಿಸಿದೆ.

Advertisement
Advertisement
Advertisement
Advertisement

ಅಡಿಕೆಯು ಎಲ್ಲಾ ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಗಳಲ್ಲಿ ಮಹತ್ವದ ಸ್ಥಾನವನ್ನು ಪಡೆಯುತ್ತದೆ. ಚರಕ ಸಂಹಿತೆಯಷ್ಟು ಹಿಂದಿನ ಆಯುರ್ವೇದ ಔಷಧದಲ್ಲಿ ಸುದೀರ್ಘ ಇತಿಹಾಸವನ್ನು ಹೊಂದಿದೆ. ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಅಡಿಕೆ ಬೆಳೆಯುವ ದೇಶವಾಗಿದೆ.

Advertisement

ಅಡಿಕೆ ಮನುಷ್ಯರಿಗೆ ಮತ್ತು ಜಾನುವಾರುಗಳಿಗೆ ಬೇಕಾದ ಔಷಧೀಯ ಗುಣಗಳನ್ನು ಹೊಂದಿರುವ ಒಂದು ಪದಾರ್ಥ. ಅಡಿಕೆ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ. ಮಧುಮೇಹ, ಕೊಲೆಸ್ಟರಾಲ್ಸೇ ರಿದಂತೆ ಹಲವಾರು ಅನುಪಯುಕ್ತ ಬ್ಯಾಕ್ಟೀರಿಯಾ, ಶಿಲೀಂಧ್ರಗಳು, ಪ್ರೊಟೊಜೋವನ್ ಪರಾವಲಂಬಿಗಳು ಇತ್ಯಾದಿಗಳನ್ನು ಸವಾರಿಸುವ ಶಕ್ತಿಯನ್ನುಹೊಂದಿದೆ. ಇದು ಎಚ್‌ ಐ ವಿ ವಿರುದ್ಧ ಹೋರಾಡುವ ಶಕ್ತಿಯನ್ನು ಹೊಂದಿದ್ದು, ಆಂಟಿಮಲೇರಿಯಲ್, ಆಂಥೆಲ್ಮಿಂಟಿಕ್ ಗುಣಲಕ್ಷಣಗಳನ್ನು ಸಹ ಹೊಂದಿದೆ. ನೋವನ್ನು ಕಡಿಮೆ ಮಾಡಲು ಮತ್ತು ಗಾಯಗಳು ಮತ್ತು ಹುಣ್ಣುಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಇದು ಉತ್ತಮ ಆಂಟಿ-ವೆನಮ್ ಗುಣಲಕ್ಷಣಗಳನ್ನು ಹೊಂದಿದೆ.

ಅಡಿಕೆ ಮಾತ್ರವೇ ಕ್ಯಾನ್ಸರ್ ಕಾರಕವಲ್ಲ ಎಂಬುದು  ಸಾಬೀತಾಗಿದೆ. ದೇಶೀಯ ಮತ್ತು ಅಂತರಾಷ್ಟ್ರೀಯ ಸಮರ್ಥ ಸಂಶೋಧನಾ ಸಂಸ್ಥೆಗಳು ನಡೆಸಿದ ಇತ್ತೀಚಿನ ಸಂಶೋಧನೆಗಳು ಸಕಾರಾತ್ಮಕ ಫಲಿತಾಂಶಗಳನ್ನು ಸಾಬೀತುಪಡಿಸಿವೆ. 1974 ರಲ್ಲಿ, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳು ಅಡಿಕೆಯು ಕ್ಯಾನ್ಸರ್  ಗುಣಪಡಿಸುತ್ತದೆ ಎಂದು ವರದಿ ಮಾಡಿದ್ದಾರೆ. ಅಮೇರಿಕಾ, ಅಟ್ಲಾಂಟಾ ಎಮೋರಿ ವಿಶ್ವವಿದ್ಯಾಲಯದ ವಿನ್ಶಿಪ್ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನ ಪ್ರಖ್ಯಾತ ವಿಜ್ಞಾನಿಗಳ ಗುಂಪಿನಿಂದಲೂ ಇದನ್ನು ದೃಢೀಕರಿಸಲಾಗಿದೆ. ಚೀನಾದಲ್ಲಿ, ಈಗಾಗಲೇ ಅಡಿಕೆ ಬಳಸಿ 30 ಕ್ಕೂ ಹೆಚ್ಚು ಔಷಧಗಳನ್ನು ತಯಾರಿಸಲಾಗಿದೆ ಮತ್ತು ‘ಮೆಟೀರಿಯಾ ಮೆಡಿಕಾ’ ದಲ್ಲಿ ವರದಿ ಮಾಡಿದಂತೆ ಈಗಲೂ ಅಭ್ಯಾಸ ಮಾಡಲಾಗುತ್ತಿದೆ. ಆ ಮಟ್ಟಿಗೆ CAMPCO ಈಗಾಗಲೇ ಸಂಶೋಧನೆಯ ಕಾರ್ಯಗಳಿಗೆ ಕ್ರಮಗಳನ್ನು ಪ್ರಾರಂಭಿಸಿದೆ ಮತ್ತು ಅಂತರರಾಷ್ಟ್ರೀಯ ಖ್ಯಾತಿಯನ್ನು ಹೊಂದಿರುವ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳಿಗೆ ಅದನ್ನು ಮಂಜೂರು ಮಾಡಿದೆ.

Advertisement

ಆಹಾರ ಕಲಬೆರಕೆ ತಡೆ ಕಾಯ್ದೆಯ ಸೆಕ್ಷನ್-2(v) ರ ಅರ್ಥದಲ್ಲಿ ಅರೆಕಾನಟ್ ಆಹಾರ ಎಂದು ಸುಪ್ರೀಂ ಕೋರ್ಟ್ ಕೂಡ ತೀರ್ಪು ನೀಡಿದೆ ಎಂದು ಕ್ಯಾಂಪ್ಕೋ ತಿಳಿಸಿದೆ.

ಕಿಶೋರ್‌ ಕುಮಾರ್‌ ಕೊಡ್ಗಿ

 

Advertisement

 

 

Advertisement

 

ಅಡಿಕೆ ಯಾವತ್ತೂ ಹಾನಿಕಾರಕವಲ್ಲ ಎಂಬುದು ಸಾಬೀತಾಗಿದ್ದರೂ ಮತ್ತೆ ಮತ್ತೆ ಅಡಿಕೆ ಮೇಲಿನ ಅಪವಾದದ ಹೇಳಿಕೆಗಳನ್ನು ಖಂಡಿಸಲಾಗುತ್ತದೆ ಎಂದು  ಕ್ಯಾಂಪ್ಕೋ ಅಧ್ಯಕ್ಷ ಎ ಕಿಶೋರ್‌ ಕುಮಾರ್‌ ಕೊಡ್ಗಿ ತಿಳಿಸಿದ್ದಾರೆ. ಅಡಿಕೆಯ  ಆರೋಗ್ಯ ಪ್ರಯೋಜನಗಳ ಕುರಿತು ಸಂಪೂರ್ಣ ವೈಜ್ಞಾನಿಕ ಸಂಶೋಧನೆಯನ್ನು ನಡೆಸಲು  ಸಂಬಂಧಿಸಿದ ಕಚೇರಿಗಳಿಗೆ ಸೂಚನೆಗಳನ್ನು ನೀಡುವಂತೆ ಮಾನ್ಯ ಪ್ರಧಾನ ಮಂತ್ರಿಗಳಿಗೆ ಕ್ಯಾಂಪ್ಕೋ ಮನವಿ ಮಾಡುತ್ತದೆ .
 –  ಎ ಕಿಶೋರ್‌ ಕುಮಾರ್‌ ಕೊಡ್ಗಿ, ಕ್ಯಾಂಪ್ಕೋ ಅಧ್ಯಕ್ಷ

Advertisement

 

Advertisement
ಕ್ಯಾಂಪ್ಕೋ ಯಾವತ್ತೂ ಅಡಿಕೆ ಬೆಳೆಗಾರರ ಪರವಾಗಿ ನಿಲ್ಲುತ್ತದೆ, ದೇಶೀಯ ಹಿತಾಸಕ್ತಿ ಕಾಪಾಡುವಲ್ಲಿ  ಕ್ಯಾಂಪ್ಕೋ ದೃಢವಾಗಿ ನಿಲ್ಲುತ್ತದೆ ಎಂದು ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ. ಕೃಷ್ಣ ಕುಮಾರ್ ತಿಳಿಸಿದ್ದಾರೆ.

 

ಅಖಿಲಭಾರತ ಅಡಿಕೆ ಬೆಳೆಗಾರರ ಸಂಘವು ಸಂಸದ ನಿಶಿಕಾಂತ್‌ ದುಬೆ ಅವರ ನಿಲುವನ್ನು ಖಂಡಿಸಿ ಟ್ವೀಟ್‌ ಮಾಡಿದೆ.

Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು | ನೂರಾರು ಎಕರೆ ಅರಣ್ಯ ನಾಶ | ಬೆಂಕಿ ನಂದಿಸಲು ಅರಣ್ಯ ಇಲಾಖೆ ಪ್ರಯತ್ನ |
January 26, 2025
7:35 AM
by: The Rural Mirror ಸುದ್ದಿಜಾಲ
ವಿದೇಶದಿಂದ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | ಡಿಎಂಕೆ ಕೌನ್ಸಿಲರ್ ವಶಕ್ಕೆ ಪಡೆದ ಡಿಆರ್‌ಐ
January 26, 2025
7:14 AM
by: The Rural Mirror ಸುದ್ದಿಜಾಲ
ಜ.26 | ಸಾರಡ್ಕದಲ್ಲಿ ಕೃಷಿ ಹಬ್ಬ | ವಿವಿಧ ಗೋಷ್ಠಿಗಳು |
January 25, 2025
5:01 PM
by: ದ ರೂರಲ್ ಮಿರರ್.ಕಾಂ
ಭಾರತಕ್ಕೆ ಹುರಿದ ಅಡಿಕೆ ಆಮದು | ತಕ್ಷಣವೇ ಕ್ರಮ ಕೈಗೊಳ್ಳಲು ಕ್ಯಾಂಪ್ಕೊ ಒತ್ತಾಯ|
January 25, 2025
10:39 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror