ಕೃಷಿಕರ ಸಂಸ್ಥೆ ಕ್ಯಾಂಪ್ಕೋದ 47 ನೇ ಮಹಾಸಭೆ ಸಂಸ್ಥೆಯ ಅಧ್ಯಕ್ಷ ಕಿಶೋಕ್ ಕುಮಾರ್ ಕೊಡ್ಗಿ ಅಧ್ಯಕ್ಷತೆಯಲ್ಲಿ ಮಂಗಳೂರಿನ ಸಂಘನಿಕೇತನದಲ್ಲಿ ನಡೆಯಿತು. ಈ ಸಂದರ್ಭ ಶೇ.15 ಡಿವಿಡೆಂಡ್ ಹಾಗೂ ಸದಸ್ಯರಿಗೆ ಶೇ.1 ಪ್ರೋತ್ಸಾಹ ಧನವನ್ನು ವಿತರಣೆ ಮಾಡುವುದಾಗಿ ಅಧ್ಯಕ್ಷರು ಘೋಷಣೆ ಮಾಡಿದರು.
ಸಂಸ್ಥೆಯು ಈ ಬಾರಿ 100 ಕೋಟಿಗೂ ಮಿಕ್ಕಿದ ಲಾಭವನ್ನು ಹೊಂದಿದ್ದು ರೈತಪರವಾದ ಮತ್ತಷ್ಟು ಹೆಜ್ಜೆಗಳನ್ನು ಇರಿಸುವ ಬಗ್ಗೆ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು. ಸಂಸ್ಥೆಯು ಈ ಬಾರಿ ಅಡಿಕೆ ಧಾರಣೆ ಸ್ಥಿರತೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದು ಮುಂದಿನ ದಿನಗಳಲ್ಲೂ ಅಡಿಕೆ ಧಾರಣೆ ಇಳಿಕೆಯಾಗದಂತೆ ಪ್ರಯತ್ನ ಮಾಡುವುದಾಗಿ ಹೇಳಿದರು. ಕಾವು ಪ್ರದೇಶದಲ್ಲಿ ಚಾಕೋಲೇಟ್ ಪಾರ್ಕ್ ರಚನೆ ಮಾಡುವ ಪ್ರಸ್ತಾಪ ಇದ್ದು , ಅಡಿಕೆ ಬಗೆಗಿನ ಸಂಶೋಧನೆ, ಅಡಿಕೆ ಹಳದಿ ಎಲೆ ರೋಗ, ಅಡಿಕೆ ಆಮದು ಸ್ಥಗಿತ ಸಹಿತ ವಿವಿಧ ಯೋಜನೆಗಳ ಬಗ್ಗೆ ಪ್ರಕಟಿಸಿದರು. ಈ ಸಂದರ್ಭ ಸದಸ್ಯರುವ ಸಂಸ್ಥೆಯ ಹಿತದೃಷ್ಟಿಯಿಂದ ಚರ್ಚೆಯಲ್ಲಿ ಭಾಗವಹಿಸಿದರು.
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…
ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…