ಅಡಿಕೆಯ ಹಳದಿ ಎಲೆರೋಗ ಮತ್ತು ಇತ್ತೀಚೆಗಿನ ಎಲೆಚುಕ್ಕಿ ರೋಗ ಸೇರಿದಂತೆ ಅಡಿಕೆಯ ವಿವಿಧ ರೋಗಗಳ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ತಜ್ಞರ ಸಮಿತಿಯನ್ನು ರಚಿಸಿದ್ದಾರೆ. ಸಮಿತಿಯು ವೈಜ್ಞಾನಿಕ ಸಂಶೋಧನೆಯನ್ನು ನಡೆಸಿ ಪರಿಹಾರ ಕಂಡು ಹಿಡಿದು ವರದಿ ಸಲ್ಲಿಸಲು ಸೂಚಿಸಲಾಗಿದೆ, ಸಚಿವರ ಕ್ರಮಕ್ಕೆ ಕ್ಯಾಂಪ್ಕೊ ಸಂತಸಪಟ್ಟಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ ಬೆಳೆಯನ್ನು ನಾಶ ಮಾಡಿ ರೈತರ ಬದುಕನ್ನು ಸಂಕಷ್ಟಕ್ಕೆ ತಳ್ಳಿದೆ. ಇದರಿಂದ ಅಡಿಕೆ ಕೃಷಿಕ ಕಂಗಾಲಾಗಿ ಪರಿಹಾರವಿಲ್ಲದೆ ಪರಿತಪಿಸುವಂತಾಗಿದೆ. ಸಂಕಷ್ಟದಿಂದ ಕಂಗಾಲಾಗಿರುವ ರೈತರ ಸಮಸ್ಯೆಗೆ ಕೇಂದ್ರ ಸರ್ಕಾರ ಸ್ಪಂದನೆ ನೀಡಿದೆ. ಸಚಿವರುಗಳ ಈ ಕ್ರಮದಿಂದ ಅಡಿಕೆ ಬೆಳೆಗಾರರ ಸಮಸ್ಯೆಗೆ ಪರಿಹಾರ ಸಿಗುವ ಆಶಾಕಿರಣ ಮೂಡಿದೆ. ಇದರಿಂದ ಕಂಗಾಲಾಗಿರುವ ಲಕ್ಷಾಂತರ ಕೃಷಿಕರು ನಿಟ್ಟುಸಿರು ಬಿಡುವಂತಾಗಿದೆ. ಕೇಂದ್ರ ಸರ್ಕಾರದ ಸಕರಾತ್ಮಕ ಸ್ಪಂದನೆಗೆ ಕ್ಯಾಂಪ್ಕೊ ಆಡಳಿತ ಮಂಡಳಿ ಎಲ್ಲಾ ಅಡಿಕೆ ಬೆಳೆಗಾರರ ಪರವಾಗಿ ಕೆಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತದೆ ಎಂದು ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…