ಅಡಿಕೆ ರೋಗದ ಅಧ್ಯಯನಕ್ಕೆ ಸಮಿತಿ ರಚನೆ ಮಾಡಿದ ಕೇಂದ್ರ ಸರ್ಕಾರ | ಕ್ಯಾಂಪ್ಕೋ ಶ್ಲಾಘನೆ |

Advertisement
Advertisement

ಅಡಿಕೆಯ ಹಳದಿ ಎಲೆರೋಗ ಮತ್ತು ಇತ್ತೀಚೆಗಿನ ಎಲೆಚುಕ್ಕಿ ರೋಗ ಸೇರಿದಂತೆ ಅಡಿಕೆಯ ವಿವಿಧ ರೋಗಗಳ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ತಜ್ಞರ ಸಮಿತಿಯನ್ನು ರಚಿಸಿದ್ದಾರೆ. ಸಮಿತಿಯು ವೈಜ್ಞಾನಿಕ ಸಂಶೋಧನೆಯನ್ನು ನಡೆಸಿ ಪರಿಹಾರ ಕಂಡು ಹಿಡಿದು ವರದಿ ಸಲ್ಲಿಸಲು ಸೂಚಿಸಲಾಗಿದೆ, ಸಚಿವರ ಕ್ರಮಕ್ಕೆ ಕ್ಯಾಂಪ್ಕೊ ಸಂತಸಪಟ್ಟಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Advertisement

ಕಿಶೋರ್‌ ಕುಮಾರ್‌ ಕೊಡ್ಗಿ

ಅಡಿಕೆ ಬೆಳೆಯನ್ನು ನಾಶ ಮಾಡಿ ರೈತರ ಬದುಕನ್ನು ಸಂಕಷ್ಟಕ್ಕೆ ತಳ್ಳಿದೆ. ಇದರಿಂದ ಅಡಿಕೆ ಕೃಷಿಕ ಕಂಗಾಲಾಗಿ ಪರಿಹಾರವಿಲ್ಲದೆ ಪರಿತಪಿಸುವಂತಾಗಿದೆ. ಸಂಕಷ್ಟದಿಂದ ಕಂಗಾಲಾಗಿರುವ ರೈತರ ಸಮಸ್ಯೆಗೆ ಕೇಂದ್ರ ಸರ್ಕಾರ ಸ್ಪಂದನೆ ನೀಡಿದೆ. ಸಚಿವರುಗಳ ಈ ಕ್ರಮದಿಂದ ಅಡಿಕೆ ಬೆಳೆಗಾರರ ಸಮಸ್ಯೆಗೆ ಪರಿಹಾರ ಸಿಗುವ ಆಶಾಕಿರಣ ಮೂಡಿದೆ. ಇದರಿಂದ ಕಂಗಾಲಾಗಿರುವ ಲಕ್ಷಾಂತರ ಕೃಷಿಕರು ನಿಟ್ಟುಸಿರು ಬಿಡುವಂತಾಗಿದೆ. ಕೇಂದ್ರ ಸರ್ಕಾರದ ಸಕರಾತ್ಮಕ ಸ್ಪಂದನೆಗೆ ಕ್ಯಾಂಪ್ಕೊ ಆಡಳಿತ ಮಂಡಳಿ ಎಲ್ಲಾ ಅಡಿಕೆ ಬೆಳೆಗಾರರ ಪರವಾಗಿ ಕೆಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತದೆ ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಅಡಿಕೆ ರೋಗದ ಅಧ್ಯಯನಕ್ಕೆ ಸಮಿತಿ ರಚನೆ ಮಾಡಿದ ಕೇಂದ್ರ ಸರ್ಕಾರ | ಕ್ಯಾಂಪ್ಕೋ ಶ್ಲಾಘನೆ |"

Leave a comment

Your email address will not be published.


*