ಕ್ಯಾಂಪ್ಕೋ ಮಹಾಸಭೆ ಶನಿವಾರ ಮಂಗಳೂರಿನ ಸಂಘನಿಕೇತನದಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕ್ಯಾಂಪ್ಕೋ ಈ ಬಾರಿ 2,778.39 ಕೋಟಿ ರೂಪಾಯಿ ವ್ಯವಹಾರ ನಡೆಸಿ, 63.60 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ. ಶೇ.15 ಡಿವಿಡೆಂಡ್ ಘೋಷಣೆ ಮಾಡಲಾಯಿತು. ಇದರ ಜೊತೆಗೆ 7,500 ಕೆಜಿ ಮಿತಿಗೆ ಒಳಪಟ್ಟು ಕಿಲೋಗೆ 1 ರೂಪಾಯಿ ಪ್ರೋತ್ಸಾಹಧನ, ಕೊಕೋ ಬೀಜ ಖರೀದಿ ಮೇಲೂ ಪ್ರೋತ್ಸಾಹಧನ ನೀಡಲು ತೀರ್ಮಾನಿಸಲಾಗಿದೆ ಎಂದು ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದರು.
ಕಳೆದ ಬಾರಿ 51,784.38 ಮೆಟ್ರಿಕ್ ಟನ್ ಅಡಿಕೆ ಕ್ಯಾಂಪ್ಕೋ ಖರೀದಿ ಮಾಡಿದೆ. ಇದರಲ್ಲಿ 17,888.69 ಮೆಟ್ರಿಕ್ ಟನ್ಮಹಾಸಭೆಯಲ್ಲಿ ಕ್ಯಾಂಪ್ಕೋ ನೂತನ ಉತ್ಪನ್ನಗಳಾದ ಹೊಸ ಚಾಕಲೇಟ್, ಹೊಸ ರೂಪದ ಸುಪಾರಿ ಸೌಗಂಧ್ ಹಾಗೂ ಕಲ್ಪ ಹೆಸರಿನ ತೆಂಗಿನ ಎಣ್ಣೆಯನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರುಗಳಾದ ನ.ಸೀತಾರಾಮ ಮತ್ತು ಹಾಗೂ ಗೋಪಾಲ ಚೆಟ್ಟಿಯಾರ್ ಉತ್ಪನ್ನವನ್ನು ಬಿಡುಗಡೆಗೊಳಿಸಿದರು.
ಉಪಾಧ್ಯಕ್ಷ ಶಂಕರನಾರಾಯಣ ಭಟ್ ಕೆ., ನಿರ್ದೇಶಕರಾದ ಎಸ್.ಆರ್.ಸತೀಶ್ಚಂದ್ರ, ದಯಾನಂದ ಹೆಗ್ಡೆ, ಕೃಷ್ಣಪ್ರಸಾದ್ ಮಡ್ತಿಲ,
ಶಂಭುಲಿಂಗ ಜಿ.ಹೆಗ್ಡೆ, ಕೆ.ಬಾಲಕೃಷ್ಣ ರೈ, ಜಯರಾಮ ಸರಳಾಯ, ಪದ್ಮರಾಜ್ ಪಟ್ಟಾಜೆ, ಎಂ.ಮಹೇಶ್ ಚೌಟ, ರಾಘವೇಂದ್ರ ಭಟ್, ಜಯಪ್ರಕಾಶ್ ನಾರಾಯಣ, ರಾಧಾಕೃಷ್ಣ, ಸತ್ಯನಾರಾಯಣ ಪ್ರಸಾದ್, ಸುರೇಶ್ ಕುಮಾರ್ ಶೆಟ್ಟಿ, ರಾಘವೇಂದ್ರ ಎಚ್.ಎಂ., ವ್ಯವಸ್ಥಾಪಕ ನಿರ್ದೇಶಕ ಕೃಷ್ಣಕುಮಾರ್ ಇದ್ದರು.
ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…